ವಕ್ಫ್‌ ಮಂಡಳಿಯ ಎಲ್ಲ ಬಗೆಯ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಿ; ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಕರ್ನಾಟಕದ ವಕ್ಫ್‌ ಮಂಡಳಿಗೆ ಸಂಬಂಧಿಸಿದ ಎಲ್ಲ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೇಂದ್ರ ಸಚಿವರಿಗೆ ಹಾಗೂ ವಕ್ಫ್‌ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ. ರೈತರ ಜಮೀನು ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್‌ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್‌ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು…

ವಕ್ಫ್ ವಿವಾದ ವಿರುದ್ದ ಬಿಜೆಪಿ ಪ್ರತಿಭಟನೆ; ವಕ್ಫ್‌ ಮಂಡಳಿ ಕಾಯ್ದೆಯಲ್ಲಿ ಬದಲಾವಣೆ ತರಲು ಆಗ್ರಹ

ಬೆಂಗಳೂರು: ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ಬಿಜೆಪಿ ಆಗ್ರಹಿಸಿದೆ. ವಕ್ಫ್‌ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕೆ.ಆರ್‌.ಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕ ಆರ್.ಅಶೋಕ್ ,ಜಮೀನು ಕಬಳಿಸುವ ಮೂಲಕ ಅನ್ನದಾತರ ಕಣ್ಣಲ್ಲಿ ನೀರು ಬರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇವೆಲ್ಲಕ್ಕೂ ಸಚಿವ ಜಮೀರ್‌ ಅಹ್ಮದ್‌ ಕಾರಣ. ಹಿಂದೆ ಕೇಂದ್ರದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರನ್ನು ಓಲೈಸಲು ವಕ್ಫ್‌ ಬೋರ್ಡ್‌ಗೆ ಹೆಚ್ಚು ಅಧಿಕಾರ ನೀಡಿತು. ಸಿಎಂ ಸಿದ್ದರಾಮಯ್ಯ ಅವರೇ ಭೂಮಿ ಪಡೆಯಿರಿ ಎಂದು ಹೇಳಿದ್ದು, ಈಗ ಇದು ಬಿಜೆಪಿ ಮಾಡುವ ರಾಜಕೀಯ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಟೋಪಿ ತೆಗೆದಿದ್ದಾರೆ. ಬಳಿಕ ಅವರೇ ರೈತರ ತಲೆ…

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್…

ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಚನ್ನಪಟ್ಟಣ: ಇದು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಚುನಾವಣೆಯಲ್ಲ, ಇದು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ ಎಂದು ಪ್ರತಿಪಕ್ಷ ‌ನಾಯಕ ಆರ್.ಅಶೋಕ ಹೇಳಿದರು. ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ವ್ಯಕ್ತಿ ಹೆಸರಲ್ಲಿ ಚುನಾವಣೆ ನಡೆಯುತ್ತಿಲ್ಲ. ಇದು ಎನ್‌ಡಿಎ ಹಾಗೂ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ನಡೆಯುತ್ತಿರುವ ಚುನಾವಣೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನರ ಅನುಕಂಪವಿದೆ. ಅವರು ಈ ಹಿಂದೆ ಸೋತಿದ್ದರು. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳನ್ನು ಜನರು ಗುರುತಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಲೂಟಿ ಮಾಡುತ್ತಲೇ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣ ಕೊಳ್ಳೆ ಹೊಡೆಯಲಾಗಿದೆ ಎಂದು ದೂರಿದರು. ಗ್ಯಾರಂಟಿಗಳಿಂದಾಗಿ ಮಣ್ಣು ಎತ್ತಿ ಹಾಕಲು ‌ಕೂಡ ಹಣವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 16 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ವಕ್ಫ್…

ನಟ, ನಿರ್ದೇಶಕ ಗುರುಪ್ರಸಾದ್ ವಿಧಿವಶ; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ಕನ್ನಡ ಸಿನಿಲೋಕದ ಖ್ಯಾತ ನಟ, ನಿರ್ದೇಶಕ ಗುರುಪ್ರಸಾದ್ ವೇಳೆ ಧಿವಶರಾಗಿದ್ದಾರೆ. ಭಾನುವಾರ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಠ, ಎದ್ದೇಳು ಮಂಜುನಾಥ ಸಹಿತ ಅನೇಕ ಸಿನಿಮಾಗಳ ಮೂಲಕ ಖ್ಯಾತಿಯಾಗಿದ್ದ ನಿರ್ದೇಶಕ 52 ವರ್ಷ ಹರೆಯದ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಅವರು ವಾಸವಿದ್ದರು. ಭಾನುವಾರ ಬೆಳಿಗ್ಗೆ ಅಪಾರ್ಟ್‌ಮೆಂಟ್‌ ಆವರಣದಲ್ಲಿ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ನಿವಾಸಿಗಳ ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಶೋಧಿಸಿದಾಗ ಗುರುಪ್ರಸಾದ್ ವಾಸವಿದ್ದ ಫ್ಲಾಟ್‌ನಲ್ಲಿ ವಾಸನೆ ಬರುತ್ತಿದ್ದುದು ಗೊತ್ತಾಯಿತು. ಕೂಡಲೇ ಮನೆಯನ್ನು ಪರಿಶೀಲಿಸಿದಾಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಮಳೆ ಮುನ್ಸೂಚನೆ; ಮೂರು ದಿನ ವರ್ಷಧಾರೆ ಸಾಧ್ಯತೆ

ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸಹಿತ ಕರಾವಳಿ ಮಾಲೆನಾಡಿನ ಜಿಲ್ಲೆಗಳಲ್ಲಿ ನವೆಂಬರ್​ 6ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲೂ ಮಳೆಯಾ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿದ್ದಿಕಿ ರೀತಿ ಸಿಎಂ ಯೋಗಿ ಹತ್ಯೆಗೂ ಸಂಚು? ಬೆಚ್ಚಿ ಬೀಳಿಸಿದ ನಿಗೂಢ ಸಂದೇಶ

