ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

ಬೈಂದೂರು: ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಭವ್ಯ ಪಂಜಿನ ಮೆರವಣಿಗೆ ಹಾಗೂ ವಿಶೇಷ ಸಭಾ ಕಾರ್ಯಕ್ರಮ ನಡೆಯಿತು. ದೇಶಭಕ್ತಿಯ ಭಾವನೆ ಜಾಗೃತಗೊಳಿಸುವುದು ಹಾಗೂ ಸಮಾಜದಲ್ಲಿ ರಾಷ್ಟ್ರೀಯತೆಯ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಾರು ಕಾರ್ಯಕರ್ತರು ಹಾಗೂ ದೇಶಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಂಡರು. ಭಾರತ್ ಮಾತಾ ಕೀ ಜೈ ಘೋಷಣೆಗಳೊಂದಿಗೆ ಪಂಜಿನ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮುಖ ಭಾಷಣಕಾರ ಕೇಶವ್ ಬಂಗೇರ, ದೇಶದ ಐಕ್ಯತೆ, ಸಮಗ್ರತೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದು ಅಖಂಡ ಭಾರತ ಸಂಕಲ್ಪದ ಪ್ರಮುಖ ಆಶಯವಾಗಿದೆ ಎಂದರು.  ದೇಶದ ವಿಭಜನೆಯ ಕಹಿ ನೆನಪುಗಳನ್ನು ಮೆಲುಕು ಹಾಕುವುದರ ಜತೆಗೆ, ಭವಿಷ್ಯದ ಯುವಪೀಳಿಗೆಗೆ ದೇಶದ ಇತಿಹಾಸ ಹಾಗೂ ದೇಶಕ್ಕಾಗಿ ತ್ಯಾಗ-ಬಲಿದಾನ ಮಾಡಿದ ಮಹಾನ್ ವೀರರ ಆದರ್ಶಗಳನ್ನು ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು. ಇಂದಿನ ಜೆನ್-ಜಿ ಹಾಗೂ…

1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್: ವಿಜಯ್ ಘೋಷಣೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯದ 1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ ಮೂರು ಉಚಿತ ಎಲ್‌ಪಿಜಿ ಸಿಲಿಂಡರ್ ನೀಡುವ ಮಹತ್ವದ ಯೋಜನೆ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ನಿಯಮ 110ರಡಿ ಘೋಷಣೆ ಮಾಡಿದ ವಿಜಯ್, ವಾರ್ಷಿಕ ₹2.5 ಲಕ್ಷದವರೆಗೆ ಆದಾಯ ಹೊಂದಿರುವ ಕುಟುಂಬಗಳು, ಸಣ್ಣ ಮತ್ತು ಅತಿ ಸಣ್ಣ ರೈತರು ಹಾಗೂ ಬಿಪಿಎಲ್ ಕುಟುಂಬಗಳು ಯೋಜನೆಗೆ ಅರ್ಹರಾಗಲಿವೆ ಎಂದರು. ಯೋಜನೆಗೆ ವಾರ್ಷಿಕ ₹4,000 ಕೋಟಿಗೂ ಅಧಿಕ ವೆಚ್ಚವಾಗಲಿದ್ದು, ಸಿಲಿಂಡರ್‌ಗಳ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವಿಸ್ತರಿಸಲಾಗಿದೆ. ಅಕ್ಟೋಬರ್ 2ರಿಂದ ಜಿಲ್ಲೆಗಳ ನಡುವೆ ಸಂಚರಿಸುವ ಸಾಮಾನ್ಯ ಬಸ್‌ಗಳ ಜತೆಗೆ ಎಕ್ಸ್‌ಪ್ರೆಸ್ ಮತ್ತು ಡಿಲಕ್ಸ್ ಬಸ್‌ಗಳಲ್ಲೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ‘ವೆಟ್ರಿ ಪಯಣಂ ತಿಟ್ಟಂ’ ಹೆಸರಿನಲ್ಲಿ ಯೋಜನೆ ಜಾರಿಗೆ ಬರಲಿದೆ. ಮತ್ತೊಂದೆಡೆ,…

