ಮಲೆನಾಡಿನ ಅಯ್ಯನ ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ; ಸಚಿವ ಸಿ.ಟಿ.ರವಿ ಚಾಲನೆ
ಚಿಕ್ಕಮಗಳೂರು: ಮಲೆನಾಡಿನ ಅಯ್ಯನ ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಈ ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜೇತನಾ, ಜಿಲ್ಲಾಡಳಿತ, ಪ್ರವಾಸೋದ್ಯಮ, ಅರಣ್ಯ ಇಲಾಖೆ, ಜೇತನಾ ಸಹಯೋಗದಲ್ಲಿ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಅಯ್ಯನ ಕೆರೆ ಬಳಿ ಏರ್ಪಡಿಸಿದೆ. ಈ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ ಚಟುವಟಿಕೆ, ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಈ ಭಾಗದಲ್ಲಿ ವ್ಯಾಪಾರ ಸುಧಾರಣೆಯಾಗುತ್ತದೆ ಎಂದರು. ಪರಿಸರಕ್ಕೆ ಧಕ್ಕೆಯಾಗದಂತೆ ಪ್ರವಾಸೋದ್ಯಮ ಉತ್ತೇಜನ ನಿಟ್ಟಿನಲ್ಲಿ ಗಮನ ಹರಿಸಲಾಗುವುದು. ಇಲ್ಲಿ ಸೈಕ್ಲಿಂಗ್, ಕಾಯ್ಕಿಂಗ್ ಕೈಗೊಳ್ಳಲಾಗುತ್ತದೆ. ಕೆರೆಯಲ್ಲಿ ಡೀಸೆಲ್ ಯಂತ್ರ ಬಳಸಲು ಅವಕಾಶ ನೀಡಿಲ್ಲ ಎಂದರು. ಇದನ್ನೂ ಓದಿ.. ಮಲೆನಾಡಲ್ಲಿ ಮಳೆಹಾನಿ; ಸೇನಾನಿಯಂತೆ ಪರಿಹಾರ ಕಾರ್ಯಾಚರಣೆಗೆ ಧುಮುಕಿದ ಸಚಿವ ರವಿ
Copy and paste this URL into your WordPress site to embed
Copy and paste this code into your site to embed