ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ದಾಖಲಿಸಿದ್ದಾನೆ. ಈ ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆಗೆ ಧಾವಿಸಿದಾಗ ಹೃದಯವಿದ್ರಾವಕ ದೃಶ್ಯ ಎದುರಾಗಿದೆ. ಮೋಹನ್ ತನ್ನ ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೋಹನ್ ಗೌಡ (27) ಮತ್ತು ಅಕ್ಕನ ಮಗ ಮಯಾಂಕ್ (11) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ…

‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

ಚೆನ್ನೈ: ನಿರ್ದೇಶಕ ವಿಘ್ನೇಶ್ ಶಿವನ್ ಅವರ ಬಹುನಿರೀಕ್ಷಿತ ಪ್ರಣಯ ಚಿತ್ರ ಲವ್ ಇನ್ಶುರೆನ್ಸ್ ಕೊಂಪನಿ (LIK) ಬಿಡುಗಡೆಯನ್ನು ಮತ್ತೊಮ್ಮೆ ಮುಂದೂಡಲಾಗಿದ್ದು, ಇದೀಗ ಏಪ್ರಿಲ್ 10ರಂದು ತೆರೆಗೆ ಬರಲಿದೆ. ಈ ಹಿಂದೆ ಏಪ್ರಿಲ್ 3ರಂದು ಬಿಡುಗಡೆ ಮಾಡಲು ಯೋಜಿಸಿದ್ದ ಚಿತ್ರವನ್ನು ವಾರದ ಅಂತರದಲ್ಲಿ ಮುಂದೂಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಚಿತ್ರದ ಬಿಡುಗಡೆ ದಿನಾಂಕ ಪದೇಪದೇ ಬದಲಾಗುತ್ತಿರುವುದು ಗಮನಾರ್ಹ. ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದ ವಿಘ್ನೇಶ್ ಶಿವನ್, “#LIK from April 10… ಟ್ರಸ್ಟ್ ಮಿ ಬ್ರೋ” ಎಂದು ಹೇಳಿ ಹೊಸ ದಿನಾಂಕವನ್ನು ದೃಢಪಡಿಸಿದರು. ಇದೇ ವೇಳೆ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್, ನಟ ಪ್ರದೀಪ್ ರಂಗನಾಥನ್ ಹಾಗೂ ತಾವು ಸೇರಿರುವ ತಮಾಷೆಯ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ. ಚಿತ್ರದ ಬಿಡುಗಡೆಯು ಹಲವು ಹಂತಗಳಲ್ಲಿ ಮುಂದೂಡಿಕೆಯನ್ನು ಕಂಡಿದೆ. ಮೊದಲಿಗೆ ಕಳೆದ ವರ್ಷದ ಸೆಪ್ಟೆಂಬರ್ 18ಕ್ಕೆ ನಿಗದಿಯಾಗಿದ್ದ ಬಿಡುಗಡೆ, ನಂತರ ದೀಪಾವಳಿ ಪ್ರಯುಕ್ತ…

ಎಲ್ಲಾ ಜಿಲ್ಲೆಗಳಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ; : ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ನೂತನ ಆಸ್ಪತ್ರೆ ಲೋಕಾರ್ಪಣೆ ಮಾಡಿದ ನಂತರ ಭಾಷಣ ಮಾಡಿದ ಸಚಿವ ಡಾ. ಪಾಟೀಲ್‌, ಮಕ್ಕಳಿಗೆ ಉತ್ತರ ಆರೈಕೆ, ಚಿಕಿತ್ಸೆ ಒದಗಿಸಲು ಈ ಆಸ್ಪತ್ರೆ ನಿರ್ಮಿಸಲಾಗಿದೆ. ಸರ್ಕಾರದಿಂದಲೇ ಇಷ್ಟೊಂದು ಬೃಹತ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಇಷ್ಟು ದೊಟ್ಟಮಟ್ಟದ ಕಾರ್ಯ ನಿರ್ವಹಿಸುತ್ತಿರುವುದು ದೇಶದಲ್ಲಿ ಮೊದಲ ಎಂದರು. ಬೇರೇ ಬೇರೆ ರಾಜ್ಯಗಳಿಂದ ಬರುವ ರೋಗಿಗಳಿಗೂ ಇಲ್ಲಿ ಒಂದೇ ತರನಾದ ಚಿಕಿತ್ಸೆ ಒದಗಿಸಲಾಗುತ್ತದೆ. ಶೇ. 100ರಷ್ಟು ಗುಣಮಟ್ಟದ ಆರೋಗ್ಯ ಚಿಕಿತ್ಸೆ ಕೊಡುವುದು ನಮ್ಮ…

ನಕಲಿ ಹೂಡಿಕೆ ವಂಚನೆ ಮಾಫಿಯಾ: ದೆಹಲಿಯಲ್ಲಿ ಐವರ ಬಂಧನ

ನವದೆಹಲಿ: ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲವನ್ನು ಪತ್ತೆಹಚ್ಚಿದ ದೆಹಲಿ ಪೊಲೀಸ್ ಹೂಡಿಕೆ ವಂಚನೆ ಸಿಂಡಿಕೇಟ್ ಅನ್ನು ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದೆ. ನೈಋತ್ಯ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆ ತಂಡವು ಶ್ರೀಧರ್ ದಿಲೀಪ್ ಇಂಗಲ್ (25), ಅರ್ಚಿರಿಯನ್ ಗೋರಕ್ಷ್ ಕಾಂಬ್ಳೆ (21), ಅಜಿಜ್ ಮಿರಾನ್ ಶೇಖ್ (25), ಪ್ರಣವ್ ಜಲಿಂದರ್ ಗುಲ್ದಗಡ್ (24) ಮತ್ತು ವಿಶಾಲ್ ದುರ್ಗಾದಾಸ್ ಬಚಲ್ (25) ಅವರನ್ನು ಬಂಧಿಸಿದೆ. ಬಂಧಿತರಿಂದ ಆರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಂಚನೆಗೆ ಸಂಬಂಧಿಸಿದ 35 ಬ್ಯಾಂಕ್ ಖಾತೆಗಳ ವಿವರಗಳನ್ನು ಪತ್ತೆಹಚ್ಚಲಾಗಿದೆ. ಈ ಪ್ರಕರಣವು 2025ರ ಸೆಪ್ಟೆಂಬರ್ 4ರಂದು NCRP ಪೋರ್ಟಲ್‌ನಲ್ಲಿ ಸಲ್ಲಿಸಲಾದ ದೂರಿನ ಆಧಾರದ ಮೇಲೆ ಬೆಳಕಿಗೆ ಬಂದಿದೆ. ಅರುಣಾಚಲ ಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ‘ನೆಕ್ಸ್ಟ್ ಬಿಲಿಯನ್ ಟೆಕ್ನಾಲಜಿ ಪ್ರೈ. ಲಿ.’ ಎಂಬ ಹೆಸರಿನಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಮಾಡುವ ನೆಪದಲ್ಲಿ ವಂಚಿಸಲಾಗಿದೆ…

ಯುಕೆಗೆ ಹೊಸ ಭಾರತೀಯ ಹೈಕಮಿಷನರ್; ಲಂಡನ್ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸ್ವಾಗತ

ಲಂಡನ್ (ಯುನೈಟೆಡ್ ಕಿಂಗ್‌ಡಮ್): ಯುನೈಟೆಡ್ ಕಿಂಗ್‌ಡಮ್‌ಗೆ ಭಾರತದ ಹೊಸ ಹೈಕಮಿಷನರ್ ಆಗಿ ನೇಮಕಗೊಂಡಿರುವ ಪೆರಿಯಸಾಮಿ ಕುಮಾರನ್ ಅವರಿಗೆ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಆತ್ಮೀಯ ಸ್ವಾಗತ ಕೋರಿದೆ. ಫೌಂಡೇಶನ್ ಮುಖ್ಯಸ್ಥರೂ, ಲಂಡನ್‌ನ ಮಾಜಿ ಮೇಯರ್‌ ಆಗಿರುವ ಡಾ. ನೀರಜ್ ಪಾಟೀಲ್ ಅವರು ಮಾತನಾಡಿ, 2005ರಿಂದ 2007ರವರೆಗೆ ಬೆಂಗಳೂರಿನಲ್ಲಿ ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕುಮಾರನ್ ಅವರ ಕರ್ನಾಟಕದೊಂದಿಗಿನ ಸಂಪರ್ಕವನ್ನು ವಿಶೇಷವಾಗಿ ಉಲ್ಲೇಖಿಸಿದರು. ಈ ಪ್ರದೇಶದ ಬಗ್ಗೆ ಅವರ ಅನುಭವ ಮತ್ತು ತಿಳುವಳಿಕೆ ಭಾರತ–ಯುನೈಟೆಡ್ ಕಿಂಗ್‌ಡಮ್ ನಡುವಿನ ಸಾಂಸ್ಕೃತಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇದೇ ವೇಳೆ, ನಿರ್ಗಮಿತ ಹೈಕಮಿಷನರ್ ವಿಕ್ರಮ್ ದೊರೈಸ್ವಾಮಿ ಅವರು ಏಪ್ರಿಲ್ 30, 2025ರಂದು ಭಗವಾನ್ ಬಸವೇಶ್ವರರಿಗೆ ಸಲ್ಲಿಸಿದ ಗೌರವವನ್ನು ಸ್ಮರಿಸಿ, ಅವರ ಸೇವೆಗೆ ಕೃತಜ್ಞತೆ ಸಲ್ಲಿಸಲಾಯಿತು. ಬ್ರಿಟಿಷ್ ಹಿಂದೂ ಸಮುದಾಯದೊಂದಿಗೆ ಅವರು ಬೆಳೆಸಿದ ಬಾಂಧವ್ಯವನ್ನು ಫೌಂಡೇಶನ್…

ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲು

ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ. ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೇಪಾಳದಲ್ಲಿ ರಾಜಕೀಯ ಸುನಾಮಿ: ಮಾಜಿ ಪ್ರಧಾನಿ ಓಲಿ ಬಂಧನ

ಕಠ್ಮಂಡು: ನೇಪಾಳದ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಹೊಸ ಸರ್ಕಾರವು ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಾಕ್ ಅವರನ್ನು ಜನರಲ್ ಝಡ್ ಪ್ರತಿಭಟನೆಗಳ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದೆ. ಹೊಸ ಪ್ರಧಾನಿ ಬಾಲೇಂದ್ರ ಶಾ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ, ಈ ಪ್ರಕರಣದ ತನಿಖೆಗೆ ರಚಿಸಲಾದ ಉನ್ನತ ಮಟ್ಟದ ಆಯೋಗದ ವರದಿಯನ್ನು ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ. ಆಯೋಗವು ಓಲಿ, ಲೇಖಾಕ್ ಹಾಗೂ ಮಾಜಿ ಪೊಲೀಸ್ ಮುಖ್ಯಸ್ಥ ಚಂದ್ರ ಕುಬೇರ್ ಖಪುಂಗ್ ವಿರುದ್ಧ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಲು ಶಿಫಾರಸು ಮಾಡಿತ್ತು. ಈ ಹಿನ್ನೆಲೆ, ನ್ಯಾಯಾಲಯದ ಬಂಧನ ವಾರಂಟ್ ಆಧಾರದ ಮೇಲೆ ಶನಿವಾರ ಮುಂಜಾನೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓಲಿಯನ್ನು ಭಕ್ತಪುರದ ಗುಂಡುವಿನ…

ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಭರವಸೆಯನ್ನು ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್ (BAF) ಮುಕ್ತಕಂಠದಿಂದ ಸ್ವಾಗತಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಬಹುನಿರೀಕ್ಷಿತ ಈ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕಾರಣೀಭೂತರಾಗಿರುವಂತಹ ಎಲ್ಲ ಪಕ್ಷದ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ. “ಕರ್ನಾಟಕ ವಿಧಾನಸಭೆಯಲ್ಲಿ KAOMA ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಕ್ಕಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಹಾಗೂ ಎಲ್ಲಾ ಪಕ್ಷಗಳ ನಾಯಕರಿಗೂ ನಾವು ಆಭಾರಿಯಾಗಿದ್ದೇವೆ. ಈ ಮಹತ್ವದ ಕಾಯ್ದೆಯನ್ನು ರೂಪಿಸುವಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳಿಗೂ ನಾವು ನಮ್ಮ ಧನ್ಯವಾದಗಳನ್ನು ತಿಳಿಸಲು…

ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ; ಸಿದ್ದರಾಮಯ್ಯ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಗುರುವಾರ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದರು. ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ…

ಇಂಧನ ಸುಂಕ ಕಡಿತ: ಪೆಟ್ರೋಲ್-ಡೀಸೆಲ್ ದರ ಇಳಿಕೆ

ನವದೆಹಲಿ: ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಈ ಕ್ರಮದೊಂದಿಗೆ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 3 ರೂಪಾಯಿಗೆ ಇಳಿಸಲಾಗಿದ್ದು, ಡೀಸೆಲ್ ಮೇಲಿನ ಸುಂಕವನ್ನು ಶೂನ್ಯ ಮಟ್ಟಕ್ಕೆ ತಂದಿದೆ. ಇಂಧನ ರಫ್ತು ಹಾಗೂ ವಿದೇಶಿ ವಿಮಾನಗಳಿಗೆ ಸರಬರಾಜು ಮಾಡುವ ಮೇಲಿನ ಸುಂಕಗಳಿಗೂ ವಿನಾಯಿತಿ ನೀಡಲಾಗಿದೆ. ಇದಕ್ಕೂ ಜೊತೆಗೆ, 2022ರ ಹಿಂದಿನ ಅಧಿಸೂಚನೆಯನ್ನು ರದ್ದುಪಡಿಸಿರುವ ಕೇಂದ್ರ, ಆಮದು ಮಾಡಿಕೊಳ್ಳುವ ಏರ್ ಟರ್ಬೈನ್ ಇಂಧನ (ATF) ಮೇಲಿನ ಕಸ್ಟಮ್ಸ್ ಸುಂಕಕ್ಕೂ ವಿನಾಯಿತಿ ನೀಡಿದೆ. ಇರಾನ್ ಸಂಬಂಧಿತ ಉದ್ವಿಗ್ನತೆ ಮತ್ತು ಹಾರ್ಮುಜ್ ಜಲಸಂಧಿ ಸಮಸ್ಯೆಯಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಬೆಲೆ ಏರಿಕೆಯ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಜಾಗತಿಕ ಕಚ್ಚಾ…