ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ ‘ಡೆವಿಲ್’ ಚಿತ್ರದ ಹೊಸ ಹಾಡು

ಬೆಂಗಳೂರು: ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಡೆವಿಲ್’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರತಂಡ ಇದೀಗ ಹಾಡುಗಳ ಮೂಲಕ ಪ್ರಚಾರ ಕಾರ್ಯವನ್ನು ತೀವ್ರಗೊಳಿಸಿದ್ದು, ಹೊಸ ಹಾಡೊಂದು ಬಿಡುಗಡೆಯಾದ ಕ್ಷಣದಿಂದಲೇ ಅಭಿಮಾನಿಗಳ ಮೆಚ್ಚುಗೆ ಗಳಿಸಿದೆ.

‘ಒಂದೆ ಒಂದು ಸಲ’ ಎಂಬ ಶೀರ್ಷಿಕೆಯ ಸುಮಧುರ ಹಾಡು ಸರಿಗಮಪ ಸಂಸ್ಥೆಯ ಮೂಲಕ ಬಿಡುಗಡೆಯಾಗಿದ್ದು, ಯೂಟ್ಯೂಬ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಸಂಪಾದಿಸಿದೆ.

ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದು, ಕಪಿಲ್ ಕಪಿಲನ್ ಮತ್ತು ಚಿನ್ಮಯಿ ಶ್ರೀಪಾದ ಕಂಠ ನೀಡಿದ್ದು, ಸಂಗೀತ ಸಂಯೋಜನೆಗೆ ಅಜನೀಶ್ ಲೋಕನಾಥ್ ಸಹಕರಿಸಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದು, ದರ್ಶನ್ ಮತ್ತು ರಚನಾ ರೈ ಹಾಡಿಗೆ ನೃತ್ಯ ಪ್ರದರ್ಶನ ನೀಡಿದ್ದಾರೆ.

ಚಿತ್ರವನ್ನು ಪ್ರಕಾಶ್ ವೀರ್ ನಿರ್ದೇಶಿಸುತ್ತಿದ್ದು, ವಿಜಯಲಕ್ಷ್ಮಿ ದರ್ಶನ್ ಸೇರಿದಂತೆ ತಂಡದವರು ಪ್ರಚಾರ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಚಿತ್ರದಲ್ಲಿನ ಪ್ರತಿ ಹಾಡು ಕ್ರಮವಾಗಿ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ‘ಡೆವಿಲ್’ ಕುರಿತ ನಿರೀಕ್ಷೆ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

Related posts