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ನವದೆಹಲಿ: ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನ ಜಾರಿಗೊಳಿಸುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರ ಪೀಠವು, ಮುಂದಿನ CWMA ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಗಳ ಬಳಿಕ ಕರ್ನಾಟಕ ಹಾಗೂ ತಮಿಳುನಾಡು ಹೊಸ ಅಂಕಿ-ಅಂಶಗಳೊಂದಿಗೆ ಹಾಜರಾಗುವಂತೆ ಸೂಚಿಸಿದೆ. ತಮಿಳುನಾಡು ಪರ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್, ರಾಜ್ಯಕ್ಕೆ ಅಗತ್ಯವಿರುವಷ್ಟು ಕಾವೇರಿ ನೀರು ಲಭ್ಯವಾಗುತ್ತಿಲ್ಲ ಎಂದು ವಾದಿಸಿದರು. ಹಿಂದಿನ ಅವಧಿಯಲ್ಲಿ ನೀರು ಬಿಡುಗಡೆ ಮಾಡುವಲ್ಲಿ ಕೊರತೆಯಾಗಿದ್ದು, ಕರ್ನಾಟಕ ಆ ಕೊರತೆಯನ್ನು ಸರಿದೂಗಿಸಬೇಕು ಎಂದು ಅವರು ಕೋರಿದರು. ಕರ್ನಾಟಕದ ಜಲಾಶಯಗಳಲ್ಲಿ ಸುಮಾರು 78 ಟಿಎಂಸಿ ನೀರು ಸಂಗ್ರಹವಿದೆ ಎಂದೂ ವಾದಿಸಿದರು. ಕರ್ನಾಟಕ ಪರ ಹಿರಿಯ ವಕೀಲ ಶ್ಯಾಮ್ ದಿವಾನ್, CWMA ಸಭೆ…

ನಾಗೇಂದ್ರ ರಾಜೀನಾಮೆಗೆ ಆಗ್ರಹ: ವಿಕಾಸಸೌಧದ ಗೇಟ್ ಬಳಿ ಬಿಜೆಪಿ ಹೈಡ್ರಾಮಾ

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾ ನಡೆದಿದೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪರಿಷತ್ ಸದಸ್ಯರಾದ ಸಿ.ಟಿ. ರವಿ, ರವಿಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ವಿಕಾಸಸೌಧದ ಗೇಟ್ ಮುಂಭಾಗದ ರಸ್ತೆಯಲ್ಲೇ ಕುಳಿತು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಮುಂದಾದಾಗ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಬಳಿಕ ವಶಕ್ಕೆ ಪಡೆದ ಬಿಜೆಪಿ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ವಾಲ್ಮೀಕಿ…

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಸಾಫ್ಟ್‌ವೇರ್ ಮೇಲ್ದರ್ಜೆ: ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಬಾಕಿ ಉಳಿದಿರುವ ಬಗರ್ ಹುಕುಂ (ಅಕ್ರಮ-ಸಕ್ರಮ) ಭೂಮಿ ಮಂಜೂರಾತಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸರ್ಕಾರಿ ಸಾಫ್ಟ್‌ವೇರ್‌ನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 94ರಡಿ ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅವಕಾಶವಿದೆ ಎಂದರು. 2023ರ ಸೆಪ್ಟೆಂಬರ್ 26ರಿಂದ 2024ರ ಜನವರಿ 21ರವರೆಗೆ ಫಾರ್ಮ್‌ 50-53 ಮೂಲಕ ಅರ್ಜಿಗಳನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿ ಸ್ವೀಕರಿಸಲಾಗಿತ್ತು. ಈ ಅರ್ಜಿಗಳ ಪೈಕಿ ಹಲವು ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ ಎಂದು ಹೇಳಿದರು. ಈಗಾಗಲೇ ಭೂಮಿ ಮಂಜೂರಾಗಿ ಸಾಗುವಳಿ ಪ್ರಮಾಣಪತ್ರ ನೀಡಿದ್ದರೂ, ಕಂದಾಯ ದಾಖಲೆಗಳಲ್ಲಿ ನೋಂದಣಿ ಆಗದ ಪ್ರಕರಣಗಳನ್ನು ಸಂಬಂಧಪಟ್ಟ ಸಾಫ್ಟ್‌ವೇರ್‌ನಲ್ಲಿ ದಾಖಲಿಸಿ ಮುಂದಿನ ಪ್ರಕ್ರಿಯೆ ನಡೆಸಲಾಗುವುದು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮೊದಲು ಪ್ರೊಫಾರ್ಮಾ 1-5…

