ತುಮಕೂರು: 2028ರ ವಿಧಾನಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಅಂಗವಾಗಿ ತುಮಕೂರಿನಲ್ಲಿ ಆಯೋಜಿಸಿದ್ದ “ಸಾರ್ಥಕ ಸೇವೆಯ ಸಮರ್ಪಣೆ” ಸಮಾವೇಶದಲ್ಲಿ ಮಾತನಾಡಿದ ಅವರು, 136 ಶಾಸಕರನ್ನು ಗೆಲ್ಲಿಸುವ ಮೂಲಕ ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ತೋರಿದ್ದು, ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದರು. “2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು. ರಾಜ್ಯ ಸರ್ಕಾರದ ಐದು ಖಾತರಿ ಯೋಜನೆಗಳನ್ನು ಪ್ರಸ್ತಾಪಿಸಿದ ಶಿವಕುಮಾರ್, ಕಾಂಗ್ರೆಸ್ ಜಾರಿಗೆ ತಂದಿರುವ ಕಲ್ಯಾಣ ಮಾದರಿಯನ್ನು ಈಗ ಇತರೆ ರಾಜ್ಯಗಳಲ್ಲೂ ಅನುಸರಿಸಲಾಗುತ್ತಿದೆ ಎಂದು ಹೇಳಿದರು. “ಮೊದಲಿಗೆ ಖಾತರಿ ಯೋಜನೆಗಳನ್ನು ಟೀಕಿಸಿದವರು, ಇಂದು ಅದನ್ನೇ ನಕಲು ಮಾಡುತ್ತಿದ್ದಾರೆ. ನಮ್ಮ ಯೋಜನೆಗಳು ಇಡೀ ದೇಶಕ್ಕೆ…
Author: NavaKarnataka
ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ
ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಈ ಹೊಸ ರೈಲು ಸೇವೆಯನ್ನು ಆರಂಭಿಸಲಾಗಿದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಲ್ (LTT) ನಡುವೆ ವಾರಕ್ಕೆ ಎರಡು ದಿನ ಈ ರೈಲು ಸಂಚರಿಸಲಿದೆ. ಶನಿವಾರ ಹಾಗೂ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ, ಭಾನುವಾರ ಮತ್ತು ಬುಧವಾರ ಮುಂಬೈನಿಂದ ಬೆಂಗಳೂರಿಗೆ ಓಡಾಟ ನಡೆಸಲಿದೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಪುಣೆ ಹಾಗೂ ಮುಂಬೈ ನಗರಗಳಿಗೆ ಈ ರೈಲು ಸಂಪರ್ಕ ಕಲ್ಪಿಸಲಿದೆ. ರೈಲಿನಲ್ಲಿ ಒಟ್ಟು 17 ಕೋಚ್‌ಗಳಿದ್ದು, ಒಂದು ಎಸಿ 2-ಟೈರ್, ನಾಲ್ಕು ಎಸಿ 3-ಟೈರ್, ಆರು ಸ್ಲೀಪರ್ ಹಾಗೂ ನಾಲ್ಕು ಸಾಮಾನ್ಯ ದರ್ಜೆಯ ಬೋಗಿಗಳಿವೆ.…
ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ
ಬೆಂಗಳೂರು, ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳಿದ್ದಾರೆ. ಇಲ್ಲ ಎಂದು ಯಾರಾದರೂ ಸವಾಲು ಹಾಕಿದರೆ ನಾನೇ ಅವರನ್ನು ಕರೆದುಕೊಂಡು ಹೋಗಿ ತೋರಿಸುತ್ತೇನೆ. ಇತ್ತೀಚೆಗೆ ಪೊಲೀಸ್ ಆಯುಕ್ತರು 65 ಲಕ್ಷ ರೂ. ಖರ್ಚು ಮಾಡಿ 250 ಬಾಂಗ್ಲಾ ದೇಶದವರನ್ನು ವಿಮಾನದಲ್ಲಿ ಕಳುಹಿಸಿ ಗಡಿವರೆಗೆ ಬಿಟ್ಟು ಬಂದಿದ್ದಾರೆ. ಮಹದೇವಪುರ, ಚಿಕ್ಕಮಗಳೂರು, ಕೊಡಗು ಕಾಫಿ ಎಸ್ಟೇಟ್‌ಗಳಲ್ಲಿ ಸಾವಿರಾರು ಬಾಂಗ್ಲಾ ದೇಶೀಯರಿದ್ದಾರೆ. ಇದಕ್ಕೆ ಎಸ್‌ಐಆರ್ ಅಂತ್ಯ ಹಾಡಲಿದೆ. ಗುರುತಿನ ಚೀಟಿ ಇರುವವರು ಭಯ ಪಡಬೇಕಿಲ್ಲ. ಪ್ರತಿ ಬೂತ್‌ನಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಏಜೆಂಟ್ ಇರುವಾಗ ಅರ್ಹ, ನಿಜವಾದ ಮತದಾರರ ಹೆಸರು ರದ್ದಾಗಲು ಸಾಧ್ಯವೇ ಇಲ್ಲ ಎಂದು ಗಮನಸೆಳೆದರು. ಬಾಂಗ್ಲಾ ದೇಶದ ಮುಸ್ಲಿಮರ ಮತಗಳಿಂದ ಗೆಲ್ಲುತ್ತೇವೆಂದು…
ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?
ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ ಆರ್ಥಿಕ ಸಹಾಯ ಸ್ಥಗಿತಗೊಂಡಿದ್ದು, ಕಳೆದ ಮೂರು ವರ್ಷದಿಂದ ಸರ್ಕಾರ ಇವರನ್ನು ಶೋಷಣೆ ಮಾಡುತ್ತಿದೆ. ಗೃಹಲಕ್ಷ್ಮಿಯ 5,000 ಕೋಟಿ ರೂ., ಅನ್ನಭಾಗ್ಯದ 700 ಕೋಟಿ ರೂ. ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45,000 ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ಇನ್ನೂ…
ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ
ಕೊಪ್ಪಳ: ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎನ್ನಲಾಗಿದೆ. ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ
ಧರ್ಮಶಾಲಾದಲ್ಲಿ ನಡೆದ IPL 2026 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈಗೆ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 200 ರನ್‌ಗಳ ಸವಾಲಿನ ಗುರಿ ನೀಡಿತು. ಗುರಿ ಬೆನ್ನಟ್ಟಿದ ಮುಂಬೈ ಆರಂಭದಲ್ಲೇ ವೇಗವಾಗಿ ರನ್ ಕಲೆಹಾಕಿತು. ರಯಾನ್ ರಿಕಲ್ಟನ್ 48 ರನ್ ಹಾಗೂ ರೋಹಿತ್ ಶರ್ಮಾ 25 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. ಬಳಿಕ ತಿಲಕ್ ವರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ 75 ರನ್ ಸಿಡಿಸಿ ತಂಡದ ಗೆಲುವಿನ ರೂವಾರಿಯಾದರು. ಮುಂಬೈ ಇಂಡಿಯನ್ಸ್ 19.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿ ಗೆಲುವಿನ ದಡ ಸೇರಿತು. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡ ಸತತ ಐದನೇ ಸೋಲನ್ನು ಅನುಭವಿಸಿದೆ.
