ದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಹಿ ಅನುಭವದ ನಂತರ ಇದೀಗ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಭಾರೀ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ. ಇದೆ ಸಂದರ್ಭದಲ್ಲಿ ದಕ್ಷಿಣದ ರಾಜ್ಯಗಳ ಉಸ್ತುವಾರಿಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ವಹಿಸಿದೆ.
ತಮಿಳುನಾಡು, ಪುದುಚೇರಿ, ಗೋವಾ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ನೇಮಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ನನ್ನ ಹೆಗಲಿಗೆ ವಹಿಸಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ನನ್ನ ಮೇಲಿಟ್ಟಿರುವ ನಂಬಿಕೆಗೆ ಅಭಾರಿಯಾಗಿದ್ದೇನೆ ಎಂದಿದ್ದಾರೆ.
@INCIndia ಬಲವರ್ಧನೆಗೆ ಸಂಬಂಧಪಟ್ಟಂತೆ ಪಕ್ಷದೊಳಗೆ ಆಡಳಿತಾತ್ಮಕ ಬದಲಾವಣೆಯಾಗಿದೆ.
ತಮಿಳುನಾಡು, ಪುದುಚೇರಿ, ಗೋವಾ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ನೇಮಿಸುವ ಮೂಲಕ ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ನನ್ನ ಹೆಗಲಿಗೆ ವಹಿಸಿದ್ದಾರೆ.
ಶ್ರೀಮತಿ ಸೋನಿಯಾ ಗಾಂಧಿ ಹಾಗೂ @RahulGandhi ನನ್ನ ಮೇಲಿಟ್ಟಿರುವ ನಂಬಿಕೆಗೆ ಅಭಾರಿಯಾಗಿದ್ದೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 11, 2020