ನವದೆಹಲಿ: ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಗಾರರೊಂದಿಗೆ ಮಾತನಾಡಿದ ಅವರು , ಮತ ಕಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತ ಕಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರಿಯಲಿದೆ ಎಂದರು. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಜಿ.ಸಿ.ಚಂದ್ರಶೇಖರ್ ಅವರು ಬಿಎಲ್ ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ. ದೆಹಲಿಯಲ್ಲಿನ ಪ್ರತಿಭಟನೆಯಲ್ಲಿ ಜನರಲ್ಲಿ ಇದ್ದ ಉತ್ಸಾಹ 2028 ಹಾಗೂ 2029ರ ಚುನಾವಣೆಗೆ ನಾಂದಿಯಾಡಿದೆ.…
Author: NavaKarnataka
ಜಿಬಿಎ ಚುನಾವಣೆ; 369 ವಾರ್ಡ್’ಗಳ ಆಕಾಂಕ್ಷಿಗಳಿಂದ ಅರ್ಜಿ ಅಹ್ವಾನ
ಬೆಂಗಳೂರು: “ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಿದ್ದು, ಸಾಮಾನ್ಯವರ್ಗಕ್ಕೆ 50 ಸಾವಿರ ಹಾಗೂ ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
ಬೆಂಗಳೂರು: ಮಾಜಿ ಸಚಿವ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. 92 ವರ್ಷ ವಯಸ್ಸಿನ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್
ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ…
ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿದೆ; ಅದು ಕೊನೆಗೊಳ್ಳಬೇಕು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶಿಕ್ಷಿತರಲ್ಲಿ ಜಾತೀಯತೆ ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಇದು ಸಂಪೂರ್ಣವಾಗಿ ಕೊನೆಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶನಿವಾರ ನಡೆದ ಭಾರತ ರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರ 10ನೇ ವಾರ್ಷಿಕ ವಿಜ್ಞಾನ ಸಂಪರ್ಕ ಕಾರ್ಯಕ್ರಮ–2025 ಉದ್ಘಾಟಿಸಿ ಅವರು ಮಾತನಾಡಿದರು. “ಸಮಾಜ ಸುಧಾರಕ ಬಸವಣ್ಣ 850 ವರ್ಷಗಳ ಹಿಂದೆಯೇ ‘ತಾನು ಯಾರು ಎಂದು ಕೇಳಬೇಡಿ’ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ, ಶೇ.76ರಷ್ಟು ಸಾಕ್ಷರತೆ ಸಾಧಿಸಿದ ಬಳಿಕವೂ ಜಾತಿ ವ್ಯವಸ್ಥೆ ಮಾಯವಾಗಿಲ್ಲ. ವಾಸ್ತವವಾಗಿ, ಶಿಕ್ಷಿತರಲ್ಲೇ ಜಾತೀಯತೆ ಹೆಚ್ಚಾಗಿರುವುದು ದುಃಖಕರ. ಇದು ಕೊನೆಗೊಳ್ಳಲೇಬೇಕು,” ಎಂದು ಅವರು ಮನವಿ ಮಾಡಿದರು. ಶಿಕ್ಷಣದ ಮೂಲ ಉದ್ದೇಶ ವೈಜ್ಞಾನಿಕ ಮನೋಭಾವ ಮತ್ತು ತಾರ್ಕಿಕ ಚಿಂತನೆಯನ್ನು ಬೆಳೆಸುವುದೆಂದು ಸಿದ್ದರಾಮಯ್ಯ ಹೇಳಿದರು. “ಅಸಮಾನತೆ ಹೋಗಲಾಡಿಸದೇ, ಕುರುಡು ಆಚರಣೆಗಳನ್ನು ತ್ಯಜಿಸದೇ ನಿಜವಾದ ಮಾನವೀಯ ಸಮಾಜ ನಿರ್ಮಾಣ ಸಾಧ್ಯವಿಲ್ಲ,” ಎಂದರು.…
ಕೇರಳ: ಬಿಜೆಪಿ ಅಭ್ಯರ್ಥಿ, ಕೇರಳದ ಮೊದಲ ಮಹಿಳಾ ಡಿಜಿಪಿ ಶ್ರೀಲೇಖಾ ಜಯಭೇರಿ
ತಿರುವನಂತಪುರಂ: ತಿರುವನಂತಪುರಂ ಕಾರ್ಪೊರೇಷನ್‌ನ ಶಾಸ್ತಮಂಗಲಂ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ಶ್ರೀಲೇಖಾ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆ ಅಧಿಕಾರ ವಶಪಡಿಸಿಕೊಳ್ಳುವ ಪೈಪೋಟಿಯಲ್ಲಿ ಬಿಜೆಪಿ ತನ್ನ ಸ್ಥಿತಿಯನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ತಿರುವನಂತಪುರಂ ಕಾರ್ಪೊರೇಷನ್ ನಿಯಂತ್ರಣಕ್ಕಾಗಿ ಮೂರು ಪ್ರಮುಖ ರಾಜಕೀಯ ಮೈತ್ರಿಗಳ ನಡುವೆ ಕಠಿಣ ಸ್ಪರ್ಧೆ ನಡೆಯುತ್ತಿರುವ ಸಂದರ್ಭದಲ್ಲೇ ಶ್ರೀಲೇಖಾ ಅವರ ಜಯ ಲಭಿಸಿದೆ. ರಾಜಧಾನಿಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಅಧಿಕಾರದಿಂದ ದೂರ ಸರಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಕ್ಕೆ ಈ ಗೆಲುವು ಸಾಂಕೇತಿಕ ಹಾಗೂ ರಾಜಕೀಯ ಉತ್ತೇಜನವಾಗಿದೆ ಎಂದು ಪಕ್ಷ ವಿಶ್ಲೇಷಿಸಿದೆ. ಪ್ರಸ್ತುತ ಲಭ್ಯ ಮಾಹಿತಿಯಂತೆ, 101 ಸದಸ್ಯರ ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ 34 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಡಪಕ್ಷಗಳು 20 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ವರ್ಷದ ಆರಂಭದಲ್ಲೇ ಶ್ರೀಲೇಖಾ…
ಡಿಸಿಎಂ ಜೊತೆ ಸಂವಾದ; ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಬಿಎಎಫ್ ಆಗ್ರಹ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್ ಫೇಡರೇಷನ್ (BAF) ಅಧ್ಯಕ್ಷ ಸತೀಶ್ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್, ಅಪಾರ್ಟ್‌ಮೆಂಟ್ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್ ಫೇಡರೇಷನ್ (BAF) ಅಧ್ಯಕ್ಷ ಸತೀಶ್ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ…
ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು
ವಿಶಾಖಪಟ್ಟಣಂ: ಆಂಧ್ರಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಾಯಗೊಂಡಿದ್ದಾರೆ. ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ವಿವಿಧ ದೇವಸ್ಥಾನಗಳಿಗೆ ಯಾತ್ರೆ ಹೊರಟಿದ್ದವರ ವಾಹನ ಅಪಘಾತಕ್ಕೀಡಾಗಿದೆ. 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ
ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ.…
ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ…
