Bharat Petroleum Corporation Limited (BPCL)ನಲ್ಲಿ ಉದ್ಯೋಗಾವಕಾಶ

ದೇಶದ ಪ್ರಮುಖ ತೈಲ ಸಂಸ್ಥೆಯಾದ Bharat Petroleum Corporation Limited (BPCL) ದೇಶಾದ್ಯಂತ ಖಾಲಿ ಇರುವ 250 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಜೂನಿಯರ್ ಎಕ್ಸಿಕ್ಯೂಟಿವ್ (ಎಂಜಿನಿಯರಿಂಗ್) – 175 ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಕ್ವಾಲಿಟಿ ಅಶ್ಯೂರೆನ್ಸ್) – 30 ಜೂನಿಯರ್ ಎಕ್ಸಿಕ್ಯೂಟಿವ್ (ಅಕೌಂಟ್ಸ್) – 25 ಜೂನಿಯರ್ ಎಕ್ಸಿಕ್ಯೂಟಿವ್ (ವೇಸೈಡ್ ಸೌಕರ್ಯಗಳು) – 10 ಕಾರ್ಯದರ್ಶಿ (Secretary) – 08 ಅಸೋಸಿಯೇಟ್ ಎಕ್ಸಿಕ್ಯೂಟಿವ್ (ಅಧಿಕೃತ ಭಾಷೆ) – 02 ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ, ಬಿ.ಇ/ಬಿ.ಟೆಕ್ (ಎಂಜಿನಿಯರಿಂಗ್ ವಿಭಾಗಗಳಿಗೆ), ಸಿಎ/ಸಿಎಮ್ಎ (ಅಕೌಂಟ್ಸ್ ವಿಭಾಗಕ್ಕೆ) ಅಥವಾ ಎಂ.ಎ/ಎಂ.ಎಸ್ಸಿ (ಇತರ ವಿಭಾಗಗಳಿಗೆ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ. ಏಪ್ರಿಲ್ 1, 2026ರಂತೆ ಅಭ್ಯರ್ಥಿಗಳ ವಯಸ್ಸು…

ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

ಚೆನ್ನೈ: ಮಲಯಾಳಂ ಸಿನಿರಂಗದ ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ ಹರಿದುಬರುತ್ತಿದೆ. ಜನಪ್ರಿಯ ನಿರ್ಮಾಣ ಸಂಸ್ಥೆ Pen Studios, ಈ ಚಿತ್ರಕ್ಕಾಗಿ ₹100 ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ನಿರ್ದೇಶಕ ಜೀತು ಜೋಸೆಫ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ನಾಯಕನಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ನಿರ್ಮಿಸುತ್ತಿರುವ Aashirvad Cinemas ಸಂಸ್ಥೆಯಲ್ಲಿ, Panorama Studios ಮೂಲಕ ಈ ಹೂಡಿಕೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ನೀಡಿರುವ Pen Studios, “ಭಾರತದ ಅತ್ಯಂತ ಪ್ರತಿಷ್ಠಿತ ಥ್ರಿಲ್ಲರ್‌ಗಳಲ್ಲಿ ಒಂದಾದ ‘ದೃಶ್ಯಂ 3’ಗೆ ₹100 ಕೋಟಿ ಹೂಡಿಕೆ” ಎಂದು ತಿಳಿಸಿದೆ. ಜೊತೆಗೆ, ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಮೇ 21 ಎಂದು ಘೋಷಿಸಿದೆ. ಮುಂಬರುವ ಚಿತ್ರವು ಮೊದಲು ಏಪ್ರಿಲ್ 2ರಂದು ಬಿಡುಗಡೆಯಾಗಬೇಕಾಗಿದ್ದರೂ, ಪರಿಸ್ಥಿತಿಗಳ ಹಿನ್ನೆಲೆ ಬಿಡುಗಡೆ ಮುಂದೂಡಲಾಗಿದೆ. ಈಗ ಮೇ 21ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ‘ದೃಶ್ಯಂ’…

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು…

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ. ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ…

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು. 2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು. ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು…

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು. ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ…

