‘ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ’ 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಒಳಮೀಸಲಾತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಸೇರಿದಂತೆ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಇದು ಜಾರಿಯಾಗಲು ಇಷ್ಟವಿಲ್ಲ. ಎಲ್ಲ ಅವಕಾಶವಿದ್ದರೂ ಮತ್ತೆ ಆಯೋಗ ರಚಿಸಿ, ಮೂರು ತಿಂಗಳವರೆಗೆ ಕಾಯಲು ನಿರ್ಧರಿಸಲಾಗಿದೆ. ಇನ್ನು ಜನಗಣತಿ ಆರಂಭವಾದರೆ ಆಗ ಮತ್ತೊಂದು ಸಬೂಬು ಹೇಳಬಹುದು. ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿಯನ್ನು ಒಪ್ಪಿತ್ತು. ಎಷ್ಟು ಮೀಸಲು ನೀಡಬೇಕೆಂದು ತಿಳಿಸಲಾಗಿತ್ತು. ಇನ್ನು ಯಾವುದೇ ಹುನ್ನಾರ ಮಾಡದೆ ಸರ್ಕಾರ ಒಳಮೀಸಲು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡುತ್ತಿರುವುದರಿಂದಲೇ ಭಯೋತ್ಪಾದನೆ, ಮತಾಂಧತೆ ನಡೆಯುತ್ತಿದೆ.…

BMTC ಮುಕುಟಕ್ಕೆ ಪ್ರಶಸ್ತಿಯ ಸಿಂಗಾರ; ನಿಗಮಕ್ಕೆ ಸಿಕ್ತು ‘Excellence in Urban Transport award’

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮುಕುಟಕ್ಕೆ ಪ್ರಶಸ್ತಿಯ ಸಿಂಗಾರವಾಗಿದೆ. ಸಾಲು ಸಾಲು ಪ್ರಶಸ್ತಿಗಳ ಜೊತೆ ಇದೀಗ BMTCಗೆ ‘Excellence in Urban Transport award’ ಸಿಕ್ಕಿದೆ. ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡುವ City with Best Record of Public Involvement in Transport ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು Award of Excellence in Urban Transport ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಅಕ್ಟೋಬರ್ 27 ರಂದು ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಆಯೋಜಿಸಿದ್ದ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರಲಾಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಅವರು ಪ್ರಶಸ್ತಿ ಸ್ವೀಕರಿಸಿದರು. ಭಾರತ ಸರ್ಕಾರದ ಈ ಪ್ರತಿಷ್ಠಿತ ಈ ಪ್ರಶಸ್ತಿಯು ನಾಗರಿಕರ ಸುರಕ್ಷತೆ ಮತ್ತು ಪರಿಸರ…

ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌ ಆರಂಭ?

ಬೆಂಗಳೂರು; ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ *15 ಸಾವಿರ ಎಕರೆ* ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್…

ಚನ್ನಪಟ್ಟಣ ರಣಾಂಗಣ; ಹೆಚ್‌ಡಿಕೆ ಪೂಜೆಯ ವೇಳೆ ಅಚ್ಚರಿಯ ಸನ್ನಿವೇಶ; ನಿಖಿಲ್ ಗೆಲುವಿನ ಶುಭ ಸೂಚನೆ ಎಂದ ಜೆಡಿಎಸ್ ನಾಯಕರು

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜಕೀಯ ಪ್ರತಿಷ್ಠೆಯ ಕಣ ಮಾತ್ರವಲ್ಲ, ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯದ ನಿರ್ಣಯವೂ ಹೌದು. ಹಾಗಾಗಿ ಎನ್‌ಡಿಎ ಮಿತ್ರ ಪಕ್ಷಗಳು ಈ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ರೂಪಿಸುತ್ತಿವೆ. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ನಡುವೆ ನೇರ ಹಣಾಹಣಿ ಎರ್ಪಟ್ಟಿದ್ದು ಕದನ ಕೌತುಕ ಸೃಷ್ಟಿಸಿದೆ. ಈ ನಡುವೆ ಎಚ್.ಡಿ.ಕುಮಾರಸ್ವಾಮಿ ಕುಟುಂಬ ತಮ್ಮ ಪುತ್ರನ ಗೆಲುವಿಗಾಗಿ ಟೆಂಪಲ್ ರನ್ ಕೈಗೊಂಡಿದ್ದು, ಪೂಜೆಯ ವೇಳೆ ಅಚ್ಚರಿಯ ಪ್ರಸಂಗವೊಂದು ನಡೆದಿದೆ. ದೇವರ ವಿಗ್ರಹದ ಬಲಗಡೆಯಿಂದ ಹೂವು ಬಿದ್ದಿದ್ದು, ಈ ಬಗ್ಗೆ ಬಗೆಬಗೆಯ ಚರ್ಚೆ ಶುರುವಾಗಿದೆ. ಕುಮಾರಸ್ವಾಮಿಯವರು ಭಾನುವಾರ ಪತ್ನಿ ಅನಿತಾ ಹಾಗೂ ಸೊಸೆ, ಮೊಮ್ಮಗು ಜೊತೆಗೆ ಹಾಸನಾಂಬೆ ಜಾತ್ರೆಯಲ್ಲಿ ಭಾಗವಹಿಸಿದರು. ಬಳಿಕ ಸಿದ್ದೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಪೂಜೆ ನೆರವೇರಿತ್ತಿರುವಾಗಲೇ ವಿಗ್ರಹದ ಬಲಗಡೆಯಿಂದ ಹೂ…

