ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗುತ್ತಿರುವ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಸ್ದದಾರೇ.

70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು ಪ್ರಶಸ್ತಿಯ ಘನತೆಯನ್ನು ಹೆಚ್ಚಿಸಿದೆ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು.

70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ… pic.twitter.com/WZGYFB7vKc
— Siddaramaiah (@siddaramaiah) March 8, 2025

Related posts