ದೆಹಲಿ: ತಮಿಳುನಾಡಿಗೆ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನಡೆದಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಸಂಘರ್ಷದ ಕಿಚ್ಚು ಹಚ್ಚಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ನಾಯಕರ ತಂಡವನ್ನು ತಮಿಳುನಾಡಿಗೆ ಕಳುಹಿಸಿ ಪರಿಶೀಲನೆ ನಡೆಸಲಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ , ತಮಿಳುನಾಡಿಗೆ ಭೇಟಿ ನೀಡಲು ನಾಲ್ವರು ಸದಸ್ಯರ ನಿಯೋಗವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂಸದರಾದ ಡಾ. ಸತ್ಯಪಾಲ್ ಸಿಂಗ್, ಪಿ.ಸಿ ಮೋಹನ್ ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷೆ ಡಿ. ಪುರಂದರೇಶ್ವರಿ, ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ. ಈ ಸಮಿತಿಯು ತಮಿಳುನಾಡಿಗೆ ಭೇಟಿ ನೀಡಿ ವರದಿ ತಯಾರಿಸಿ ಹೈಕಮಾಂಡ್ಗೆ ಸಲ್ಲಿಸಲಿದೆ ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.