ಆಸ್ತಿ ಅತಿಕ್ರಮಣ ಯತ್ನ? FIR ದಾಖಲಿಸದ ಪೊಲೀಸರ ವಿರುದ್ಧ ವೃದ್ಧನ ದೂರು

ಬೆಂಗಳೂರು: ವಯೋವೃದ್ಧನಿಗೆ ಸೇರಿದ್ದೆನ್ನಲಾದ ಆಸ್ತಿಯನ್ನು ಖಾಸಗಿ ಸಂಸ್ಥೆಗಳ ಗೂಂಡಾಗಳು ಅತಿಕ್ರಮಿಸಲು ಯತ್ನಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಯಲಹಂಕ ಠಾಣೆ ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ನೊಂದ ವೃದ್ಧ FIR ದಾಖಲಿಸಲು ನಿರ್ದೇಶನ ಕೋರಿ ಬೆಂಗಳೂರು ಪೊಲೀಸ್ ಕಮೀಷನರ್’ಗೆ ದೂರು ಸಲ್ಲಿಸಿದ್ದಾರೆ. ಬೆಂಗಳೂರಿನ ಆಡುಗೋಡಿ ನಿವಾಸಿ 70 ವರ್ಷ ಪ್ರಾಯದ ಅಬ್ದುಲ್ ಸತ್ತಾರ್, ಎಂಬವರು ತಮಗೆ ಸೇರಿದ್ದೆನ್ನಲಾದ ಯಲಹಂಕದ ಸರ್ವೇ ನಂಬರ್ 29/3ರ 7 ಗುಂಟೆ ನಿವೇಶನವನ್ನು ಕೆಲವು ವ್ಯಕ್ತಿಗಳು ಅತಿಕ್ರಮಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಆದರೂ ಏಪ್ರಿಲ್ 8 ರಂದು ಮಧ್ಯಾಹ್ನ 25 ಕ್ಕೂ ಹೆಚ್ಚು ಮಂದಿ ಸದರಿ ಸ್ಥಳಕ್ಕೆ ಬಂದು ‘ತಾವು Mac Charles Hob Projects Pvt Ltd ಮತ್ತು Embassy ಕಂಪನಿ ಕಡೆಯವರು ಈ ನಿವೇಶನಕ್ಕೆ ತೆರಳಿ ಈ ಸ್ವತ್ತನ್ನು ತಮಗೆ ಬಿಟ್ಟುಕೊಟ್ಟು ಸ್ಥಳದಿಂದ ತೆರಳಬೇಕು’…

ರಾಜ್ಯದ ಐದು ಜಿಲ್ಲೆಗಳಲ್ಲಿ 40°C ದಾಟಿದ ತಾಪಮಾನ

ಬೆಂಗಳೂರು,: ರಾಜ್ಯದಲ್ಲಿ ಉಷ್ಣತೆಯ ತೀವ್ರತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಐದು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಗದಗ, ವಿಜಯಪುರ, ಬಾಗಲಕೋಟೆ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 40 ಡಿಗ್ರಿಗಿಂತ ಹೆಚ್ಚು ತಾಪಮಾನ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನ ಸಮಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಜನರು ಮನೆಯಿಂದ ಹೊರಬರಲು ಸಹ ಭಯಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ಬಿಕೋಬಿದ್ದಂತಾಗಿದ್ದು, ತುರ್ತು ಕೆಲಸವಿದ್ದವರೇ ಹೊರಗೆ ಕಾಣಿಸುತ್ತಿದ್ದಾರೆ. ವೈದ್ಯರು ಹಾಗೂ ಹವಾಮಾನ ಇಲಾಖೆ, ಅಗತ್ಯವಿಲ್ಲದೆ ಬಿಸಿಲಿನಲ್ಲಿ ಹೊರಗೆ ಹೋಗದಂತೆ, ಸಾಕಷ್ಟು ನೀರು ಸೇವಿಸುವಂತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಹುಬ್ಬಳ್ಳಿ, ಏ.12: ಹೈದರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Fly91 Airlines ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ನಿಯಂತ್ರಣ ಸಮಸ್ಯೆ ಎದುರಿಸಿ, ಸುಮಾರು ಮೂರು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ಭಾನುವಾರ ನಡೆದಿದೆ. ಕೊನೆಗೆ ವಿಮಾನವನ್ನು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಮಧ್ಯಾಹ್ನ 3 ಗಂಟೆಗೆ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನ, ಸಂಜೆ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ, ಲ್ಯಾಂಡಿಂಗ್‌ಗೆ ಹಲವಾರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗದೆ, ವಿಮಾನವು ಮುಂಡಗೋಡ, ದಾವಣಗೆರೆ, ಶಿವಮೊಗ್ಗ ಪ್ರದೇಶಗಳಲ್ಲಿ ಸುತ್ತಾಡಿತು. ಸ್ಥಿತಿ ಗಂಭೀರವಾಗುತ್ತಿದ್ದಂತೆ, ಸಂಜೆ 7.30ರ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷವೋ ಅಥವಾ ಹವಾಮಾನ ವೈಪರಿತ್ಯವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ, ವಿಮಾನ ದೀರ್ಘ…

