ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಿಯನಗರಂ ಬಳಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಭವಿಸಿದ ಈ ದುರಂತದಲ್ಲಿ 50 ಕ್ಕೂ ಹೆಚ್ಚು ಮಂದಿ ಗಾಯಗಗೊಂಡಿದ್ದಾರೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಸಂಬಂಧ ಕಾಯುತ್ತಿದ್ದ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು ನಿಂತಿತ್ತು. ಅದಾಗಲೇ ಬಂದ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ನಿಂತಿದ್ದ ರೈಲಿಗೆ ಅಪ್ಪಳಿಸಿದೆ. ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮೂರು ಬೋಗಿಗಳು ಹಳಿತಪ್ಪಿದ್ದು ಅದರಲ್ಲಿದ್ದ 13 ಮಂದಿ ಮೃತಪಟ್ಟಿದ್ದು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.
Andhra Pradesh Train accident!
5th Train accident !pic.twitter.com/CkQhn0XYtM
— Ashish Singh (@AshishSinghKiJi) October 29, 2023