ಬೆಂಗಳೂರು: ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ವಿಧಿವಶರಾಗಿದ್ದಾರೆ. ವಿಜಯಾ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಬ್ಯಾಂಕಾಕ್‌ಗೆ ತೆರಳಿದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಸ್ಪಂದನಾ ಅವರು, ನಟಿಯಾಗಿ, ಸಿನಿಮಾ ನಿರ್ಮಾಣ ಮಾಡಿ ಗಮನಸೆಳೆದಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿ ಸ್ಪಂದನಾ ಅವರು 16 ವರ್ಷಗಳ ಹಿಙದೆ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು.
ರವಿಚಂದ್ರನ್ ಜೊತೆ ಅಪೂರ್ವ ಸಿನಿಮಾದಲ್ಲಿ ಸ್ಪಂದನಾ ನಟಿಸಿ ಗಮನಸೆಳೆದಿದ್ದರು. ಇದೀಗ ಅವರು, ಬಹು ನಿರೀಕ್ಷೆಯ ‘ಕಿಸ್ಮತ್’ ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದರು. ಈ ಸಿನಿಮಾದ ಪ್ರಮೋಷನ್ ಕಾರ್ಯಕ್ರಮ ಕೂಡಾ ಆಯೋಜಿತವಾಗಿತ್ತು. ಆದರೆ ಅವರು ಏಕಾಏಕಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.