ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಚಾರಿತ್ರಿಕ ಕಂಬಳ ವೀಕ್ಷಿಸಿ ಮಗಳೂರಿಗೆ ಮರಳುತ್ತಿದ್ದ ಯುವಕರು ಭೀಕರ ಅಪಘಾತದಲ್ಲಿ ಸಾವನ್ನಾಪಿದ್ದಾರೆ. ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ಬೋರ್ ವೆಲ್ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬಜ್ಪೆ ಮೂಲದ ಕಿಶೋರ್ ಶೆಟ್ಟಿ (35) ಮತ್ತು ಫಿಲೀಪ್ ಮೇರಿ ಲೋಬೋ (34) ಎಂದು ಗುರುತಿಸಲಾಗಿದೆ. ನಿತೀಶ್ ಭಡಾರಿ (35), ಪ್ರೀತಿ ಲೋಬೋ (29) ಮತ್ತು ಹರೀಶ್ (62) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರು ಅದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಬೆಂಗಳೂರು ಕಂಬಳ’ವನ್ನು ವೀಕ್ಷಿಸಿ ಮಂಗಳೂರಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ತಡ ರಾತ್ರಿ 1:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿರುವ ಕುಣಿಗಲ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.