ಅಮಿತ್ ಶಾ ಜನ್ಮದಿನ: ಮೋದಿ, ರಾಜನಾಥ್ ಸಿಂಗ್, ಜೈಶಂಕರ್ ಶುಭಾಶಯ

ನವದೆಹಲಿ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಗುರುವಾರ 62ನೇ ವಸಂತಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೇರಿದಂತೆ ಹಲವು ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ. ದೇಶದ ಆಂತರಿಕ ಭದ್ರತೆ, ಮಾವೋವಾದ ನಿರ್ಮೂಲನೆ ಹಾಗೂ ಜನಕಲ್ಯಾಣ ಕ್ಷೇತ್ರಗಳಲ್ಲಿ ಅಮಿತ್ ಶಾ ಅವರ ಕೊಡುಗೆಯನ್ನು ನಾಯಕರು ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ ಶುಭಾಶಯ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರ ಆಡಳಿತಾತ್ಮಕ ಸಾಮರ್ಥ್ಯವು ಭಾರತದ ಆಂತರಿಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದೆ ಎಂದು ಹೇಳಿದ್ದಾರೆ. ಮಾವೋವಾದದ ಪಿಡುಗನ್ನು ನಿರ್ಮೂಲನೆ ಮಾಡುವುದರ ಜತೆಗೆ, ಡ್ರಗ್ಸ್ ಮುಕ್ತ ಭಾರತ ನಿರ್ಮಿಸುವ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದ ಸೇವೆಯಲ್ಲಿ ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯದಿಂದ ಮುಂದುವರಿಯಲಿ ಎಂದು ಹಾರೈಸಿದ್ದಾರೆ.

Warm birthday greetings to Home Minister Shri Amit Shah Ji. His administrative understanding has ensured India’s internal security systems become more effective. Particularly noteworthy are the successes in eliminating the menace of Maoism and in furthering our dream of a society free from drugs. I pray that he is blessed with a long and healthy life in service of the people.

@AmitShah

— Narendra Modi (@narendramodi) October 22, 2026

ಜೈಶಂಕರ್ ಮೆಚ್ಚುಗೆ

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಮಿತ್ ಶಾ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದು, ರಾಷ್ಟ್ರದ ಭದ್ರತೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ಅವರ ಸಮರ್ಪಣಾ ಮನೋಭಾವವನ್ನು ಮೆಚ್ಚಿದ ಜೈಶಂಕರ್, ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ದೀರ್ಘಾಯುಷ್ಯ ಲಭಿಸಲಿ ಎಂದು ಹಾರೈಸಿದ್ದಾರೆ.

ರಾಜನಾಥ್ ಸಿಂಗ್ ಶುಭ ಹಾರೈಕೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಅಮಿತ್ ಶಾ ಅವರಿಗೆ ಶುಭಾಶಯ ಕೋರಿದ್ದಾರೆ. ಭಾರತದ ಆಂತರಿಕ ಭದ್ರತೆಯನ್ನು ಬಲಪಡಿಸುವುದರ ಜತೆಗೆ ಸಹಕಾರ ಕ್ಷೇತ್ರಕ್ಕೆ ಹೊಸ ವೇಗ ನೀಡಲು ಅವರು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ದೇಶದ ಸೇವೆಯಲ್ಲಿ ಅವರ ಸಕ್ರಿಯ ಕೊಡುಗೆ ನಿರಂತರವಾಗಿರಲಿ ಎಂದು ಹಾರೈಸಿದ್ದಾರೆ.

Related posts