ಹಲವಾರು ಚಿತ್ರಗಳಲ್ಲಿ ನಟಿಸಿರುವ, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟಿ ಅಪರ್ಣಾ ಪಿ.ನಾಯರ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 31 ವರ್ಷ ವಯಸ್ಸಿನ ನಟಿಯ ಸಾವಿನ ಸುದ್ದಿಯಿಂದಾಗಿ ಸಿನಿಮಾ ರಂಗದಲ್ಲಿ ದುಃಖ ಆವರಿಸಿದೆ.
ಮಲಯಾಳಂ ಸಿನಿಮಾ ರಂಗದಲ್ಲಿ ಜನಪ್ರಿಯತೆ ಪಡೆದಿರುವ ಅಪರ್ಣಾ ಪಿ.ನಾಯರ್, ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದ ಕೊನೆಯುಸಿರೆಳೆದಿದ್ದಾರೆ.