ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ,, ಜೀವ ಬೆದರಿಕೆ ಹಾಕಿರುವ ಆರೋಪದದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ನಾಯಕರು ಆಗ್ರಹಿಸಿದೂರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ “ಮಹಿಳೆಯೊಬ್ಬರು ಮಾಡಿರುವ ಅತ್ಯಂತ ಗಂಭೀರ ಆರೋಪಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡವಿಲ್ಲದೆ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಆರೋಪಗಳು ಸಾಬೀತಾದಲ್ಲಿ ತಪ್ಪಿತಸ್ಥ ಆರೋಪಿಯನ್ನು ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಅವರ ಸಹೋದರ ಗೋಪಾಲ್ ಜೋಶಿ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ರವರ…

ಮಂಡ್ಯದಲ್ಲಿ ಮಳೆ ಕೊರತೆ; 24,123 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ

ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ, ಬೆಳೆಗಳ ಸ್ಥಿತಿಗತಿ ಹಾಗೂ ಕೆರೆಗಳಲ್ಲಿನ ನೀರಿನ ಲಭ್ಯತೆ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಚಿವ ಪಿ.ಎಂ. ನರೇಂದ್ರಸ್ವಾಮಿ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ರೈತರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೃಷಿ ಮತ್ತು ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಪೂರ್ವ ಮುಂಗಾರು ಮಳೆ ಕೊರತೆಯಿಂದ 6,175 ಹೆಕ್ಟೇರ್ ಪ್ರದೇಶದಲ್ಲಿ ಶೇ.31.83ರಷ್ಟು ಮಾತ್ರ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲೂ ಮಳೆ ಕೊರತೆ ಮುಂದುವರಿದಿದ್ದು, 17,948 ಹೆಕ್ಟೇರ್…

ಬೆಂಗಳೂರಿನಲ್ಲಿ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ; ವೈಟ್‌ಫೀಲ್ಡ್‌ನಲ್ಲಿ ಅಕ್ರಮ ವಲಸಿಗರ ಪತ್ತೆಗೆ ಶೋಧ

ಬೆಂಗಳೂರು: ಉದ್ಯಾನ ನಗರಿಯಲ್ಲಿ ರಹಸ್ಯವಾಗಿ ನೆಲೆಯೂರಿರುವ ಬಾಂಗ್ಲಾದೇಶಿ ಪ್ರಜೆಗಳ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಬೆಳ್ಳಂಬೆಳಿಗ್ಗೆ ಅಖಾಡಕ್ಕಿಳಿದಿದ್ದು, ನಿರಾಶ್ರಿತರ ಸೋಗಿನಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿ ವಾಸವಾಗಿದ್ದ ಬಾಂಗ್ಲಾದೇಶ ಮೂಲದ ಹಲವಾರು ಕುಟುಂಬಗಳನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದಾರೆ ಎನ್ನಲಾದ ಅಕ್ರಮ ವಲಸಿಗರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಬೆಂಗಳೂರು ಪೊಲೀಸರು ಶನಿವಾರ ‘ಆಪರೇಷನ್ ಮುಕ್ತ’ ಎಂಬ ವಿಶೇಷ ಅಭಿಯಾನವನ್ನು ಪ್ರಾರಂಭಿಸಿದ್ದು, ಹಲವಾರು ಪ್ರದೇಶಗಳಲ್ಲಿ ದಾಳಿ ಮತ್ತು ಪರಿಶೀಲನಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಈ ಅಭಿಯಾನ ವೈಟ್‌ಫೀಲ್ಡ್ ಸುತ್ತಮುತ್ತಲ ಪ್ರದೇಶಗಳ್ಲಲಿ ಬಿರುಸಿನಿಂದ ಸಾಗಿದೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ರೀನಾ ಸುವರ್ಣ ಅವರೇ ವಿವಿಧ ತಂಡಗಳ ನೇತೃತ್ವ ವಹಿಸಿ ಸ್ವತಃ ಕಾರ್ಯಾಚರಣೆಗಿಳಿದಿದ್ದಾರೆ. ಬೆಂಗಳೂರಿನ ಪ್ರಮುಖ ತಂತ್ರಜ್ಞಾನ ಕಾರಿಡಾರ್‌ಗಳ ಭಾಗವಾಗಿರುವ ವೈಟ್‌ಫೀಲ್ಡ್, ಕಾಡುಗೋಡಿ, ಮಹದೇವಪುರ ಮತ್ತು ಇತರ…

