ಮಂಡ್ಯ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜಕೀಯದಿಂದ ನಿವೃತ್ತಿ ಪಡೆಯುವ ನಿರ್ಧಾರವನ್ನು ಬಹಿರಂಗಪಡಿಸಿದರು. ಆದರೆ, ಬೆಂಬಲಿಗರು “ಇನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕು” ಎಂದು ಒತ್ತಾಯಿಸಿದರು. ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸುದೀರ್ಘವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರಾಜಕೀಯ ಕ್ಷೇತ್ರ ಕಲುಷಿತಗೊಂಡಿರುವುದರಿಂದ ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ. “ನನಗೆ ಈಗ 79 ವರ್ಷ. ಸರ್ಕಾರದ ಅವಧಿ ಮುಗಿಯುವ ವೇಳೆಗೆ 81-82 ವರ್ಷ ವಯಸ್ಸಾಗಿರುತ್ತದೆ. ಹಿಂದಿನಂತೆ ಆರೋಗ್ಯ ಮತ್ತು ಉತ್ಸಾಹ ಇರುವುದಿಲ್ಲ. 2028ರ ವೇಳೆಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿದ್ದು, ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಮಯ ಬಂದಿದೆ” ಎಂದು ಅವರು ಹೇಳಿದ್ದಾರೆ. 1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ…
Author: admin
ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ
ಚೆನ್ನೈ: ನಿರ್ದೇಶಕ ವೆಂಕಿ ಅಟ್ಲೂರಿ ಅವರ ಬಹುನಿರೀಕ್ಷಿತ ಆಕ್ಷನ್-ಫ್ಯಾಮಿಲಿ ಎಂಟರ್‌ಟೈನರ್ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’ ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಮದುವೆ ಸಂಭ್ರಮವನ್ನು ಬಿಂಬಿಸುವ ಈ ಹಾಡಿನಲ್ಲಿ ನಟ ಸೂರ್ಯ ಮತ್ತು ಮಮಿತಾ ಬೈಜು ಅವರ ನೃತ್ಯ ಪ್ರಮುಖ ಆಕರ್ಷಣೆಯಾಗಿದೆ. ವಿಶೇಷವೆಂದರೆ, ಈ ಹಾಡಿಗೆ ಸೂರ್ಯ ಅವರೇ ಧ್ವನಿ ನೀಡಿದ್ದು, ಹಾಡಿಗೆ ಮತ್ತಷ್ಟು ವಿಶೇಷತೆ ತಂದಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸಿದ್ದು, ಕೆನ್ ಕರುಣಾಸ್ ಸಾಹಿತ್ಯ ಬರೆದಿದ್ದಾರೆ. ಈ ಹಾಡನ್ನು ಸೂರ್ಯ ಹಾಡಿರುವ ಬಗ್ಗೆ ಜೂನ್ ತಿಂಗಳಲ್ಲೇ ಜಿ.ವಿ. ಪ್ರಕಾಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಬ್ಲಾಕ್‌ಬಸ್ಟರ್ ನಿರ್ದೇಶಕ ವೆಂಕಿ ಅಟ್ಲೂರಿ ನಿರ್ದೇಶಿಸಿರುವ ಈ ಚಿತ್ರವನ್ನು ಸೂರ್ಯದೇವರ ನಾಗ ವಂಶಿ ಮತ್ತು ಸಾಯಿ ಸೌಜನ್ಯ ನಿರ್ಮಿಸಿದ್ದಾರೆ. ಭಾವನೆ, ಹಾಸ್ಯ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ…
ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.
