ಪಾಕ್ ಪರ ಘೋಷಣೆಗೆ ಖಂಡನೆ ; ಪ್ರತಿಭಟನೆಯ ಭುಗಿಲು

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸುವ ಆತುರದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ವಿದ್ಯಾರ್ಥಿನಿ ಅಮೂಲ್ಯ ಬಂಧನದಲ್ಲಿದ್ದಾರೆ, ಮತ್ತೊಂದೆಡೆ ಆಕೆಯ ವಿರುದ್ಧ ಪ್ರತಿಭಟನೆ ಭುಗಿಲೆದ್ದಿದೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಮೊಳಗಿದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಡಿಕೇರಿ, ಮಂಗಳೂರು, ಚಿತ್ರದುರ್ಗ, ಕೋಲಾರ, ಹಾಸನ, ಅರಸಿಕೆರೆ, ಬೇಲೂರು, ಚಿಕ್ಕಬಳ್ಳಾಪುರ, ಕಲಬುರಗಿ, ರಾಮನಗರ, ಹುಬ್ಬಳ್ಳಿ, ಶಿವಮೊಗ್ಗ, ಉಡುಪಿ, ಮಂಡ್ಯ ಸೇರಿ ಹಲವೆಡೆ ಪ್ರತಿಭಟನೆಗಳು ನಡೆದವು.

ಅಮೂಲ್ಯ ಘೋಷಣೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ದೇಶದ್ರೋಹದ ಕೃತ್ಯಕ್ಕೆ ಕುಮ್ಮಕ್ಕು ನೀಡುವವರ ವಿರುದ್ದವೂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Related posts