ಅನ್ನದಾತರಿಗೆ ‘ಮೋದಿ ದೀಪಾವಳಿ ಗಿಫ್ಟ್’; ಭತ್ತದ ಬೆಂಬಲ ಬೆಲೆ 2500ರೂ. ಘೋಷಣೆ

ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ. ಅನ್ನದಾತರಿಗೆ ಆಧಾರವಾಗಿ ಮಹತ್ವದ ಘೋಷಣೆಯನ್ನು ಕೇಂದ್ರ ಸರ್ಕಾರ ಮಡಿದೆ. ಕೇಂದ್ರ ಸರ್ಕಾರ ಭತ್ತದ ಬೆಂಬಲ ಬೆಲೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಸರ್ಕಾರ ಭತ್ತದ ಬೆಳೆಗಾರರ ಬೆಂಬಲಕ್ಕೆ ನಿಂತಿದೆ ಎಂದರು. 2300 ರೂಪಾಯಿ ದರದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದವರು ತಿಳಿಸಿದರು. 2013-14ರಲ್ಲಿ ಪ್ರತಿ ಕ್ವಿಂಟಲ್ ಭತ್ತಕ್ಕೆ 1310 ರೂಪಾಯಿ ಇತ್ತು. ಇದೀಗ ಅದನ್ನು 2300 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಪ್ರಲ್ಹಾದ್ ಜೋಷಿ ತಿಳಿಸಿದರು. ಇದೇ ವೇಳೆ, 185 ಲಕ್ಷ ಟನ್ ಭತ್ತ, 124 ಲಕ್ಷ ಟನ್ ಅಕ್ಕಿ ಸಂಗ್ರಹಕ್ಕೆ ಕೇಂದ್ರ ಆಹಾರ ಇಲಾಖೆ ಮತ್ತು ಭಾರತೀಯ ಆಹಾರ ನಿಗಮ ಕ್ರಮ ಕೈಗೊಂಡಿದೆ ಎಂದೂ…

ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ರಣತಂತ್ರ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಶತಪ್ರಯತ್ನಕ್ಕಿಳಿದಿದೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ನಾಯಕರ ಸಭೆ ಗಮನಸೆಳೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್, ಮಾಜಿ ಪರಿಷತ್ ಸದಸ್ಯರಾದ ಅ.ದೇವೇಗೌಡ, ಮುಖ್ಯ ವಕ್ತಾರರು ಅಶ್ವತ್ಥ್ ನಾರಾಯಣ, ರಾಜ್ಯ ಕಾರ್ಯದರ್ಶಿಗಳಾದ ತಿಮ್ಮನಗೌಡ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪದಾಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಸಿದ್ದು ಬಂಟನ ವಿರುದ್ದ ತೊಡೆತಟ್ಟಿದ ಶೋಭಾ; ಭ್ರಷ್ಟಾಚಾರದ ದಾಖಲೆ ಬಿಡುಗಡೆಗೆ ಭೈರತಿಗೆ ಸವಾಲು

ಬೆಳಗಾವಿ: ರಾಜ್ಯದ ಸಚಿವ ಭೈರತಿ ಸುರೇಶ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆ ನಡುವಿನ ವಾಕ್ಸಮರ ಮುಂದುವರಿದಿದೆ. ಭೈರತಿ ಸುರೇಶ್ ವಿರುದ್ದ ವಾಗ್ದಾಳಿ ನಡೆಸಿರುವ ಶೋಭಾ ಕರಂದ್ಲಾಜೆ, ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಸಚಿವ ಭೈರತಿ ಸುರೇಶ್ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಮುಡಾ ಹಗರಣದ ಮಹತ್ವದ ದಾಖಲೆಗಳನ್ನು ಭೈರತಿ ಸುರೇಶ ಸುಟ್ಟಿರುವದು ನಿಜ ಎಂದು ಪುನರುಚ್ಛರಿಸಿದ ಶೋಭಾ ಕರಂದ್ಲಾಜೆ, ಈ ಹಗರಣ ಬಗ್ಗೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ. ನಾನು ಸಚಿವ ಸುರೇಶ ವಿರುದ್ಧ ಖಚಿತವಾಗಿ ಆರೋಪ ಮಾಡಿದ ಮೇಲೆ ನನ್ನ ವಿರುದ್ಧ ಭ್ರಷ್ಟಾಚಾರದ ಮಾತು ಆಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಅದಿರು ಅಕ್ರಮ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆಯಾಗಿದೆ. ಪ್ರಕರಣ ಸಂಬಂಧ ಶನಿವಾರ ಶಿಕ್ಷೆಯ ಪ್ರಮಾಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ ಮೂರನೇ ಪ್ರಕರಣದಲ್ಲಿ ಕೋರ್ಟ್ ಈ ಶಿಕ್ಷೆ ಪ್ರಕಟಿಸಿದೆ. ಇನ್ನುಳಿದ ಪ್ರಕರಣಗಳಲ್ಲಿಯೂ ಶಿಕ್ಷೆ ಹಾಗೂ ದಂಡ ಪ್ರಕಟಿಸಲಾಗಿದೆ. ಪ್ರಕರಣ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಕ್ಟೋಬರ್​ 24 ರಂದು ತೀರ್ಪು ಪ್ರಕಟಿಸಿ ಶಾಸಕ ಸತೀಶ್​ ಸೈಲ್​ ಅವರನ್ನು ದೋಷಿ ಎಂದು ಘೋಷಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಶನಿವಾರ ಪ್ರಕಟಿಸಿದೆ.

ದೀಪಾವಳಿ ವೇಳೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ; ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದು..

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಇದೆ. ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ತಾಕೀತು ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪಟಾಕಿ ದುರಂತಗಳಿಗೆ ಅವಕಾಶ ನೀಡಬಾರದು. ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು. ರಾತ್ರಿ 8 ರಿಂದ 10 ರವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