ಚಿತ್ರದುರ್ಗ: ಹಿರಿಯೂರು ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು 23 ವರ್ಷದ ರಾಹುಲ್, ನಂಜುಂಡಿ ಹಾಗೂ 22 ವರ್ಷದ ವಿಶ್ವನಾಥ್, ಯಶ್ವಂತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿರಿಯೂರು ಸಮೀಪದ ನಂಜಯ್ಯನಕೊಟ್ಟಿಗೆ ಗ್ರಾಮದವರು ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Author: NavaKarnataka
‘ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ಗೆ ಇಲ್ಲ’; ಹೆಚ್ಡಿಕೆ
ಬೆಂಗಳೂರು: VB G-RAM-G ಯೋಜನೆ ಕುರಿತು ಕಾಂಗ್ರೆಸ್ ಪಕ್ಷವು ಸುಳ್ಳು ಮಾಹಿತಿಯನ್ನು ಹರಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು. ಈ ಕುರಿತು ದಾಖಲೆಗಳೊಂದಿಗೆ ಬಹಿರಂಗ ಸಾರ್ವಜನಿಕ ಚರ್ಚೆಗೆ ಬರಲು ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಅವರು ಶನಿವಾರ ಸವಾಲು ಹಾಕಿದ್ದಾರೆ. MGNREGA ರದ್ದುಪಡಿಸಿ ಕೇಂದ್ರ ಸರ್ಕಾರ VB G-RAM-G ಜಾರಿಗೆ ತಂದಿದೆ ಎಂಬ ಆರೋಪವನ್ನು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಡಿದ್ದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸಚಿವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಗತ್ಯವಿದ್ದರೆ ಚರ್ಚೆಯ ಜೊತೆಗೆ ದೊಡ್ಡ ಆಂದೋಲನಕ್ಕೂ ಸಿದ್ಧ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ…
ಮಲೆಯಾಳಿ ಭಾಷಾ ಮಸೂದೆಗೆ ಕರ್ನಾಟಕದ ಬಲವಾದ ಆಕ್ಷೇಪ
ಬೆಂಗಳೂರು: ಕೇರಳ ವಿಧಾನಸಭೆಯಲ್ಲಿ ಮಂಡನೆಯಾಗಿರುವ ಮಲೆಯಾಳಿ ಭಾಷಾ ಮಸೂದೆಯಿಂದ ಗಡಿಭಾಗದ ಜಿಲ್ಲೆಗಳಲ್ಲಿ, ವಿಶೇಷವಾಗಿ ಕಾಸರಗೋಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲಾಗುವ ದುಷ್ಪರಿಣಾಮಗಳ ಕುರಿತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ಮಸೂದೆಯ ಪುನರ್ ಪರಿಶೀಲನೆಗೆ ಒತ್ತಾಯಿಸಿದ್ದಾರೆ. ಪರಸ್ಪರ ಗೌರವ, ಒಕ್ಕೂಟ ವ್ಯವಸ್ಥೆಯೊಳಗಿನ ಸಹಕಾರ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಭಾವನೆಯಿಂದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಮೌಲ್ಯಗಳು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಬಂಧವನ್ನು ದೀರ್ಘಕಾಲದಿಂದ ಮಾರ್ಗದರ್ಶನ ಮಾಡುತ್ತಿದೆ. ಈ ಎರಡು ರಾಜ್ಯಗಳು ಕೇವಲ ಭೌಗೋಳಿಕವಾಗಿ ಮಾತ್ರವಲ್ಲ, ಆಳವಾದ ಸಾಂಸ್ಕೃತಿಕ, ಸಾಮಾಜಿಕ ಮತ್ತು ಮಾನವೀಯ ಬಂಧಗಳಿಂದ ಬೆಸೆದುಕೊಂಡಿವೆ ಎಂದು ಸಿದ್ದರಾಮಯ್ಯ ಗಮನಸೆಳೆದಿದ್ದಾರೆ. ಈ ಸಂದರ್ಭದಲ್ಲಿ, ಪ್ರಸ್ತಾಪಿತ ಮಲಯಾಳಂ ಭಾಷಾ ಮಸೂದೆಯ ಬಗ್ಗೆ ನನಗಿರುವ ಗಂಭೀರ ಕಳವಳವನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಈ ಮಸೂದೆಯು ಕನ್ನಡ ಮಾಧ್ಯಮದ ಶಾಲೆಗಳಲ್ಲೂ, ವಿಶೇಷವಾಗಿ ಕಾಸರಗೋಡಿನಂತಹ…
ಹಾವೇರಿಯಲ್ಲಿ ಕ್ಯಾನ್ಸರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಘೋಷಣೆ
ಬೆಂಗಳೂರು: ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಗುರುತಿಸಲ್ಪಟ್ಟಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 71 ವೈದ್ಯಕೀಯ ಕಾಲೇಜುಗಳಿದ್ದು, ಅವುಗಳಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಾಗಿವೆ ಎಂದು ಅವರು ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ಗಳು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಯೋಜನೆ ಇದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯದ ಜನತೆಗೆ ಉನ್ನತ ಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಆರೋಗ್ಯ ಸೇವೆಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ…
ಅಯ್ಯಪ್ಪ ಭಕ್ತರ ವಾಹನ ಅಪಘಾತ; ನಾಲ್ವರು ಸಾವು
ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಭಕ್ತರಿದ್ದ ಕ್ರೂಸರ್ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
‘ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಕುಮಾರಸ್ವಾಮಿಗಿಂತ ರಾಜಕೀಯದಲ್ಲಿ ಹೆಚ್ಚು ಅನುಭವವಿದೆ. ನಾನು ಮುಖ್ಯಮಂತ್ರಿಯಾಗಿರದಿರಬಹುದು, ಆದರೆ ಅವರಿಗಿಂತ ಉತ್ತಮ ಆಡಳಿತ ಅನುಭವ ನನಗಿದೆ” ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಬಹಳ ಕಾಲದಿಂದ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಆಡಳಿತ ಎಂದರೇನು, ಹೇಗೆ ಕಾರ್ಯನಿರ್ವಹಿಸಬೇಕು, ಯಾರನ್ನು ಕರೆಯಬೇಕು, ಯಾರನ್ನು ಕರೆಯಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಕುಮಾರಸ್ವಾಮಿ ಅವರಿಂದ ನಾನು ಏನನ್ನೂ ಕಲಿಯಬೇಕೆಂದು ಬಯಸುವುದಿಲ್ಲ” ಎಂದು ಹೇಳಿದರು. ಪಕ್ಷದ ಜವಾಬ್ದಾರಿಗಳ ಕುರಿತು ಮಾತನಾಡಿದ ಅವರು, “ನಾನು ಕಾಂಗ್ರೆಸ್ಸಿಗನಾಗಿ ಪಕ್ಷಕ್ಕಾಗಿ ಕೆಲಸ ಮಾಡಬೇಕಿದೆ. ಈ ಹಿಂದೆ ಅಸ್ಸಾಂಗೆ ಹೋಗಿದ್ದೆ. ಎಐಸಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮತ್ತೆ ಅಸ್ಸಾಂಗೆ ಹೋಗುವಂತೆ ಸೂಚಿಸಲಾಗಿದೆ. ಆದ್ದರಿಂದ ಪಕ್ಷದ ಸೂಚನೆಯಂತೆ ಅಲ್ಲಿಗೆ ತೆರಳುತ್ತೇನೆ” ಎಂದು ಸ್ಪಷ್ಟಪಡಿಸಿದರು. #WATCH | Bengaluru:…
ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ; ಸಿದ್ದರಾಮಯ್ಯ ಆರೋಪ
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ…
‘ಭೂತ್ ಬಾಂಗ್ಲಾ’; ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ
ಮುಂಬೈ: ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಹಾರರ್–ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಮೇ 15, 2026ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಪ್ರಕಟಿಸಿದ್ದಾರೆ. ಈ ಚಿತ್ರದ ವಿಶೇಷತೆ ಎಂದರೆ, 14 ವರ್ಷಗಳ ನಂತರ ನಿರ್ದೇಶಕ ಪ್ರಿಯದರ್ಶನ್ ಮತ್ತು ನಟ ಅಕ್ಷಯ್ ಕುಮಾರ್ ಮತ್ತೆ ಒಂದಾಗಿರುವುದು. ಹಾರರ್–ಹಾಸ್ಯ ಪ್ರಕಾರದಲ್ಲಿ ತಮ್ಮದೇ ಶೈಲಿಯಿಂದ ಗುರುತಿಸಿಕೊಂಡಿರುವ ಈ ಜೋಡಿ, ಮತ್ತೊಮ್ಮೆ ಹಾಸ್ಯ ಮತ್ತು ಭಯದ ಸಮತೋಲನದ ಮನರಂಜನೆ ನೀಡಲು ಸಜ್ಜಾಗಿದೆ. ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಿರ್ಮಾಪಕರು, “ಬಂಗಲೆ ಸೆ ಏಕ್ ಖಬರ್ ಆಯಿ ಹೈ! 2026 ಮೇ 15ರಂದು ಚಿತ್ರಮಂದಿರಗಳ ಬಾಗಿಲು ತೆರೆಯಲಿದೆ” ಎಂದು ಬರೆದು ಬಿಡುಗಡೆ ದಿನಾಂಕ ಘೋಷಿಸಿದರು. ಚಿತ್ರದಲ್ಲಿ ಟಬು, ಪರೇಶ್ ರಾವಲ್, ರಾಜ್ಪಾಲ್ ಯಾದವ್, ಜಿಶು ಸೇನ್ಗುಪ್ತಾ, ಅಸ್ರಾನಿ ಹಾಗೂ ವಾಮಿಕಾ ಗಬ್ಬಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದ…
ಜ.24 ರಂದು ಮಂಗಳೂರಿನಲ್ಲಿ ವಕೀಲರ ಸಮಾವೇಶ; ದೆಹಲಿಯಲ್ಲಿ ಕಾರ್ಯತಂತ್ರ
ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ…
ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸೌಲಭ್ಯವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ ಗ್ರಾಅಪ 30 ಗ್ರಾಪಂಸಿ 2008, ದಿನಾಂಕ 31-10-2008ರ ಪ್ರಕಾರ, ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು 01-11-2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಆದರೆ ಈ ಆದೇಶದ ಅನುಷ್ಠಾನವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾನವಾಗಿ ನಡೆದಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನಗೊಂಡಿರುವುದು ಕಂಡುಬಂದಿದೆ. ಇನ್ನು ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಈ ಸೌಲಭ್ಯವನ್ನು ಇನ್ನೂ ಜಾರಿಗೊಳಿಸಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ…