‘ಲಾರೆನ್ಸ್ ಆಫ್ ಪಂಜಾಬ್’ ಸಾಕ್ಷ್ಯಚಿತ್ರ ಸರಣಿ: ಅಪರಾಧ ಲೋಕದ ಅನಾವರಣ

ಮುಂಬೈ: ಲಾರೆನ್ಸ್ ಆಫ್ ಪಂಜಾಬ್ ಎಂಬ ಮುಂಬರುವ ಸಾಕ್ಷ್ಯಚಿತ್ರ ಸರಣಿ, ಪಂಜಾಬ್‌ನ ಅಪರಾಧ ಜಗತ್ತಿನ ಒಳಹೊಟ್ಟೆಯನ್ನು ಅನಾವರಣಗೊಳಿಸುವ ಪ್ರಯತ್ನವಾಗಿ ಗಮನಸೆಳೆಯುತ್ತಿದೆ. ಈ ಸರಣಿ ಲಾರೆನ್ಸ್ ಬಿಷ್ಣೋಯ್ ಜೀವನ, ಅವನ ಉದಯ ಮತ್ತು ಅದರ ಹಿಂದೆ ಇರುವ ಸಾಮಾಜಿಕ-ಸಾಂಸ್ಕೃತಿಕ ಅಂಶಗಳನ್ನು ಆಳವಾಗಿ ಪರಿಶೀಲಿಸುತ್ತದೆ. ವಿದ್ಯಾರ್ಥಿ ರಾಜಕೀಯದಿಂದ ಸಂಗೀತ, ಸಿದ್ಧಾಂತ ಮತ್ತು ಮಾಧ್ಯಮ ಪ್ರಭಾವದವರೆಗೆ ಲಾರೆನ್ಸ್ ಬಿಷ್ಣೋಯ್ ಏರಿಕೆಯ ಹಾದಿಯನ್ನು ಈ ಸರಣಿ ಹತ್ತಿರದಿಂದ ಅನ್ವೇಷಿಸುತ್ತದೆ. ಆದರೆ, ನಿರೂಪಣೆ ವ್ಯಕ್ತಿಯ ಮಟ್ಟದಲ್ಲೇ ನಿಲ್ಲದೇ, ಅಪರಾಧವನ್ನು ರೂಪಿಸುವ ದೊಡ್ಡ ಸಾಮಾಜಿಕ ವ್ಯವಸ್ಥೆ ಮತ್ತು ಸಂಸ್ಕೃತಿಯ ಮೇಲೂ ಬೆಳಕು ಚೆಲ್ಲುತ್ತದೆ. ಸರಣಿಯ ನಿರ್ದೇಶಕ ರಾಘವ್ ಡಾರ್ ಹೇಳುವಂತೆ, “ಇದು ಕೇವಲ ಅಪರಾಧ ಕಥೆಯಲ್ಲ; ವ್ಯಕ್ತಿತ್ವವನ್ನು ರೂಪಿಸುವ ಪರಿಸರ, ಪ್ರಭಾವಗಳು ಮತ್ತು ವ್ಯವಸ್ಥೆಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನವಾಗಿದೆ. ಜೊತೆಗೆ, ಇಂತಹ ಪ್ರಯಾಣಗಳು ಸಮಾಜದ ಮೇಲೆ ಬೀರುವ ಪರಿಣಾಮಗಳನ್ನೂ ಗಮನದಲ್ಲಿಟ್ಟಿದ್ದೇವೆ” ಎಂದಿದ್ದಾರೆ. ನಿರ್ಮಾಪಕ ರಾಘವ್ ಖನ್ನಾ, ಪಂಜಾಬ್‌ನ…