KSRTC ಇದೀಗ ಏಷ್ಯಾದಲ್ಲೇ ಅತ್ಯುತ್ತಮ ಸಂಸ್ಥೆ; ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ

ಬೆಂಗಳೂರು: ರಾಜ್ಯದ ಹೆಮ್ಮೆಯ ಸಾರಿಗೆ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಸ್ವಾಮ್ಯದ ಸಾರಿಗೆ ಸಂಸ್ಥೆ  ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾಗಿದೆ.

KSRTCಯು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ  (Asia’s Best Brand Employer Award) ಪಾತ್ರವಾಗಿದೆ. ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ KSRTC ಈ ಪ್ರತಿಷ್ಠಿತ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

14ನೇ ಆವೃತ್ತಿಯ 18ನೇ ಉದ್ಯೋಗದಾತ ಬ್ರಾಂಡಿಂಗ್ ಪ್ರಶಸ್ತಿಯನ್ನು ಇಂದು (ಆಗಸ್ಟ್ 8) ಪ್ರಕಟಿಸಲಾಗಿದ್ದು, ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಘೋಷಿಸಲಾಗಿದೆ.

ಆಗಸ್ಟ್ 17ರಂದು ಸಿಂಗಾಪೂರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಈ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ ಕೆಎಸ್ಸಾರ್ಟಿಸಿ ನೌಕರರಲ್ಲಿ ಸಂತಸ ಮೂಡಿದೆ.

Related posts