CNG ಗ್ರಾಹಕರಿಗೂ ಬೆಲೆ ಏರಿಕೆಯ ಬಿಸಿ; ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಳ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮಾತ್ರವಲ್ಲ, ಬೆಲೆ ಏರಿಕೆಯ ಬಿಸಿ CNG ಗ್ರಾಹಕರಿಗೂ ತಟ್ಟಿದೆ. ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ತಂದಿಟ್ಟ ಫಜೀತಿಯಿಂದಾಗಿ ಭಾರತದಲ್ಲೂ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿಡೇ. ಇದರಿಂದಾಗಿ ದೇಶಾದ್ಯಂತ ಸಿಎನ್‌ಜಿ ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಯಾಗಿದೆ. ಹಾರ್ಮುಜ್ ಜಲಸಂಧಿ ಬಿಕ್ಕಟ್ಟು, ಜಾಗತಿಕ ಇಂಧನ ಮಾರುಕಟ್ಟೆಯ ಅಸ್ಥಿರತೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದರ ಏರಿಕೆಗೆ ಕಾರಣವಾಗಿದೆ ಎಂದು ಕಂಪನಿಗಳು ತಿಳಿಸಿವೆ. ದೆಹಲಿಯಲ್ಲಿ ಸಿಎನ್‌ಜಿ ದರ ₹77.09ರಿಂದ ₹79.09ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ ₹84 ತಲುಪಿದೆ. ಈ ದರ ಏರಿಕೆಯ ಬಿಸಿ ಸಾರ್ವಜನಿಕ ಸಾರಿಗೆ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ ₹3 ಏರಿಕೆ
ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು ₹3ರಷ್ಟು ಹೆಚ್ಚಿಸಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಪರಿಷ್ಕೃತ ದರ ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ₹94.77ರಿಂದ ₹97.77ಕ್ಕೆ ಏರಿಕೆಯಾಗಿದ್ದು, ಡೀಸೆಲ್ ₹87.67ರಿಂದ ₹90.67ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ₹102.90ರಿಂದ ₹106.17ಕ್ಕೆ ಏರಿಕೆಯಾದರೆ, ಡೀಸೆಲ್ ₹90.98ರಿಂದ ₹94.10ಕ್ಕೆ ಹೆಚ್ಚಳವಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ₹108.74 ಮತ್ತು ಡೀಸೆಲ್ ₹95.13ಕ್ಕೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ₹106.68 ಹಾಗೂ ಡೀಸೆಲ್ ₹93.14 ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ₹103.67 ಮತ್ತು ಡೀಸೆಲ್ ₹95.25ಕ್ಕೆ ಏರಿಕೆಯಾಗಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ, ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತ ಇದುವರೆಗೆ ಇಂಧನ ದರ ಏರಿಕೆಯನ್ನು ತಪ್ಪಿಸಿತ್ತು. ಆದರೆ ಇದೀಗ ತೈಲ ಕಂಪನಿಗಳು ಬೆಲೆ ಹೆಚ್ಚಳ ಘೋಷಿಸಿವೆ. ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ…
‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ
ಚೆನ್ನೈ: ‘ವರವು’ಚಿತ್ರದ ಮೇಲಿನ ಕುತೂಹಲ ನಡುವೆಯೇ, ನಿರ್ಮಾಪಕರು ನಟಿ ಸುಕನ್ಯಾ ಅವರ ಪಾತ್ರದ ಹೆಸರನ್ನು ಬಹಿರಂಗಪಡಿಸಿದ್ದಾರೆ. ಚಿತ್ರದಲ್ಲಿ ಅವರು “ಸಿಸ್ಟರ್ ಡೈಸಿ” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಓಲ್ಗಾ ಪ್ರೊಡಕ್ಷನ್ಸ್ ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಸುಕನ್ಯಾ ಅವರ ಪೋಸ್ಟರ್ ಬಿಡುಗಡೆ ಮಾಡಿದ್ದು, ಚಿತ್ರದ ಟ್ರೇಲರ್ ಈಗಾಗಲೇ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ. ಜೋಜು ಜಾರ್ಜ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ಶಾಜಿ ಕೈಲಾಸ್ ನಿರ್ದೇಶಿಸಿದ್ದಾರೆ. ಟ್ರೇಲರ್‌ನಲ್ಲಿ ಪೆರೋಲ್ ಮೇಲೆ ಬಿಡುಗಡೆಯಾಗುವ ಕೊಲೆ ಅಪರಾಧಿ ಪಾಲ್ಸನ್‌ನ ಸೇಡು ಮತ್ತು ಹಿಂಸಾತ್ಮಕ ಹೋರಾಟವನ್ನು ತೀವ್ರವಾಗಿ ಚಿತ್ರಿಸಲಾಗಿದೆ. ಪಾಲ್ಸನ್ ಪಾತ್ರದಲ್ಲಿ ಜೋಜು ಜಾರ್ಜ್ ಕಾಣಿಸಿಕೊಂಡಿದ್ದು, ಅವನ ಮೇಲೆ ಪ್ರಭಾವ ಬೀರುವ ಏಕೈಕ ವ್ಯಕ್ತಿಯಾಗಿ ಸನ್ಯಾಸಿನಿ ಸಿಸ್ಟರ್ ಡೈಸಿ ಕಾಣಿಸಿಕೊಳ್ಳುತ್ತಾರೆ. “ದ್ವೇಷದಿಂದ ಯಾರನ್ನೂ ನೋಯಿಸಬೇಡ” ಎಂದು ಅವಳು ಮನವಿ ಮಾಡುವ ದೃಶ್ಯ ಟ್ರೇಲರ್‌ನ ಪ್ರಮುಖ ಆಕರ್ಷಣೆಯಾಗಿದೆ. ಮಲಬಾರ್ ಹಿನ್ನೆಲೆಯ ಈ ಆಕ್ಷನ್-ಸರ್ವೈವಲ್ ಥ್ರಿಲ್ಲರ್ ಚಿತ್ರದಲ್ಲಿ ಮುರಳಿ ಗೋಪಿ,…
ಹಿಜಾಬ್ ಅನುಮತಿ ಕುರಿತು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಬೆಂಗಳೂರು: ಶಾಲೆಗಳಲ್ಲಿ ವಸ್ತ್ರಸಂಹಿತೆ ಇರಬೇಕೇ ಬೇಡವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶಾಸಕ ಯಶ್‍ಪಾಲ್ ಸುವರ್ಣ ಮತ್ತು ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಸುದ್ದಿಗೋಷ್ಠಿ ನಡೆಸಿದ ಸಿ.ಟಿ.ರವಿ, ಹಿಜಾಬ್‍ಗೆ ಅನುಮತಿ ನೀಡಿ, ಜನಿವಾರ- ರುದ್ರಾಕ್ಷಿಯನ್ನೂ ಎಳೆದು ತಂದು, ಕೇಸರಿ ಶಾಲಿಗೆ ನಿಷೇಧ ಹೇರಿ ಒಂದು ಸುತ್ತೋಲೆಯನ್ನು ಸರಕಾರ ಹೊರಡಿಸಿದೆ ಎಂದರು. ಬಿಜೆಪಿ, ಹಿಜಾಬ್ ವಿರೋಧಿಯಲ್ಲ; ನಾವು ಹಿಜಾಬ್ ವಿರೋಧಿಸಿಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು. ಯಾವಾಗಿನಿಂದ ಯೂನಿಫಾರಂ (ವಸ್ತ್ರಸಂಹಿತೆ) ಆರಂಭವಾಗಿದೆ? ಯಾವ ಉದ್ದೇಶಕ್ಕೆ ಅದು ಪ್ರಾರಂಭವಾಗಿದೆ? ಎಂದು ಕೇಳಿದ ಅವರು, ಅಕ್ಷರ ಮತ್ತು ಜ್ಞಾನ ಹೆಚ್ಚಿಸಬೇಕಾದ ಶಿಕ್ಷಣ ಸಚಿವರಿಗೆ ಅದರ ಉದ್ದೇಶದ ಬಗ್ಗೆಯೂ ಸ್ಪಷ್ಟತೆ ಇಲ್ಲ. ಅದರ ಇತಿಹಾಸದ ಅರಿವೂ ಇಲ್ಲ. ಕೇವಲ ಮತೀಯ ಓಲೈಕೆಯ ರಾಜನೀತಿಯ ಭಾಗವಾಗಿ ಶಾಲೆಗಳಲ್ಲಿ ಮತೀಯ ಭಾವನೆಗಳಿಗೆ ಜಾತ್ಯತೀತತೆಯ ಹೆಸರಿನಲ್ಲಿ ಅನುಮತಿ ಕೊಟ್ಟಿದ್ದಾರೆ…
