26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಪದಗ್ರಹಣ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು.

ಸೋಮವಾರದಂದು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸ್ಥಾನಕ್ಕೆ ಕೇಂದ್ರ ಸರ್ಕಾರದ ಉನ್ನತ ಸಮಿತಿ ನೇಮಕ ಮಾಡಿತ್ತು. ಈ ನೇಮಕಾತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ ನಂತರ ಬುಧವಾರ ಬೆಳಿಗ್ಗೆ ಜ್ಞಾನೇಸ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರವಹಿಸಿಕೊಂಡರು.

Related posts