ಶಿವಮೊಗ್ಗದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬಿಗ್ ಶಾಕ್; 28 ಗುತ್ತಿಗೆದಾರರಿಗೆ ₹68 ಕೋಟಿ ದಂಡ

ಶಿವಮೊಗ್ಗ: ಮರಳು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಜಿಲ್ಲೆಯ 28 ಗುತ್ತಿಗೆದಾರರಿಗೆ ಸರ್ಕಾರ ಒಟ್ಟು ₹68 ಕೋಟಿಗೂ ಅಧಿಕ ದಂಡ ವಿಧಿಸುವ ನೋಟಿಸ್ ನೀಡಿದೆ. ವಿಧಾನ ಪರಿಷತ್‌ನಲ್ಲಿ ಎಂಎಲ್‌ಸಿ ಬಲ್ಖೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಕ್ರಮ ಗಣಿಗಾರಿಕೆ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ದಬ್ಬನಗದ್ದೆ ಗ್ರಾಮದಲ್ಲಿ 2,116 ಮೆಟ್ರಿಕ್ ಟನ್ ಮರಳನ್ನು ಅಕ್ರಮವಾಗಿ ತೆಗೆದ ಪ್ರಕರಣದಲ್ಲಿ ₹1.08 ಕೋಟಿ ದಂಡ ವಿಧಿಸಲು ನೋಟಿಸ್ ನೀಡಲಾಗಿದೆ. ಬಾಕಿ ದಂಡದ ಮೊತ್ತದ ಕುರಿತು ಜಿಲ್ಲಾಮಟ್ಟದ ಮರಳು ಸಮಿತಿ ಮೂಲಕ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ. 2016ರ ತಿದ್ದುಪಡಿ ನಿಯಮಗಳಡಿ ಜಿಲ್ಲೆಯಲ್ಲಿ 38 ಮರಳು ಗಣಿಗಾರಿಕೆ ಗುತ್ತಿಗೆಗಳಿಗೆ ಅನುಮೋದನೆ ನೀಡಲಾಗಿತ್ತು. ಈ ಪೈಕಿ 34 ಗುತ್ತಿಗೆಗಳ ಅವಧಿ ಮುಗಿದಿದ್ದು, ನಾಲ್ಕು ಗುತ್ತಿಗೆಗಳು…

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಢಾಕಾ: ಬಾಂಗ್ಲಾದೇಶದ ರಂಗ್‌ಪುರದಲ್ಲಿ ಬೀಗ ಹಾಕಿದ ಮನೆಯೊಳಗೆ ನಿವೃತ್ತ ಶಾಲಾ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಹಿಂದೂಗಳ ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಗಣಪತಿ ಚಕ್ರವರ್ತಿ (65), ಅವರ ಪತ್ನಿ ಪ್ರೀತಿಲತಾ ಚಕ್ರವರ್ತಿ (50), ಪುತ್ರಿ ಅಗಾಮಿ ಚಕ್ರವರ್ತಿ ಪ್ರಾರ್ಥಿ (23) ಹಾಗೂ ಪುತ್ರ ಪ್ರಿಯಂ ಚಕ್ರವರ್ತಿ (12) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕುಟುಂಬದ ಇಬ್ಬರು ನೆರೆಹೊರೆಯವರಾದ ಸಿದ್ಧಾರ್ಥ ದಾಸ್ (19) ಮತ್ತು ಮುಗ್ಧಾ ದಾಸ್ (23) ಯಾಬಾ ಮಾದಕವಸ್ತು ಸೇವಿಸಲು ಮನೆಯ ಮೇಲ್ಛಾವಣಿಗೆ ತೆರಳಿದ್ದರು. ಶಬ್ದ ಕೇಳಿ ಅಲ್ಲಿಗೆ ಬಂದ ಗಣಪತಿ ಅವರನ್ನು ಗಮನಿಸಿದ ಹಿನ್ನೆಲೆಯಲ್ಲಿ ಆರೋಪಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ನಂತರ ವಿಷಯ ತಿಳಿಯಲು ಹೊರಬಂದ ಅವರ ಪುತ್ರಿ ಹಾಗೂ 12 ವರ್ಷದ ಪುತ್ರನನ್ನೂ ಆರೋಪಿಗಳು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮುಖಗಳನ್ನು ದಹನಕಾರಿ ವಸ್ತುವಿನಿಂದ…

ಕಾನೂನು ಸುವ್ಯವಸ್ಥೆ ವೈಫಲ್ಯ; ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ ಎಂದ ಬಿಜೆಪಿ

ಬೆಂಗಳೂರು: ‘ವಂದೇ ಮಾತರಂ’ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳು, ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ, ಜೈಲುಗಳಿಂದ ಕೈದಿಗಳ ಪರಾರಿ, ಡ್ರಗ್ಸ್ ದಂಧೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸುವಲ್ಲಿ ಗೃಹ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದೆ. ‘ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ರಾಜೀನಾಮೆ ನೀಡಬೇಕಿತ್ತು’ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಕನಿಷ್ಠ ಗೌರವ ನೀಡದ ಕಾಂಗ್ರೆಸ್‌ನಿಂದ ಬಿಜೆಪಿ ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ ಎಂದು ಬಿಜೆಪಿ ಹೇಳಿದೆ. ರಾಜ್ಯದಲ್ಲಿ ದಿನನಿತ್ಯ ಅಪರಾಧಗಳು ನಡೆಯುತ್ತಿದ್ದರೂ ಅವುಗಳನ್ನು ತಡೆಯಲು ವಿಫಲವಾಗಿರುವ ಪ್ರಿಯಾಂಕ್ ಖರ್ಗೆ, ನೈತಿಕ ಹೊಣೆ ಹೊತ್ತು ಈಗಾಗಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು ಎಂದು ಟೀಕಿಸಿದೆ. ತಮ್ಮ ಸ್ವಕ್ಷೇತ್ರ ಹಾಗೂ…

KEA ಸಿಇಟಿ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ; ಆ.24ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ UGCET-2026 ಕೋರ್ಸ್‌ಗಳ ಎರಡನೇ ಸುತ್ತಿನ ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿ.ಎಸ್ಸಿ ನರ್ಸಿಂಗ್, ಬಿ-ಫಾರ್ಮಾ, ಡಿ-ಫಾರ್ಮಾ, ಬಿಪಿಟಿ, ಬಿಪಿಒ ಹಾಗೂ ಅಲೈಡ್ ಹೆಲ್ತ್ ಸೈನ್ಸ್ ಸೇರಿದಂತೆ ವಿವಿಧ ಕೋರ್ಸ್‌ಗಳ ಸೀಟು ಹಂಚಿಕೆ ವಿವರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. ಇದರ ಜೊತೆಗೆ UGNEET-2026 ಅಡಿಯಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನೂ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಆ.24ರ ಸಂಜೆ 4ರವರೆಗೆ ಅವಕಾಶ ಸೀಟು ಹಂಚಿಕೆಯಲ್ಲಿ…

ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಬಹುದು. ತುಮಕೂರು ಹಾಗೂ ಮಂಡ್ಯದಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲೂ ಮಳೆಯ ಸಾಧ್ಯತೆಯಿದೆ. ಧಾರವಾಡ,…