ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?: ಮಂಜುನಾಥ್ ಭಂಡಾರಿ ಪ್ರಶ್ನೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಈಗ ಬಿಜೆಪಿ ಮತ್ತು RSSನವರು ತಮಗೆ ಹಂಚಿಕೆಯಾಗಿದ್ದ ಜಮೀನು ಮತ್ತು ನಿವೇಶನಗಳನ್ನು ಹಿಂದುರುಗಿಸುವ ಮೂಲಕ ಆದರ್ಶರಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, 5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿ ಮೇಲ್ಪಂಕ್ತಿ ಹಾಕಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶ ಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ…

ಮಂಗಳೂರು ಶಾರದೋತ್ಸವ ರಥೋತ್ಸವ ಹಿಂದೆಂದಿಗಿಂತ ವಿಶೇಷ.. ಹೀಗಿತ್ತು ಕೈಂಕರ್ಯ..

ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು: ಮಂಗಳೂರು ಶ್ರೀ ವೆಂಕಟರಮಣ ದೇವಾಲಯ ಆಚಾರ್ಯ ಮಠ ವಠಾರದ 102ನೇ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14 ರಂದು ಅತ್ಯಂತ ವೈಭವಯುತವಾಗಿ ನಡೆಯಿತು. 2 ವರ್ಷದ ಹಿಂದಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ಸಹಾಯ ನೀಡಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸುತ್ತಿದ್ದಾರೆ. ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ವೈದಿಕ ವಿಧಿ ವಿಧಾನಗಳೊಂದಿಗೆ ಶ್ರೀ ಮಾತೆಯ ವಿಗ್ರಹ ಪ್ರತಿಷ್ಠಾಪಿಸಲಾಯಿತು . ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಿತು . ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಯಿತು. ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆದು, ಸಾರ್ವಜನಿಕ…

ಗಲಭೆ ಕೇಸ್ ವಾಪಸ್: ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ‌ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾಗವಹಿಸಿದರು. ನಂತರ ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ದೂರು ಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್‌ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕಾಂಗ್ರೆಸ್‌ಗೆ ಮುಸ್ಲಿಮರ ಓಟು ಬೇಕೆಂದು ಹೀಗೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು, ಮುಸ್ಲಿಮರು ನನ್ನ ಪರವಾಗಿದ್ದಾರೆ…

ಯಲಹಂಕ: ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಬೆಂಗಳೂರು: ಇಬ್ಬರು ಮಕ್ಕಳೊಂದಿಗೆ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ‌ತಾಲೂಕಿನ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅವಿನಾಶ್ (38), ಪತ್ನಿ ಮಮತಾ (30) ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ. ಅವಿನಾಶ್ ಮೊದಲಿಗೆ ಮಕ್ಕಳು ಮತ್ತು ಪತ್ನಿಗೆ ವಿಷ ಕೊಟ್ಟು ಸಾಯಿಸಿ, ಆ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತರು ಮೂಲತಃ ಕಲಬುರಗಿ ಜಿಲ್ಲೆಯವರಾಗಿದ್ದು, ಕಳೆದ ಐದು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ ಎನ್ನಲಾಗಿದೆ. ಮೃತ ಅವಿನಾಶ ಸಹೋದರ ಉದಯ್ ಎಂಬಾತ ರಾಜಾನುಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಗರಣಗಳ ಸರ್ಕಾರ: ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ!

ಬೆಂಗಳೂರು: ಸರ್ಕಾರದ ಹಗರಣಗಳ ಬಗ್ಗೆ ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬೇಡ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಾಂಗ್ರೆಸ್ ನಾಯಕರು ಚೆನ್ನಾಗಿ ಹಣ ನುಂಗಿದ್ದಾರೆ. ಇದರ ವಿರುದ್ಧ ಬಿಜೆಪಿ ಸಮರ್ಥವಾಗಿ ಪ್ರತಿಭಟನೆ ಮಾಡಿದೆ ಎಂದರು. ಬಿ.ಎಸ್.ಯಡಿಯೂರಪ್ಪನವರ ಪ್ರಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.‌ ಆದರೆ ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ಯಾವುದೇ ತಡೆ ಇಲ್ಲ. ಈ ದೇಶದಲ್ಲಿ ನ್ಯಾಯಾಂಗವೇ ಉನ್ನತವಾದುದು. ಕಾಂಗ್ರೆಸ್ ನ್ಯಾಯಾಲಯದ ಸರ್ಟಿಫಿಕೇಟ್ ಬಿಜೆಪಿಗೆ ಬೇಕಿಲ್ಲ ಎಂದವರು ಹೇಳಿದರು. ಸಂವಿಧಾನದ ಪ್ರಕಾರ ಸ್ಥಾಪನೆಯಾದ ನ್ಯಾಯಾಲಯದಲ್ಲಿ ಬಿಜೆಪಿಗೆ ಕ್ಲೀನ್ ಚಿಟ್ ದೊರೆಯುತ್ತದೆ. ಆದರೆ ಕಾಂಗ್ರೆಸ್ ತನ್ನನ್ನು ತಾನೇ ನ್ಯಾಯಾಲಯ ಎಂದುಕೊಂಡಿದ್ದು, ಅಂತಹ ವ್ಯವಸ್ಥೆಯ ಅಗತ್ಯ ಯಾರಿಗೂ ಇಲ್ಲ. ದೇಶವನ್ನು ಸುಮಾರು ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದ್ದು, ಅವರಿಗೆ…

ಪೊಳಲಿ ‘ಫಲ್ಗುಣಿ ಸೇತುವೆ’ ಸಮಸ್ಯೆಗೆ ಮುಕ್ತಿ ಎಂದು? ಸರ್ಕಾರವನ್ನು ಎಚ್ಚರಿಸಲು ಹೋರಾಟದ ಅಸ್ತ್ರ.. ಮಂಗಳವಾರ ಭಾರೀ ಪ್ರತಿಭಟನೆಗೆ ಕರೆ

ಮಂಗಳೂರು: ಪುರಾಣ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಫಾಲ್ಗುಣಿ ಸೇತುವೆ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತಾಳಿದೆ. ರಾಜ್ಯ ಸರ್ಕಾರದ ತಾತ್ಸಾರ ವಿರುದ್ದ ಸಾರ್ವಜನಿಕರು ಸಿಡಿದೆದ್ದಾರೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಡ್ಡೂರು-ಪೊಳಲಿ ನಡುವೆ ಸಂಪರ್ಕ ಕಲ್ಪಿಸಿರುವ ಫಲ್ಗುಣಿ ಸೇತುವೆ ಶಿಥಿಲಾವಸ್ಥೆಯಲ್ಲಿದ್ದು ಘನ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಘನವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದನ್ನು ಬಿಟ್ಟರೆ, ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬುದು ಊರ ಜನರ ಆಕ್ರೋಶ. ಇದೀಗ ಸರ್ಕಾರವನ್ನು ಹಾಗೂ ಅಧಿಕಾರಿಗಳನ್ನು ಎಚ್ಚರಿಸಲು ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಈ ಸಂಬಂಧ ಪೊಳಲಿಯಲ್ಲಿ ನಡೆದ ವಿವಿಧ ಸಂಘಟನೆಗಳ ಪ್ರಮುಖರ ಸಭೆ ವಿದ್ಯಮಾನಗಳ ಕೇಂದ್ರಬಿಂದುವಾಯಿತು.‌ ಪೊಳಲಿ–ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು…

ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ.. ರಾಜ್ಯಪಾಲರ ಅಂಕಿತದ ನಂತರ ಪರಿಪೂರ್ಣ ಜಾರಿ

ಬೆಂಗಳೂರು: ‘ಸಿʼ ವರ್ಗದ ದೇವಾಲಯಗಳ ಅರ್ಚಕರ, ನೌಕರರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, ಮರಣ ಉಪದಾನ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರುಗಳ ಖಾತೆಗೆ ಜಮಾ ಮಾಡುವ ಕಾರ್ಯಕ್ರಮಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಶ್ರೀ ರಾಮೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಡಾ|| ಎಂ.ವಿ.ವೆಂಕಟೇಶ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಡಾ|| ಬಿ.ಎಸ್.ಧ್ವಾರಕನಾಥ್,  ಕೆ.ಎಂ.ನಾಗರಾಜು, ಮಲ್ಲಿಕಾ ಪ್ರಶಾಂತ ಪಕ್ಕಳ ಹಾಗೂ ವಿನಾಯಕ್‌ ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯರು ಹಾಗೂ ವಿವಿಧ ಅರ್ಚಕರ ಸಂಘಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಿದರು.. ‘ಸಿʼ ವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ ಹಾಗೂ ಅರ್ಚಕರುಗಳಿಗೆ…

ಒಳ ಮೀಸಲಾತಿ ಜಾರಿಗೆ ಮೀನಮೇಷ; ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು…

ಮಂಗಳೂರಿನಲ್ಲಿ ಪೊಲೀಸ್ ಬೇಟೆ; ಬಾಂಗ್ಲಾ ಪ್ರಜೆಗಳ ಬಂಧನ

ಮಂಗಳೂರು: ನಕಲಿ ಪಾಸ್‌ಪೋರ್ಟ್‌ ಹೊಂದಿದ್ದ ಬಾಂಗ್ಲಾದೇಶ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದುಬಾೖಗೆ ಪ್ರಯಾಣಿಸಲು ಯತ್ನಿಸಿದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಜೆಯನ್ನು ವಶಕ್ಕೆ ಪಡೆಯಲಾಗಿದ್ದು, ಆತ ನೀಡಿದ ಸುಳಿವನ್ನಾಧರಿಸಿ ಉಡುಪಿಯಲ್ಲಿ ಹಲವು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾ ಡಿಸಿಎಂ ಆಪ್ತ ಬಾಬಾ ಸಿದ್ದಿಕಿ ಹತ್ಯೆ; ಬೆಚ್ಚಿ ಬಿದ್ದ ಮುಂಬೈ

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಕಗ್ಗೊಲೆ ಜನರನ್ನು ಬೆಚ್ಚಿಬೀಳಿಸಿದೆ. ಮುಂಬಯಿ ನಗರದ ಬಾಂದ್ರಾ ಪ್ರದೇಶದಲ್ಲಿ ಎನ್‌ಸಿಪಿ ಅಜಿತ್ ಪವಾರ್ ಬಣದ ನಾಯಕ ಬಾಬಾ ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆದಿದೆ. ಹಂತಕರ ಗುಂಡಿಗೆ ಸಿದ್ದಿಕಿ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ಬಾಬಾ ಸಿದ್ದಿಕಿ ಅವರ ಕಚೇರಿ ಬಳಿಯೇ ಘಟನೆ ನಡೆದಿದ್ದು, ಗುಂಡಿನ ದಾಳಿಯ ನಂತರ ಬಾಬಾ ಸಿದ್ದಿಕಿ ಅವರನ್ನು ಮುಂಬಯಿನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಸಿದ್ದಿಕಿ ಬದುಕುಳಿಯಲಿಲ್ಲ ಎಂದು ಆಪ್ತರು ಹೇಳಿದ್ದಾರೆ.‌ ಈ ನಡುವೆ ಹತ್ಯೆ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.