ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುತ್ತ ಇದೀಗ ಅನುಮಾನಗಳ ಹುತ್ತ ಬೆಳೆದಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಯಾರೋ ಕೊಲೆ ಮಾಡಿದ್ದಾರೆ’ ಎಂದು ಅವರ ಸೋದರ ಮಾವ ಅನುಮಾನ ವ್ಯಕ್ತಪಡಿಸಿದ್ದಾರೆ.
ನಟ ಸುಶಾಂತ್ ಸಾವಿನ ಬಗ್ಗೆ ಅನುಮಾನವಿದ್ದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಅವರ ಮಾವ ಒ.ಪಿ.ಸಿಂಗ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ.. ನಟ ಸುಶಾಂತ್ ಕುಟುಂಬದಲ್ಲಿ ಮತ್ತೊಬ್ಬರು ನಿಧನ
ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮುಂಬಯಿಯಲ್ಲಿ ಭಾನುವಾರದಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸುಶಾಂತ್ ಸಾವಿನ ಕುರಿತು ಪಟ್ನಾದಲ್ಲಿನ ಅವರ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಪ್ರಕರಣದ ಕುರಿತು ಹೆಚ್ಚಿನ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ.. ಮದುವೆ ಸಡಗರದಲ್ಲಿ ನಟಿ ಶುಭ ಪೂಂಜಾ; ವರ ಯಾರು ಗೊತ್ತಾ?