‘ಋತು ತಾರೆ’ ಯೋಜನೆ: ನಟಿ ರಮ್ಯಾ ಅವರಿಂದ ಮುಖ್ಯಮಂತ್ರಿ ಭೇಟಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಋತು ತಾರೆ’ ಯೋಜನೆಯ ರಾಯಭಾರಿ, ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಹಲವು ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರೊ. ನೇತ್ರಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

35 ವರ್ಷ ಮೇಲ್ಪಟ್ಟ ಮಹಿಳೆಯರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಾಳಜಿ ಹಾಗೂ ಋತುಬಂಧದ (ಮೆನೋಪಾಸ್) ಆರೈಕೆಗೆ ವಿಶೇಷ ಒತ್ತು ನೀಡುವುದು ‘ಋತು ತಾರೆ’ ಯೋಜನೆಯ ಮುಖ್ಯ ಉದ್ದೇಶವಾಗಿದೆ.

Related posts