ಕೃಷಿ ಪಂಪ್‌ಸೆಟ್ ವಿಚಾರದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ: ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಆಘಾತ

ಬೆಂಗಳೂರು: ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳ ವಿಚಾರದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಮುಂದುವರಿದಿದ್ದು, ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಆಘಾತ ಎಂಬಂತಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಬರಗಾಲ, ಮಳೆ ಕಡಿಮೆ ವಿದ್ಯುತ್ ಉತ್ಪಾದನೆ ಕುಂಠಿತ ಕಾರಣ ರೈತರಿಗೆ 5 ಗಂಟೆ ವಿದ್ಯುತ್ ಎನ್ನುತ್ತಾರೆ ,ಇದೇ ಸರ್ಕಾರ ಕೈಗಾರಿಕೆಗಳಿಗೆ ಉದ್ಯಮಿಗಳಿಗೆ ಸಮರ್ಪಕ 24 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೆವೆ ಎನ್ನುತ್ತಾರೆ ಸರ್ಕಾರದ ಇಬ್ಬಗೆ ನೀತಿ ಸರಿಅಲ್ಲ, ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಯಾವ ನ್ಯಾಯ ಎಂದು ಪ್ರಶ್ನಿಸಿರುವ ಕುರುಬೂರು ಶಾಂತಕುಮಾರ್, ಸರ್ಕಾರ ಎಚ್ಚೆತ್ತುಕೊಂಡು 10 ಗಂಟೆಗಳ ವಿದ್ಯುತ್ ನೀಡದಿದ್ದರೆ 45 ಲಕ್ಷ ಕೃಷಿ
ಪಂಪ್ ಶೆಟ್ ರೈತರ ಜೊತೆಗೂಡಿ ವಿಧಾನಸೌಧ ಮುತ್ತಿಗೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಹಿಂದೆ ನಿಗದಿ ಮಾಡಿದ್ದ ಕಬ್ಬಿನ ಬಾಕಿ ಟನ್‌ಗೆ 150 ರೂ ಕೂಡಿಸಲು ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಉತ್ಪಾದನಾ ವೆಚ್ಚ 3580 ರೂ ಸರ್ಕಾರ 3150 ನಿಗದಿ ಮಾಡಿದೆ ಕೂಡಲೇ ಪರಿಸ್ಕರಣೆ ಮಾಡಿ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಕಬ್ಬಿನ ಇಳುವರಿ ಹಾಗೂ ಪ್ರದೇಶ ಕಡಿಮೆಯಾಗಿದ್ದು ಶೇಕಡ 50ರಷ್ಟು ಉತ್ಪಾದನೆ ಕಡಿಮೆಯಾಗುವ ಸಾಧ್ಯತೆ ಕಂಡು ಬರುತ್ತಿದೆ ರೈತರು ಆತಂಕಗೊಳ್ಳದೆ ಹೆಚ್ಚು ಬೆಲೆ ಕೊಡುವ ಕಾರ್ಖಾನೆಗಳಿಗೆ ಕಬ್ಬುಸರಬರಾಜು ಮಾಡಲು ಮುಂದಾಗಬೇಕು ಎಂದು ಆಗ್ರಹಿಸಿದ ಅವರು, ರಾಜ್ಯ ಸರ್ಕಾರ 225 ತಾಲೂಕು ಬರಗಾಲ ಘೋಷಣೆ ಮಾಡಿದೆ ಬರಗಾಲ ಸಂಕಷ್ಟದ ನೆರವು ಕಾರ್ಯಆರಂಭ ಆಗಿಲ್ಲ. ದನಕರುಗಳಿಗೆ ಮೇವು, ಕುಡಿಯುವ ನೀರು ಬೆಳೆ ನಷ್ಟ ಪರಿಹಾರ, ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ನವಂಬರ್ 6 -7 ರಂದು ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೆತರ ಸಂಘಟನೆಯ ರಾಷ್ಟ್ರೀಯ ಸಂಸತ್ ಅಧಿವೇಶನ ದೆಹಲಿಯಲ್ಲಿ ನಡೆಯಲಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ರೈತರ ಪಾತ್ರ ಕುರಿತು ಚರ್ಚಿಸಲಾಗುವುದು ಎಂದು ಕುರುಬೂರ ಶಾಂತಕುಮಾರ್ ತಿಳಿಸಿದರು.

Related posts