ಪಾಕ್ ಪರ ಘೋಷಣೆ ವಿವಾದ; ಅಮೂಲ್ಯ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಫ್ರೀಡಂ ಪಾರ್ಕ್​ನಲ್ಲಿ ಕೆಲ ದಿನಗಳ ಹಿಂದೆ ಪೌರತ್ವ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯಳನ್ನು ಹೆಚ್ಚಿನ ವಿಚಾರಣೆಗೆ ಗುರಿಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಈ ಸಂಬಂಧ ಅಮೂಲ್ಯಳನ್ನು 4 ದಿನಗಳ ಕಾಲ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

ಕೆಲ ದಿನಗಳ ಹಿಂದೆ ಪ್ರತಿಭಟನೆಯ ವೇದಿಕೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯಳನ್ನು ಉಪ್ಪಾರಪೇಟೆ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಧೀಶರೆದುರು ಹಾಜರು ಪಡಿಸಿದ್ದರು.

ಮಂಗಳವಾರ ರಾತ್ರಿ ಮತ್ತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದ ಪೊಲೀಸರು, ಪ್ರಕರಣ ಬಗ್ಗೆ ಹೆಚ್ಚಿನ ವಿಚಾರಣೆ ಅಗತ್ಯವಿರುವುದರಿಂದ ತಮ್ಮ ವಶಕ್ಕೆ ನೀಡುವಂತೆ ಕೋರಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಮೂಲ್ಯಳನ್ನು 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

Related posts