ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು. ಈ ಮೊದಲು ನಗರದಲ್ಲಿ ಸೆಸ್ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್ನ ಮೌಲ್ಯವೇ 147 ಕೋಟಿ…
Author: NavaKarnataka
ಕನ್ನಡವನ್ನು ಅವಹೇಳನ: ‘ನಟ ಕಮಲ್ ಹಾಸನ್ ವಿರುದ್ಧ ವ್ಯಾಪಕ ಆಕ್ರೋಶ
ಬೆಂಗಳೂರು: ನಟ ಕಮಲ್ ಹಾಸನ್ ಒಬ್ಬ ಹುಚ್ಚ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ . ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ ಎಂಬುದು ಸ್ಪಷ್ಟವಾಗಿದೆ ಎಂದರು. ಎಲ್ಲ ಕನ್ನಡಿಗರು ಕಮಲ್ ಹಾಸನ್ಗೆ ಬಹಿಷ್ಕಾರ ಹಾಕಬೇಕು. ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಪ್ರತಿಪಾದಿಸಿದರು. ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದರು.
ಆಂಧ್ರಕ್ಕೆ HAL ಸ್ಥಳಾಂತರ ಬೇಡಿಕೆ ಇಟ್ಟಿಲ್ಲ; ಚಂದ್ರಬಾಬು ನಾಯ್ಡು ಸ್ಪಷ್ಟನೆ
ಅಮರಾವತಿ: ಕರ್ನಾಟಕದಲ್ಲಿರುವ ಹೆಚ್ಎಎಲ್ ಸಂಸ್ಥೆಯನ್ನು ತಮ್ಮ ರಾಜ್ಯಕ್ಕೆ ಸ್ಥಳಾಂತರಿಸುವಂತೆ ತಾನು ಬೇಡಿಕೆ ಇಟ್ಟಿಲ್ಲ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಬೇಡಿಕೆ ಕುರಿತಂತೆ ಕರ್ನಾಟಕದ ನಾಯಕರ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚಂದ್ರಬಾಬು ನಾಯ್ಡು, ಹೆಚ್ಎಎಲ್ ವಿಮಾನ ನಿರ್ಮಾಣ ಘಟಕವನ್ನು ತಮ್ಮ ರಾಜ್ಯಕ್ಕೆ ಕೊಂಡೊಯ್ಯಲು ಆಂಧ್ರ ಸರ್ಕಾರ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸಿದೆ ಎಂಬ ವರದಿವರದಿಯನ್ನು ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಯತ್ನ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ಯೋಜನೆಯನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರಿಸಲು ಎಂದಿಗೂ ಪ್ರಯತ್ನಿಸಿಲ್ಲ, ಅಂತಹ ಕಲ್ಪನೆ ನನ್ನ ಇತಿಹಾಸದ ಭಾಗವಲ್ಲ ಎಂದ ಅವರು, ಆಂಧ್ರಪ್ರದೇಶದಲ್ಲಿ ರಕ್ಷಣಾ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಬೇಕೆಂಬ ಆಶಯ ನಮ್ಮದೇ ಹೊರತು, ಇತರ ರಾಜ್ಯಗಳಿಂದ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಸ್ಥಳಾಂತರಿಸುವುದು ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ ಘೋಷಣೆ
ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು. ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು…
ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ಆಕ್ರೋಶ
ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸೆಸ್ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣ ಉಳಿದಿಲ್ಲ. ಹಿಂದೆ ಇದ್ದ ತುಘಲಕ್ ಕೂಡ ಹಾಕದಷ್ಟು ತೆರಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಮೇಲೆ ಹಾಕಿದ್ದಾರೆ. ಕಸ ವಿಲೇವಾರಿ ಮಾಡಲು ಕೂಡ ತೆರಿಗೆ ಹಾಕಲಾಗಿದೆ. 30×40 ಅಡಿ ವಿಸ್ತೀರ್ಣದ ಮನೆಗೆ 120 ರೂ. ಇದ್ದ ಕಸದ ತೆರಿಗೆಯನ್ನು 720 ರೂ. ಮಾಡಿದ್ದಾರೆ. ಅಂದರೆ 500% ರಷ್ಟು ಹೆಚ್ಚಾಗಿದೆ. ಅಪಾರ್ಟ್ಮೆಂಟ್ ನಿವಾಸಿಗಳು ಕಸವನ್ನು ಅವರೇ ವಿಲೇವಾರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಕಸದ ಸೆಸ್ 1,800 ರೂ. ನಿಂದ 18,000 ರೂ. ಗೆ ಹೆಚ್ಚಿಸಲಾಗಿದೆ ಎಂದು ದೂರಿದರು. ಮಾಲ್ಗಳಲ್ಲಿ 3,600 ರೂ. ಇದ್ದ ಕಸದ ಸೆಸ್ 52,500 ರೂ. ಆಗಿದ್ದು, 14,483% ಹೆಚ್ಚಿದೆ. ಆಸ್ಪತ್ರೆಗಳಲ್ಲಿ…
ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು. ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು. ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ…
ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು. ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ…
ನೀತಿ ಸಭೆಗೆ ಸಿಎಂ ಗೈರು: ಸಚಿವರ ಸಮರ್ಥನೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಗೈರು ಹಾಜರಾಗಿದ್ದರಲ್ಲಿ ತಪ್ಪಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ..ಸರ್ಕಾರದ ಪರವಾಗಿ ನಮ್ಮ ಕಂದಾಯ ಸಚಿವರು ಹೋಗಿದ್ದರು ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಈ ಹಿಂದೆ ನಡೆದ ನೀತಿ ಆಯೋಗದ ಎಷ್ಟೋ ಸಭೆಗಳಿಗೆ ಹೋಗಿಲ್ಲ. ಆಗ ಹಣಕಾಸು ಸಚಿವರು ನಡೆಸಿದ್ದಾರೆ. ಮತ್ತೆ ಸಭೆಗೆ ಹೋದರೂ ಅವರು ಹೇಳಿದ್ದನ್ನು ಮಾತ್ರ ಕೇಳಿಕೊಂಡು ಬರಬೇಕು. ನಮಗೆ ಕೇಳುವ ಹಕ್ಕು, ಸಮಯ ಎರಡನ್ನೂ ಕೊಡುವುದಿಲ್ಲ. ಒನ್ ವೇ ಸಭೆಗಳಿಗೆ ನಾವೇಕೆ ಹೋಗಬೇಕು ಎಂದು ಪತ್ರಕರ್ತರನ್ನೇ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನಿಸಿದರು.
ಅಲ್ಪಸಂಖ್ಯಾತ ಐಎಎಸ್ ಅಧಿಕಾರಿ ಮೇಲೆ ಬಿಜೆಪಿ ನಾಯಕರ ವಾಗ್ದಾಳಿ: ಶರಣ್ ಪ್ರಕಾಶ್ ಪಾಟೀಲ್ ಟೀಕೆ
ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು. ವಿಕಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು, ಬಿಜೆಪಿಯವರೆಗೆ ಬುದ್ದಿ ಭ್ರಮಣೆಯಾಗಿದೆ. ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿಷಾದನೀಯ. ಶಾಲಾ ಮಕ್ಕಳು ಕೂಡ ಹೀಗೆ ಮಾತನಾಡಲ್ಲ. ಸಾರ್ವಜನಿಕ ಜೀವನದಲ್ಲಿ ಇರಲು ಇಂಥವರು ಅನರ್ಹ’ ಎಂದು ಕಿಡಿಕಾರಿದರು. ಐಎಎಸ್ ಅಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವದನ್ನು ಐಎಎಸ್ ಅಧಿಕಾರಿಗಳ ಒಕ್ಕೂಟ ಈಗಾಗಲೇ ರವಿಕುಮಾರ್ ವಿರುದ್ಧ ಪತ್ರ ಬರೆದು, ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್ ನಾಯಕರೊಬ್ಬರು ಈ ರೀತಿ ಮಾತನಾಡಿದ್ದು ಅಪ್ರಬುದ್ಧತೆ ತೋರುತ್ತದೆ ಎಂದು ಸಚಿವರು ತಿಳಿಸಿದರು. ಹೇಳಿಕೆ ನೀಡುವಾಗ ಸರಿ, ತಪ್ಪು ಎಂಬುದರ ಬಗ್ಗೆ…
ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ
ಬೆಂಗಳೂರು: ಕನ್ನಡ ಕಿರುತೆರೆ, ಹಿರಿ ತೆರೆ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ.. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಮೂಲಗಳು ತಿಳಿಸಿವೆ. 47 ವರ್ಷ ವಯಸ್ಸಿನ ಅವರು ‘ಪಾರು’ ಧಾರಾವಾಹಿಯಲ್ಲಿ ನಟಿಸಿದ್ದರು. ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲೂ ಶ್ರೀಧರ್ ನಾಯಕ್ ನಟಿಸಿದ್ದರು.