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂಬ ಸಂದೇಶ ಬಂದಿದೆ. ಅಕ್ಟೋಬರ್ 12 ರಂದು ದಸರಾ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಬಾಬಾ ಸಿದ್ದಿಕಿ ಅವರ ಮಗ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಈ ಪ್ರಕರಣ ಬಗ್ಗೆ ತನಿಖೆ ಸಾಗಿರುವಾಗಲೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್ ಅವರಂತೆಯೇ ಹತ್ಯೆ ಮಾಡಲಾಗುವುದು ಎಂಬ ಸಂದೇಶ ಮುಂಬೈ ಪೊಲೀಸರಿಗೆ ಸಿಕ್ಕಿದೆ. ಶನಿವಾರ ಸಂಜೆ ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಈ ಬೆದರಿಕೆ ಸಂದೇಶ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದೇ ವೇಳೆ, ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್…

ಹಾಸನನಾಂಬ ದೇವಿ ಜಾತ್ರೆಗೆ ತೆರೆ; ಲಕ್ಷಾಂತರ ಭಕ್ತರಿಗೆ ಒಲಿದ ದೇವಿ ದರ್ಶನ

ಹಾಸನ: ಹಾಸನದ ಅಧಿದೇವತೆ ಹಾಸನನಾಂಬ ದೇವಿ ಜಾತ್ರೆಗೆ ತೆರೆಬಿದ್ದಿದೆ. ಈ ಮೂಲಕ ವರ್ಷಕ್ಕೊಮ್ಮೆ ನಡೆಯುವ ದೇವಿದರ್ಶನವೂ ಅಂತ್ಯವಾಗಿದೆ. ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ಭಾನುವಾರ ಮುಚ್ಚಲಾಗುತ್ತದೆ. ​​ ಹಾಸನಾನೆಂಬ ದೇವಾಲಯದ ಗರ್ಭಗುಡಿಯನ್ನು ವರ್ಷಕ್ಕೊಮ್ಮೆ ತೆರೆಯಲಾಗುತ್ತದೆ. ಹಾಗಾಗಿ ವಾರ್ಷಿಕ ಜಾತ್ರೆವೈಭವ ಸಾಕ್ಷೀಕರಿಸಲು ಲಕ್ಷಾಂತರ ಜನರು ಹಾಸನಕ್ಕೆ ಆಗಮಿಸಿದ್ದರು. ಮಹೋತ್ಸವದ ಅಂತಿಮ ದಿನವಾದ ಇಂದು ಹಸನಾನೆಂಬ ದೇವಾಲಯದ ಆವರಣ ಭಕ್ತಸಾಗರದಿಂದ ತುಂಬಿತ್ತು. ಅಕ್ಟೋಬರ್​ 24 ರಂದು ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕಳೆದ ೯ ದಿನಗಳಲ್ಲಿ ಸುಮಾರು 20 ಲಕ್ಷ ಭಕ್ತರು ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. ಇದೇ ವೇಳೆ ಈ ಬಾರಿ ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಹೆಚ್ಚು ಆದಾಯ ಹರಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಪಾಲಕ್ಕಾಡ್ ಬಳಿ ರೈಲು ಅವಘಡ; ನಾಲ್ವರು ಗುತ್ತಿಗೆ ಕಾರ್ಮಿಕರ ಸಾವು

ಪಾಲಕ್ಕಾಡ್ : ಕೇರಳದ ಪಾಲಕ್ಕಾಡ್ ಬಳಿ ರೈಲ್ವೆ ಗುತ್ತಿಗೆ ಕಾರ್ಮಿಕರ ಮೇಲೆ ರೈಲು ಹರಿದು ಸಂಭವಿಸಿದ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಸ ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‘ಶಕ್ತಿ’ ಫೈಟ್..! ಸಾಮ್ರಾಟ್ ಟ್ವೀಟ್‌ಗೆ ರಾಮಲಿಂಗಾ ರೆಡ್ಡಿ ಗರಂ; ಬಹಿರಂಗ ಚರ್ಚೆಗೆ ಪಂಥಾಹ್ವಾನ..

ಬೆಂಗಳೂರು: ‘ಶಕ್ತಿ’ ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಸಾಮಾಜಿಕ ಜಾಲತಾಣ ‘X’ನಲ್ಲಿ ಹಾಕಿರುವ ಪೋಸ್ಟ್ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಂಡಾ ಮಂಡಲರಾಗಿದ್ದಾರೆ.‌ ಅಶೋಕ್ ಹೇಳಿಕೆ ಬಗ್ಗೆ ಆಕ್ರೋಶ ಹೊರಹಾಕಿರುವ ಸಚಿವ ರಾಮಲಿಂಗಾ ರೆಡ್ಡಿ, ಟ್ವೀಟ್ ಬಿಟ್ಟು ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ‌ ಈ ಕುರಿತಂತೆ ರಾಮಲಿಂಗ ರೆಡ್ಡಿ ಸಾಮಾಜಿಕ ಜಾಲತಾಣ ‘X’ನಲ್ಲಿ ಎದಿರೇಟು ಎಂಬಂತೆ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಶಕ್ತಿ’ ಯೋಜನೆ ಕುರಿತಂತೆ ಅಂಕಿ ಅಂಶಗಳನ್ನು ಮುಂದಿಟ್ಟಿರುವ ಅವರು, ಮೊಣಚು ಮಾತುಗಳಿಂದ ತಿವಿದಿದ್ದಾರೆ. ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯು…