ದೇವಾಲಯದ ಆಸ್ತಿಗೂ ವಕ್ಫ್ ಕಣ್ಣು! ಸಾರ್ವಜನಿಕರ ಆಕ್ರೋಶ

ಮಂಡ್ಯ: ರಾಜ್ಯದ ಹಲವೆಡೆ ವಿವಾದದ ಬಿರುಗಾಳಿ ಎಬ್ಬಿಸಿರುವ ವಕ್ಫ್ ಜಮೀನು ವಿಚಾರ ಮಂಡ್ಯ ಜಿಲ್ಲೆಯಲ್ಲೂ ಆಕ್ರೋಶದ ಅಲೆ ಎಬ್ಬಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಜಮೀನಿನ ಪಹಣಿಯಲ್ಲೂ ವಕ್ಫ್ ಹೆಸರು ಕಾಣಿಸಿಕೊಂಡಿದೆ. ಸರ್ವೆ ನಂಬರ್ 74 ರಲ್ಲಿರುವ ದೇಗುಲ ಹಾಗೂ ದೇಗುಲಕ್ಕೆ ಸೇರಿ 6 ಗುಂಟೆ ಜಾಗ ವಕ್ಫ್ ಆಸ್ತಿ ಎಂದು ನಮೂದಾಗಿದೆ. ದೇವಸ್ಥಾನದ ಆಸ್ತಿ ವಕ್ಫ್ ಹೆಸರಿಗೆ ಸೇರ್ಪಡೆ ಆಗಿದ್ದಾದರೂ ಹೇಗೆ ಎಂಬ ನಿಗೂಢತೆ ಜನರನ್ನು ಕಾಡಿದೆ. ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಹೆಸರು ಕಳೆದ ಹಲವು ವರ್ಷಗಳಿಂದ ಪಹಣಿಯಲ್ಲಿ ನಮೂದಾಗುತ್ತಿತ್ತು. ಹಲವು ದಶಕಗಳ ಹಿಂದೆಯೇ ಈ ದೇಗುಲ ನಿರ್ಮಾಣವಾಗಿರುವುದು. ಆದರೆ, ಒಂದು ವರ್ಷದ ಹಿಂದೆ ದಿಢೀರಾಗಿ ‘ವಕ್ಫ್ ಆಸ್ತಿ’ ಎಂದು ನಮೂದಿಸಲಾಗಿದೆ. ವಕ್ಫ್ ಒಡೆತನದಲ್ಲಿ ದೇಗುಲವಿದೆ ಎಂಬ ದಾಖಲೆ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನಮ್ಮೂರಲ್ಲಿ ಮುಸ್ಲಿಂ ಪ್ರಾಬಲ್ಯವೂ…

‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

ಬೆಂಗಳೂರು: ‘KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ ‘ಶಕ್ತಿ’ ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದಿರುವ ಡಿಕೆಶಿ, ‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನೂ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು ತಮ್ಮ ಹೇಳಿಕೆ ಬಗ್ಗೆ ವ್ಯಾಪಕ ಚರ್ಚೆ, ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರಿಗೆ ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು. ಆರ್ಥಿಕವಾಗಿ ಸದೃಢವಾಗಿರುವವರನ್ನು ಉಲ್ಲೇಖಿಸಿದ್ದೆ. ಐಟಿಬಿಟಿ ಸಂಸ್ಥೆಯವರು, ಎಂಎನ್‌ಸಿ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು…

ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್; ಅಶೋಕ್

ಬೆಂಗಳೂರು: ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್‌ ಸರ್ಕಾರ. ಹಾಗಿರುವಾಗ ಅದು ಅರಣ್ಯ ಭೂಮಿಯಾಗಲು ಹೇಗೆ ಸಾಧ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದಿಂದ 65 ಎಕರೆ ಜಾಗವನ್ನು ಎಚ್ಎಂಟಿಗೆ ನೀಡಿದ್ದೆವು. ಈಗ ಆ ಜಾಗದಲ್ಲಿ ಅರಣ್ಯ ನಾಶವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇದು ಅರಣ್ಯ ಭೂಮಿ ಎನ್ನುವುದಾದರೆ, ಇದನ್ನು ನೀಡಿದ್ದೇ ಕಾಂಗ್ರೆಸ್ ಸರ್ಕಾರ ಎಂಬುದನ್ನು ನೆನಪಿಸಿಕೊಳ್ಳಬೇಕು ಎಂದರು. ಎಚ್ಎಂಟಿ ಕಾರ್ಖಾನೆಯನ್ನು ಅಂದಿನ ಪ್ರಧಾನಿ ಜವಹರಲಾಲ್ ನೆಹರು ಉದ್ಘಾಟಿಸಿದ್ದರು‌. ಅವರೇ ಜಾಗ ನೀಡಿ, ಈಗ ಅದು ಅರಣ್ಯ ಭೂಮಿ ಎಂದು ಹೇಳುತ್ತಿದ್ದಾರೆ. ನಾನು ಒಂದನೇ ತರಗತಿಯಲ್ಲಿ ಇದ್ದಾಗಲೂ ಅದು ಎಚ್ಎಂಟಿಗೆ ಸೇರಿತ್ತು. ಈಗ ಇವರು ಮಾಜಿ ಪ್ರಧಾನಿ ನೆಹರು ವಿರುದ್ಧ ಪ್ರಕರಣ ದಾಖಲಿಸುತ್ತಾರಾ? ಅಂದಿನ ಕಾಂಗ್ರೆಸ್…

ವಕ್ಫ್ ಜಮೀನು ವಿವಾದ: ನವೆಂಬರ್ 4 ರಿಂದ ಬಿಜೆಪಿ 

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ಬಳಿಕ ಕೋಲಾರದಲ್ಲಿ ದೇವಸ್ಥಾನದ ಆಸ್ತಿಗಳನ್ನು ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಲಾಗಿದೆ. ನಾಗಮಂಗಲ, ಚನ್ನಪಟ್ಟಣ, ಬೆಳಗಾವಿ ಮೊದಲಾದ ಕಡೆಗಳಲ್ಲಿ ರೈತರ ಜಮೀನುಗಳನ್ನು ಕೊಳ್ಳೆ ಹೊಡೆಯಲು ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ ಎಂದು ತಿಳಿಸಿದರು. ಭೂಗಳ್ಳರು ಮಾತ್ರವಲ್ಲದೆ, ಸರ್ಕಾರವೇ ಅಧಿಕೃತವಾಗಿ ಒತ್ತುವರಿ ಆರಂಭ ಮಾಡಿದೆ. ಇದರ ವಿರುದ್ಧ ರೈತ ಸಂಘಟನೆಗಳು ತೀವ್ರವಾಗಿ ಪ್ರತಿಭಟಿಸಬೇಕು. ಹಿಂದೆ ಮುಸ್ಲಿಂ ರಾಜರು ದಾಳಿ ಮಾಡಿ, ಮತಾಂಧತೆ ಮೆರೆದಿದ್ದರು. ಟಿಪ್ಪು ಸುಲ್ತಾನ ಕೊಡಗಿನಲ್ಲಿ ಮತಾಂತರ ಮಾಡಿರುವುದು ಇದಕ್ಕೆ ಸಾಕ್ಷಿ. ಇದೇ ರೀತಿ ಈಗ ಜಮೀನಿನ ಕಬಳಿಕೆ ನಡೆಯುತ್ತಿದೆ.…

ದೇಶದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ; ಗಡಿಯಲ್ಲಿ ಮೋದಿ ಗರ್ಜನೆ

ಕಚ್ : ಪ್ರಧಾನಿ ನರೇಂದ್ರ ಮೋದಿ ಅವರು ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ. ಗುಜರಾತಿನ ಕಚ್ ಪ್ರದೇಶದಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ ದೀಪಗಳ ಹಬ್ಬದ ಶುಭಾಶಯ ಹಂಚಿಕೊಂಡ ಮೋದಿ, ಯೋಧರ ಬಗ್ಗೆ ಕುಶಲೋಪರಿ ವಿಚಾರಿಸಿದರು. ಈ ವೇಳೆ ಮಾತನಾಡಿದ ಮೋದಿ, ದೇಶ ರಕ್ಷಣೆ ವಿಷಯದಲ್ಲಿ ಮಿಲಿಟರಿ ಶಕ್ತಿ ಮೇಲೆ ದೇಶದ ಜನತೆಗೆ ನಂಬಿಕೆಯಿದೆ ಎಂದರು. ದೇಶದ ನೆಲದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದ ಅವರು, ನಮ್ಮ ನೀತಿಗಳು ನಮ್ಮ ಸಶಸ್ತ್ರ ಪಡೆಗಳ ಸಂಕಲ್ಪದೊಂದಿಗೆ ಹೊಂದಿಕೊಂಡಿವೆ ಎಂದರು. ಇದೇ ವೇಳೆ, ಯೋಧರಿಂದಾಗಿ ದೇಶವು ಸುರಕ್ಷಿತವಾಗಿದೆ ಎಂದು ಹೇಳುವ ಮೂಲಕ ಸೈನ್ಯವನ್ನು ಹುರಿದುಂಭಿಸಿದರು.

ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ:  ಆರ್‌.ಅಶೋಕ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ ಮಾತು ಆಡುತ್ತಾರೆ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎರಡೂ ಪಕ್ಷ ಇರುವುದರಿಂದ ಗೆಲುವು ಸಮೀಪದಲ್ಲಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಬಿಜೆಪಿಯ ಸಾಂಪ್ರದಾಯಿಕ ಮತಗಳೂ ಸಿಗುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಹಣವನ್ನು ಬೇರೆಡೆ ವರ್ಗಾಯಿಸಿರುವುದು ಮೊದಲಾದ ಕಾರಣಗಳಿಂದ ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿಲ್ಲ ಎಂದರು. ಈ 16 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕಾಗಲೀ, ರಾಮನಗರಕ್ಕಾಗಲೀ ಭೇಟಿ ನೀಡಿಲ್ಲ. ಭೇಟಿ ನೀಡಲು ಕೂಡ ಸಮಯವಿಲ್ಲವೆಂದಾದರೆ ಅಭಿವೃದ್ಧಿ ಹೇಗೆ…

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

ಬೆಂಗಳೂರು: ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರಿಂದ ತಯಾರಿ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ ಆಂಜನೇಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಿದ್ದರಾಮಯ್ಯ ಅವರ ಸರ್ಕಾರ ಮುಂದಾಗಿದೆ. ಶೋಷಿತರ ಪರವಾಗಿ ದಿಟ್ಟ ತೀರ್ಮಾನ ತೆಗೆದುಕೊಂಡಿದೆ. ಏಕೆ ಸದಸ್ಯ ಆಯೋಗವನ್ನು ಈಗ ರಚನೆ ಮಾಡಿದ್ದು. ಈ ಆಯೋಗವು ಮೂರು ತಿಂಗಳಲ್ಲಿ ವರದಿಯನ್ನು ನೀಡಬೇಕು. ನಾಲ್ಕನೇ ತಿಂಗಳಲ್ಲಿ ಇದು ಅನುಷ್ಠಾನಕ್ಕೆ ಬರಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ಬಡವರ, ಶೋಷಿತರ, ತುಳಿತಕ್ಕೆ ಒಳಗಾದವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಹರಿಕಾರರು. ಒಳ ಮೀಸಲಾತಿ ವಿಚಾರ ನಿರ್ಧಾರವಾಗುವ ತನಕ, ಹೊಸದಾಗಿ ನೇಮಕಾತಿ ಆದೇಶ ಹೊರಡಿಸಬಾರದು ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಒಳ ಮೀಸಲಾತಿ ಪರವಾಗಿ ನಿಂತ…

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ ನೋಡಲಾಯಿತು. ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್ಸ್‌ ಮುಂಭಾಗದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್ಸಾರ್ಟಿಸಿ ಅಧ್ಯಕ್ಷ ಎಸ್.‌ ಆರ್.‌ ಶ್ರೀನಿವಾಸ್‌ (ವಾಸು) ಹಾಗೂ ಉಪಾಧ್ಯಕ್ಷ ಮೊಹಮ್ಮದ್‌ ರಿಜ್ವಾನ್‌ ನವಾಬ್‌ ಉಪಸ್ಥಿತಿಯಲ್ಲಿ, ನೂತನ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವಾಗ ಅಪಘಾತಕ್ಕೆ ಒಳಪಟ್ಟು ಮೃತರಾದ 2 ಸಿಬ್ಬಂದಿಗಳ ಅವಲಂಭಿತರಿಗೆ ಸಾರಿಗೆ ಸುರಕ್ಷಾ ಪರಿಹಾರ ವಿಮಾ ಯೋಜನಡಿ ತಲಾ ರೂ.1 ಕೋಟಿ ಪರಿಹಾರ ಚೆಕ್‌ನ್ನು ಹಾಗೂ ಅಪಘಾತ ಹೊರತುಪಡಿಸಿ ಖಾಯಿಲೆ ಇತ್ಯಾದಿ ಕಾರಣಗಳಿಂದ ಮೃತರಾದ 5 ಸಿಬ್ಬಂದಿಗಳ ಅವಲಂಭಿತರಿಗೆ ಕುಟುಂಬ ಕಲ್ಯಾಣ ಯೋಜನೆ ಅಡಿ ತಲಾ…

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕೋರಿಕೆಯನ್ನು ಮನ್ನಿಸಿ ಹೈಕೋರ್ಟ್ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿರುವ ನಟ ದರ್ಶನ್​ಗೆ ಹೈಕೋರ್ಟ್ ಆದೇಶದಿಂದ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ನೀಡಿದ್ದು, ಜಾಮೀನು ಪಡೆದ ಬಳಿಕ ಪ್ರತಿ ವಾರವೂ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು. ಜೊತೆಗೆ ದರ್ಶನ್ ಪಾಸ್ಪೋರ್ಟನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಸೂಚಿಸಿದೆ. ಈ ಜಾಮೀನು ಅವಧಿಯಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ , ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ” ಪ್ರಜಾ ಸಂದೇಶ ದತ್ತಿ ಪ್ರಶÀಸ್ತಿ “ ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು…