ಗಾಜಾ: ಮಧ್ಯಪ್ರಾಚ್ಯವೂ ರಾಷ್ಟ್ರಗಳ ನಡುವಿನ ಸಮರ ಉಗ್ರ ಸ್ವರೂಪ ತಾಳಿದ್ದು, ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ಇಸ್ರೇಲ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ತನ್ನ ಮಿಲಿಟರಿ ಪದೇ ಲೆಬನಾನ್ ಮೇಲೆ ನಡೆಸಿದ ದಾಳಿ ವೇಳೆ 8 ಯೋಧರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಕಳೆದ ವಾರ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಇಸ್ರೇಲ್ ಪದೇ ದಾಳಿ ಮಾಡಿ ಹತ್ಯೆ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್ ವಾಯುಪಡೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಮಂಗಳವಾರ ನಡೆದ ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಎರಡು ಪ್ರತ್ಯೇಕ ದಾಳಿಗಳಲ್ಲಿ ಏಳು ಸೈನಿಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Author: admin
ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ ‘ಚೌಧರಿ’ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ.
ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ…
ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ
ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ. ಬಿಲ್ಲವ ಸಮುದಾಯದ ಪ್ರಾಬಲ್ಯವಿರುವ ಕರಾವಳಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ಪ್ರಕಟಿಸುವ ಮೂಲಕ ಅಖಾದಲ್ಲಿ ಕಾಂಗ್ರೆಸ್ ಪಕ್ಷ ಸಂಚಲನ ಸೃಷ್ಟಿಸಿದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಚುನಾಯಿತರಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ಗುರುವಾರ (ಸೆ.3) ಕೊನೆ ದಿನವಾಗಿದ್ದು ಮುನ್ನಾ ದಿನದಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹೆಸರನ್ನು ಘೋಷಿಸಿದೆ.
ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ
ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು. ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ…
ಜೈಲರ್ ನಂತರ ʼವೆಟ್ಟೈಯನ್ʼ; ರಜನಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ
ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗ್ಯಾಂಗ್ ಪೈಕಿ, ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿ ನಂ.15 ಕಾರ್ತಿಕ್, ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್‌ಗೆ ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿ ನಂ.16 ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ರು. ಈ ಆರೋಪಿಗಳು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಬುಧವಾರ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್
ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು. ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ. ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರ ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ ಎಂದು ಸಚಿವ ರಾಮಲಿಂಗ ರೆಡ್ಡಿ ಅಭಿಪ್ರಾಯಪಟ್ಟರು. ಶಿಲ್ಪಾ ಫೌಂಡೇಶನ್…
ದೆಹಲಿ ಪೊಲೀಸರ ಭರ್ಜರಿ ಬೇಟೆ; 2,000 ಕೋಟಿ ರೂ ಮೌಲ್ಯದ ಕೊಕೇನ್ ವಶ
ನವದೆಹಲಿ: ರಾಜಧಾನಿ ದೆಹಲಿ ಪೊಲೀಸರು ಡ್ರಗ್ಸ್ ಮಾಫಿಯಾ ಭರ್ಜರಿ ಬೇಟೆಯಾಡಿದ್ದಾರೆ. ಅತಿ ದೊಡ್ಡ ಮಾದಕ ದ್ರವ್ಯ ದಂಧೆ ಭೇದಿಸಿರುವ ಪೊಲೀಸರು, ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ 560 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ದೆಹಲಿ ಪೊಲೀಸ್ ವಿಶೇಷ ಘಟಕದ ತಂಡ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಈ ಕಾರ್ಯಾಚರಣೆ ನಡೆಸಿದ್ದು ನಾಲ್ವರನ್ನು ಬಂಧಿಸಿದ್ದು, 565 ಕಿಲೋಗ್ರಾಂ ಕೊಕೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಾಫಿಯಾ ಜಾಲವು ದೆಹಲಿ ಸಹಿತ ವಿವಿಧ ರಾಜ್ಯಗಳಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