ಚೆನ್ನೈ: ನಿರ್ದೇಶಕ ಶಹದ್ ಅವರ ಬಹುನಿರೀಕ್ಷಿತ ಮಲಯಾಳಂ ತನಿಖಾ ಥ್ರಿಲ್ಲರ್ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. 11 ಐಕಾನ್ಸ್ ಫಿಲ್ಮ್ ಪ್ರೊಡಕ್ಷನ್ಸ್ ಸಂಸ್ಥೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, “ಎಫ್‌ಐಆರ್ ದಾಖಲಾಗಿದೆ, ಶೀಘ್ರದಲ್ಲೇ ಚಾರ್ಜ್‌ಶೀಟ್ ಬರಲಿದೆ” ಎಂಬ ಟ್ಯಾಗ್‌ಲೈನ್ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ಮೋಷನ್ ಪೋಸ್ಟರ್‌ನಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಂಭೀರ ಭಾವದಲ್ಲಿ ಕಾಣಿಸಿಕೊಂಡಿದ್ದು, ನಟಿ ಪಾರ್ವತಿ ತಿರುವೋತ್ತು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮೂಲಗಳ ಪ್ರಕಾರ, ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಪೊಲೀಸ್ ಅಧಿಕಾರಿಯ ಪತ್ನಿಯಾಗಿ ಬಳಿಕ ಪೊಲೀಸ್ ಇಲಾಖೆಗೆ ಸೇರುವ ಮಹಿಳೆಯ ಪಾತ್ರವನ್ನು ಅವರು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಮ್ಯಾಥ್ಯೂ ಥಾಮಸ್, ಉನ್ನಿಮಯ ಪ್ರಸಾದ್, ವಿಜಯ ರಾಘವನ್, ಸಿದ್ಧಾರ್ಥ್ ಭರತನ್ ಮತ್ತು ಅಜೀಸ್ ನೆಡುಮಂಗಡ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಪ್ರಕಾಶನ್ ಪರಕ್ಕಟ್ಟೆ’ ಖ್ಯಾತಿಯ ಶಹದ್ ನಿರ್ದೇಶಿಸಿರುವ ಈ ಚಿತ್ರದ ಕಥೆಯನ್ನು ಪಿ.ಎಸ್.…
ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ
ಬೆಂಗಳೂರು: ದೇಶದ ವಿದ್ಯಾರ್ಥಿಗಳ ಮತ್ತು ಯುವ ಜನಾಂಗದ ಐತಿಹಾಸಿಕ ಪ್ರತಿಭಟನೆಯ ನಂತರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಶಿಕ್ಷಣ ಸಚಿವರ ರಾಜಿನಾಮೆಯನ್ನು ರಾಜಕೀಯ ಕಾರಣಗಳಿಗೆ ಹೋಲಿಕೆ ಮಾಡಲು ಹೋಗಿ ಕರ್ನಾಟಕ ಬಿಜೆಪಿ ಬಾಲ ಭವನದ ಅಧ್ಯಕ್ಷ ವಿಜಯೇಂದ್ರ ಅವರು ತಮ್ಮ ವ್ಯಕ್ತಿತ್ವಕ್ಕೆ ತಾವೇ ಮಸಿ ಬಳಿದುಕೊಂಡಿರುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ವಿಜಯೇಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು, ರಾಜಕೀಯ ಹೇಳಿಕೆ ನೀಡುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ಗೃಹ ಸಚಿವರಾದ ಪ್ರಿಯಾಂಕ ಖರ್ಗೆ ರವರ ಹೆಸರುಗಳನ್ನು ಬಳಸಿಕೊಂಡು ಟೀಕೆ ಮಾಡುವ ನೆಪದಲ್ಲಿ ತಾವೇ ಬೆತ್ತಲಾಗಿರುತ್ತಾರೆ ಎಂದು ವಿಜಯೇಂದ್ರ ಬಗ್ಗೆ ಲೇವಡಿ ಮಾಡಿದ್ದಾರೆ. ದೇಶದ 11 ವರ್ಷಗಳ ಕೇಂದ್ರ ಬಿಜೆಪಿ…
ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ
ಬೆಂಗಳೂರು: ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಕುರಿತು ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ನೇತೃತ್ವದ ನಿಯೋಗ ಆಗಸ್ಟ್ 3ರಂದು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದಶಕಗಳಿಂದ ಮುಂದುವರಿದಿರುವ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಘರ್ಷದ ಬದಲು ಸಂವಾದವೇ ಶಾಶ್ವತ ಪರಿಹಾರ ನೀಡಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಳೆಯ ಕೊರತೆ ಇರುವ ವರ್ಷಗಳಲ್ಲಿ ಜಲಾಶಯಗಳಲ್ಲಿನ ನೈಜ ನೀರಿನ ಸಂಗ್ರಹವನ್ನು ಆಧರಿಸಿ ವೈಜ್ಞಾನಿಕ ಹಾಗೂ ನ್ಯಾಯಸಮ್ಮತ ‘ಡಿಸ್ಟ್ರೆಸ್ ಶೇರಿಂಗ್’ (Distress Sharing Formula) ಸೂತ್ರವನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ಬೆಂಗಳೂರು ಸೇರಿದಂತೆ ಕರ್ನಾಟಕದ ನಗರಗಳ ಹಾಗೂ ತಮಿಳುನಾಡಿನ…
ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್
ಬೆಂಗಳೂರು: ಚಿತ್ರದುರ್ಗದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಳಿತ, ನೇಮಕಾತಿ ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇತ್ತೀಚಿನ ಪರೀಕ್ಷಾ ಅಕ್ರಮಗಳ ಹಿನ್ನೆಲೆಯಲ್ಲಿ ಎಲ್ಲ ನೇಮಕಾತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪ್ರಶ್ನೆ ಪತ್ರಿಕೆಗಳಿಗೆ ಬಿಗಿ ಭದ್ರತೆ ಹಾಗೂ ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆಯ ದಾಖಲಾತಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಹೊಸ ಬೋರ್‌ವೆಲ್ ಕೊರೆಯುವಿಕೆ, ದುರಸ್ತಿ ಮತ್ತು ವಿದ್ಯುತ್ ಸಂಪರ್ಕದ ಎಲ್ಲ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಕಾಪಾಡುವಂತೆ ಸೂಚಿಸಿರುವ ಅವರು, ಬೋರ್‌ವೆಲ್‌ಗಳ ಆಳವನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಿ ಅಕ್ರಮಗಳಿಗೆ ಕಡಿವಾಣ…
‘ಕೈ’ ಪಾಳಯದಲ್ಲಿ ಕ್ಷಿಪ್ರ ವಿದ್ಯಮಾನ; ‘ಹೈ’ ಒಪ್ಪಿದರೆ ಬುಧವಾರವೇ ಸಂಪುಟ ವಿಸ್ತರಣೆ ಸಾಧ್ಯತೆ
ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತ ಮಹತ್ವದ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಸೋಮವಾರ ಸಂಜೆ 6 ಗಂಟೆಗೆ ದೆಹಲಿಗೆ ಪಕ್ಷದ ಹೈಕಮಾಂಡ್ ಕರೆದಿದೆ. ಆಗಸ್ಟ್ ಮೊದಲ ವಾರದಲ್ಲಿ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ಮತ್ತಷ್ಟು ಮುಂದೂಡದಿರಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ಸಚಿವ ಸಂಪುಟ ವಿಸ್ತರಣೆ ಯಾವುದೇ ಕ್ಷಣದಲ್ಲಿ ನಡೆಯಬಹುದು ಎಂದು ಈಗಾಗಲೇ ಸೂಚನೆ ನೀಡಿದ್ದರು. ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಸಮೀಕರಣಗಳನ್ನು ಪರಿಗಣಿಸಿ ಸಚಿವರ ಪಟ್ಟಿಯನ್ನು ರಾಜ್ಯ ನಾಯಕರು ಸಿದ್ಧಪಡಿಸಿದ್ದು, ಅದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಂತಿಮ ಒಪ್ಪಿಗೆ ಮಾತ್ರ ಬಾಕಿಯಿದೆ. ಹೊಸ ಮುಖಗಳಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕೆಂಬ ರಾಹುಲ್ ಗಾಂಧಿ ಅವರ ಸಲಹೆಯ ಹಿನ್ನೆಲೆಯಲ್ಲಿ ಅಂತಿಮ…
ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ವಿದ್ಯಾರ್ಥಿಗಳು ಮತ್ತು ಯುವಕರ ಹೋರಾಟದ ಗೆಲುವು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳು ಇದರಿಂದ ಮಾತ್ರ ಪರಿಹಾರವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಜಾಗೃತ ವಿದ್ಯಾರ್ಥಿಗಳು ಮತ್ತು ಯುವಕರ ಜಯವಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಗೆಲುವು ಕೂಡ ಹೌದು. ಕಠಿಣ ಪರಿಸ್ಥಿತಿಯಲ್ಲಿಯೂ ಶಾಂತಿಯುತ ಹೋರಾಟ ನಡೆಸಿದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು” ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬೆಂಬಲ ನೀಡಿದೆ ಎಂದು ಹೇಳಿರುವ ಅವರು, ಈ ಹೋರಾಟಕ್ಕೆ ನಾಯಕತ್ವ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದ್ದಾರೆ. “ಶಿಕ್ಷಣ…
CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ
ನವದೆಹಲಿ: ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಿಯೋಗದ ನಡುವೆ ನಡೆದ ಮೂರನೇ ಸುತ್ತಿನ ಮಾತುಕತೆಯಲ್ಲಿ, ಪ್ರತಿಭಟನೆಯಲ್ಲಿ ಭಾಗವಹಿಸಿದ ಸಂಘಟಕರು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಡ್ಡಾ, ಸಿಜೆಪಿ ನಿಯೋಗವು ಪರೀಕ್ಷೆ ಮತ್ತು ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಐದು ಅಂಶಗಳ ಲಿಖಿತ ಪ್ರಸ್ತಾವನೆ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ವಿಷಯಗಳನ್ನು ಸರ್ಕಾರದ ಮುಂದಿಟ್ಟಿದೆ ಎಂದು ಹೇಳಿದ್ದಾರೆ. ಮಾತುಕತೆ ವೇಳೆ ಸರ್ಕಾರ, ಪ್ರತಿಭಟನಾಕಾರರು ಮತ್ತು ಸಂಘಟಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಪ್ರಕರಣಗಳನ್ನೂ ದಾಖಲಿಸಲಾಗುವುದಿಲ್ಲ ಎಂದು ಭರವಸೆ ನೀಡಿದೆ ಎಂದು ನಡ್ಡಾ ತಿಳಿಸಿದ್ದಾರೆ. ಪ್ರತಿಭಟನೆ ವೇಳೆ ಪ್ರಾಣ…
ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?
ನವದೆಹಲಿ: ಈ ವರ್ಷದ ರಕ್ಷಾ ಬಂಧನ ಹಬ್ಬದಂದೇ ವರ್ಷದ ಎರಡನೇ ಚಂದ್ರಗ್ರಹಣ ಸಂಭವಿಸಲಿದ್ದು, ಹಬ್ಬದ ಆಚರಣೆ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ. ವೈದಿಕ ಪಂಚಾಂಗದ ಪ್ರಕಾರ, ಆಗಸ್ಟ್ 28ರಂದು ಶ್ರಾವಣ ಪೂರ್ಣಿಮೆಯಂದು ರಕ್ಷಾ ಬಂಧನ ಆಚರಿಸಲಾಗುತ್ತದೆ. ಇದೇ ದಿನ ಭಾಗಶಃ ಚಂದ್ರಗ್ರಹಣವೂ ಸಂಭವಿಸಲಿದೆ. ಖಗೋಳ ತಜ್ಞರ ಮಾಹಿತಿಯಂತೆ, ಭಾರತೀಯ ಕಾಲಮಾನ ಪ್ರಕಾರ ಚಂದ್ರಗ್ರಹಣವು ಬೆಳಿಗ್ಗೆ 6.53ಕ್ಕೆ ಆರಂಭವಾಗಿ ಮಧ್ಯಾಹ್ನ 12.31ಕ್ಕೆ ಅಂತ್ಯಗೊಳ್ಳಲಿದೆ. ಗ್ರಹಣದ ಒಟ್ಟು ಅವಧಿ ಸುಮಾರು 5 ಗಂಟೆ 38 ನಿಮಿಷ ಇರಲಿದೆ. ಆದರೆ ಈ ಚಂದ್ರಗ್ರಹಣ ಭಾರತದಲ್ಲಿ ಎಲ್ಲಿಯೂ ಗೋಚರಿಸುವುದಿಲ್ಲ. ಪಶ್ಚಿಮ ಏಷ್ಯಾ, ಆಫ್ರಿಕಾ, ಯುರೋಪ್, ದಕ್ಷಿಣ ಅಮೆರಿಕ ಹಾಗೂ ಉತ್ತರ ಅಮೆರಿಕದ ಕೆಲವು ಭಾಗಗಳಲ್ಲಿ ಮಾತ್ರ ಇದು ಗೋಚರಿಸಲಿದೆ ಎಂದು ಖಗೋಳ ತಜ್ಞರು ತಿಳಿಸಿದ್ದಾರೆ. ರಕ್ಷಾ ಬಂಧನದ ದಿನವೇ ಚಂದ್ರಗ್ರಹಣ ಇರುವ ಕಾರಣ ಸೂತಕ ಕಾಲ ಅನ್ವಯವಾಗುತ್ತದೆಯೇ ಎಂಬ ಗೊಂದಲ ಭಕ್ತರಲ್ಲಿ ಮೂಡಿದೆ.…