ಓಣಂ ಪ್ರಯಾಣಿಕರಿಗೆ KSRTCಯಿಂದ ಗುಡ್‌ನ್ಯೂಸ್; ಆ.21ರಿಂದ 25ರವರೆಗೆ ವಿಶೇಷ ಬಸ್ ಸೇವೆ

ಬೆಂಗಳೂರು: ಆಗಸ್ಟ್ 26ರಂದು ನಡೆಯಲಿರುವ ತಿರು ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್ ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕೇರಳದ ವಿವಿಧ ನಗರಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಆಗಸ್ಟ್ 21ರಿಂದ 25ರವರೆಗೆ ಬೆಂಗಳೂರಿನಿಂದ ಕೇರಳದ ಪ್ರಮುಖ ಸ್ಥಳಗಳಿಗೆ 90 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕೇರಳದಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಆಗಸ್ಟ್ 30ರಂದು ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕಣ್ಣೂರು, ಕೋಝಿಕ್ಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರ ಸೇರಿದಂತೆ ಕೇರಳದ ಪ್ರಮುಖ ನಗರಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಲವು ಪ್ರತಿಷ್ಠಿತ ಸಾರಿಗೆಗಳನ್ನು…

ಸಚಿವರಾದ ನಂತರ ಮೊದಲ ಭೇಟಿ; ಮಂಡ್ಯದಲ್ಲಿ ಚಲುವರಾಯಸ್ವಾಮಿ, ನರೇಂದ್ರಸ್ವಾಮಿಗೆ ಅದ್ಧೂರಿ ಸ್ವಾಗತ

ಮಂಡ್ಯ: ನೂತನ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಶನಿವಾರ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲೆಯ ಗಡಿ ನಿಡಘಟ್ಟದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಮದ್ದೂರು ತಾಲೂಕಿನ ನಿಡಘಟ್ಟ ಬಳಿ ಸಚಿವರಿಬ್ಬರನ್ನು ಮದ್ದೂರು ಶಾಸಕ ಕೆ. ಉದಯ್, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನೂತನ ಸಚಿವರಿಗೆ ಶುಭಾಶಯ ಕೋರಿದರು. ಸಚಿವರ ಆಗಮನದ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಮಂಡ್ಯ ಜಿಲ್ಲೆಯ ಸಾರ್ವಜನಿಕರೂ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಹಿನ್ನೆಲೆಯಲ್ಲಿ ನಿಡಘಟ್ಟದಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಲ್ಲಿ ಉತ್ಸಾಹದ ವಾತಾವರಣ ಕಂಡುಬಂತು. ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಾರ್ವಜನಿಕರು…

ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್; 8 ಮಂದಿ ಸಾವು, 10 ಪ್ರಯಾಣಿಕರ ರಕ್ಷಣೆ

ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, 10 ಜನರು ಗಾಯಗೊಂಡಿದ್ದಾರೆ. ಬೈರಾಗಢ-ತೀಸ್ಸಾ ರಸ್ತೆಯ ದೇವಿಕೋಠಿ ಪ್ರದೇಶದ ಚಾಲುಂಜ್ ಮೋರ್ ಬಳಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆಳಗಿನ ರಸ್ತೆಗೆ ಉರುಳಿಬಿದ್ದಿದೆ. ಶರ್ಮಾ ಬಸ್ ಸರ್ವಿಸ್‌ಗೆ ಸೇರಿದ ಬಸ್ ಬೆಳಗ್ಗೆ 6.30ರ ಸುಮಾರಿಗೆ ಬೈರಾಗಢದಿಂದ ಚಂಬಾ ಕಡೆಗೆ ಹೊರಟಿತ್ತು. ಸುಮಾರು ಮೂರು ಕಿಲೋಮೀಟರ್ ಸಂಚರಿಸಿದ ಬಳಿಕ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಒಟ್ಟು 18 ಮಂದಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೊದಲು ರಸ್ತೆಯಲ್ಲಿ ಪಲ್ಟಿಯಾಗಿ, ಬಳಿಕ ಕೆಳಭಾಗದಲ್ಲಿದ್ದ ರಸ್ತೆಗೆ ಉರುಳಿಬಿದ್ದಿದೆ. ಅಪಘಾತದ ರಭಸಕ್ಕೆ ಹಲವು ಪ್ರಯಾಣಿಕರು ಬಸ್‌ನ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಎನ್‌ಡಿಆರ್‌ಎಫ್, ಪೊಲೀಸರು, ಗೃಹರಕ್ಷಕ ದಳ, ಅಗ್ನಿಶಾಮಕ…

ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

ಚೆನ್ನೈ: ನಯನತಾರಾ ಮತ್ತು ಕವಿನ್ ಅಭಿನಯದ ಬಹುನಿರೀಕ್ಷಿತ ರೊಮ್ಯಾಂಟಿಕ್ ಎಂಟರ್‌ಟೈನರ್ ‘ಹಾಯ್’ ಚಿತ್ರದ ಬಿಡುಗಡೆ ದಿನಾಂಕವನ್ನು ಬದಲಿಸಲಾಗಿದ್ದು, ಆಗಸ್ಟ್ 28ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ವಿಷ್ಣು ಎಡವನ್ ನಿರ್ದೇಶನದ ಈ ಚಿತ್ರ ಈ ಹಿಂದೆ ಆಗಸ್ಟ್ 14ರಂದು ಬಿಡುಗಡೆಯಾಗಬೇಕಿತ್ತು. ಇದೀಗ ನಿರ್ಮಾಪಕರು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಚಿತ್ರದ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಸಾಮಾಜಿಕ ಮಾಧ್ಯಮದ ಮೂಲಕ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಿ, ಅಭಿಮಾನಿಗಳು ಆಗಸ್ಟ್ 28ನ್ನು ಕ್ಯಾಲೆಂಡರ್‌ನಲ್ಲಿ ಗುರುತಿಸಿಕೊಳ್ಳುವಂತೆ ಮನವಿ ಮಾಡಿದೆ. ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ದೊರೆತಿದೆ. ಜೀ ಸ್ಟುಡಿಯೋಸ್ ಸೌತ್, ದಿ ರೌಡಿ ಪಿಕ್ಚರ್ಸ್ ಹಾಗೂ ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿವೆ. ಚಿತ್ರದಲ್ಲಿ ಕೆ. ಭಾಗ್ಯರಾಜ್, ಪ್ರಭು, ರಾಧಿಕಾ, ಸತ್ಯನ್, ಆದಿತ್ಯ ಕಥಿರ್ ಹಾಗೂ ಕುರೈಶಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಕಥೆ ಚೆನ್ನೈ,…

ರಷ್ಯಾದ ತೈಲ ಖರೀದಿಸುವ ಭಾರತ, ಚೀನಾಗೆ ಶೇ.100 ಸುಂಕ; ಅಮೆರಿಕದ ಸೇಡಿನ ಕ್ರಮ

ವಾಷಿಂಗ್ಟನ್: ರಷ್ಯಾದ ತೈಲ ಮತ್ತು ಅನಿಲ ಖರೀದಿಸುವ ಭಾರತ ಹಾಗೂ ಚೀನಾ ಸೇರಿದಂತೆ ಪ್ರಮುಖ ದೇಶಗಳ ಮೇಲೆ ಭಾರಿ ಸುಂಕ ವಿಧಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ ನೀಡುವ ಮಸೂದೆಗೆ ಅಮೆರಿಕದ ಸೆನೆಟ್ ಭಾರಿ ಬಹುಮತದಿಂದ ಅನುಮೋದನೆ ನೀಡಿದೆ. ‘ಲಿಂಡ್ಸೆ ಒ. ಗ್ರಹಾಂ ಸ್ಯಾಂಕ್ಷನಿಂಗ್ ರಷ್ಯಾ ಅಂಡ್ ಇರಾನ್ ಆಕ್ಟ್ ಆಫ್ 2026’ ಎಂದು ಮರುನಾಮಕರಣಗೊಂಡಿರುವ ಮಸೂದೆಗೆ ಸೆನೆಟ್‌ನಲ್ಲಿ 86-11 ಮತಗಳ ಬೆಂಬಲ ದೊರೆತಿದೆ. ರಷ್ಯಾದ ತೈಲ ಅಥವಾ ನೈಸರ್ಗಿಕ ಅನಿಲವನ್ನು ಅತಿ ಹೆಚ್ಚು ಖರೀದಿಸುವ ವಿಶ್ವದ ಐದು ಪ್ರಮುಖ ದೇಶಗಳ ಸರಕುಗಳ ಮೇಲೆ ಗರಿಷ್ಠ ಶೇ.100ರಷ್ಟು ಸುಂಕ ವಿಧಿಸಲು ಮಸೂದೆ ಅವಕಾಶ ನೀಡುತ್ತದೆ. ಈ ಪಟ್ಟಿಯಲ್ಲಿ ಚೀನಾ ಮತ್ತು ಭಾರತ ಸೇರಿದಂತೆ ಅಜರ್‌ಬೈಜಾನ್, ಹಂಗೇರಿ ಹಾಗೂ ಸ್ಲೋವಾಕಿಯಾ ಸೇರಿವೆ. ರಷ್ಯಾದಿಂದ ತಮ್ಮ ನೈಸರ್ಗಿಕ ಅನಿಲದ ಶೇ.15ಕ್ಕಿಂತ ಕಡಿಮೆ ಪ್ರಮಾಣವನ್ನು ಆಮದು ಮಾಡಿಕೊಳ್ಳುವ ಹಾಗೂ ಆಮದು…

CDS-II 2025 ಅಂತಿಮ ಫಲಿತಾಂಶ ಪ್ರಕಟ; OTA ಕೋರ್ಸ್‌ಗೆ 483 ಅಭ್ಯರ್ಥಿಗಳು ಅರ್ಹರು

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS-II) 2025ರ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು, ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA)ಯಲ್ಲಿ ತರಬೇತಿಗೆ 483 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. UPSC ನಡೆಸಿದ ಲಿಖಿತ ಪರೀಕ್ಷೆ ಹಾಗೂ ರಕ್ಷಣಾ ಸಚಿವಾಲಯದ ಸರ್ವಿಸಸ್ ಸೆಲೆಕ್ಷನ್ ಬೋರ್ಡ್ (SSB) ನಡೆಸಿದ ಸಂದರ್ಶನದಲ್ಲಿನ ಸಾಧನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದವರು 124ನೇ ಶಾರ್ಟ್ ಸರ್ವಿಸ್ ಕಮಿಷನ್ (ಪುರುಷರು) ಹಾಗೂ 124ನೇ ಶಾರ್ಟ್ ಸರ್ವಿಸ್ ಕಮಿಷನ್ (ಮಹಿಳೆಯರು) ಕೋರ್ಸ್‌ಗಳಿಗೆ ಸೇರ್ಪಡೆಯಾಗಲಿದ್ದು, ಎರಡೂ ಕೋರ್ಸ್‌ಗಳು ಅಕ್ಟೋಬರ್ 2026ರಲ್ಲಿ ಆರಂಭವಾಗಲಿವೆ. ಒಟ್ಟು 483 ಅಭ್ಯರ್ಥಿಗಳ ಪೈಕಿ 455 ಮಂದಿ ಪುರುಷರು ಹಾಗೂ 28 ಮಂದಿ ಮಹಿಳೆಯರು ಇದ್ದಾರೆ. ಪುರುಷರ ಕೋರ್ಸ್‌ಗೆ 276 ಹಾಗೂ ಮಹಿಳಾ ಕೋರ್ಸ್‌ಗೆ 19 ಸೇರಿದಂತೆ ಒಟ್ಟು 295 ಹುದ್ದೆಗಳನ್ನು ಪ್ರಕಟಿಸಲಾಗಿತ್ತು. ಪುರುಷರ ಕೋರ್ಸ್‌ನ ಮೆರಿಟ್ ಪಟ್ಟಿಯಲ್ಲಿ…