ಬೆಂಗಳೂರು: ಸಂಪುಟದಿಂದ ನಿರ್ಗಮಿಸಿರುವ ಅಬಕಾರಿ ಸಚಿವ ನಾಗೇಶ್ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾರಥ್ಯ ಸಿಕ್ಕಿದೆ.
ಸಿ.ಎಂ.ಯಡಿಯೂರಪ್ಪರವರು ರಾಜೀನಾಮೆ ಕೇಳಿದ ಸಂದರ್ಭದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡುವ ಭರವಸೆ ನೀಡಿದ್ದರು. ಇದೆ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವಂತೆ ನಾಗೇಶ್ ಅವರುಮನವಿ ಮಾಡಿದ್ದಾರೆನ್ನಲಾಗಿದೆ. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಜಿ ಸಚಿವ ಹೆಚ್.ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.
ಈ ವರೆಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಮುನಿಕೃಷ್ಣ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಂಸಿ&ಎ ನಿಗಾಮಾಕ್ಕೆ ನೇಮಕ ಮಾಡಲಾಗಿದೆ.