ಬೆಂಗಳೂರು: ಪಿಎಸ್ ಐ ಹಗರಣ, ಬಿಟ್ ಕಾಯಿನ್ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಅವರ ಪಾತ್ರವಿದೆ ಆದರೂ ಅವರನ್ನು ಹಲವಾರು ಪ್ರಕರಣಗಳಲ್ಲಿ ತನಿಖೆ ಮಾಡಿಲ್ಲ. ಆದ ಕಾರಣ ಸರ್ಕಾರ ಇವರ ವಿರುದ್ದ ಎಸ್ ಐಟಿ ತನಿಖೆ ಮಾಡಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗ ಅಧ್ಯಕ್ಷ ರಮೇಶ್ ಬಾಬು ಪ್ರತಿಪಾದಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಬೇನಾಮಿ ವಹಿವಾಟುಗಳು ನಡೆದಿವೆ. ಅರಗ ಜ್ಞಾನೆಂದ್ರ ಅವರ ಮಗ ಕೂಡ ಅನೇಕ ಭೂ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿದರು.
ಗೃಹ ಹಾಗೂ ಗ್ರಾಮೀಣ ಅಭಿವೃದ್ದಿ ಇಲಾಖೆಯ ಕಟ್ಟಡಗಳ ಕಾಮಗಾರಿಯನ್ನು ಕಳಪೆ ಮಾಡಲಾಗಿದೆ. ಇದರಲ್ಲಿ ನೇರವಾಗಿ ಅರಗ ಜ್ಞಾನೇಂದ್ರ ಅವರ ಕೈವಾಡವಿದೆ. ಇದೆಲ್ಲದರ ಬಗ್ಗೆಯೂ ಸಮಗ್ರ ತನಿಖೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ರಮೇಶ್ ಬಾಬು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಅರಗ ಜ್ಞಾನೇಙದ್ರ, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.