ನವದೆಹಲಿ: ಬಳ್ಳಾರಿ–ಚಿಕ್ಕಜಾಜೂರು ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ಅನುಮತಿ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಲ ಶಕ್ತಿ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ಬಿ ಸೋಮಣ್ಣ, ಬುಧವಾರ ನಡೆದ ಸಚಿವ ಸಂಪುಟದಲ್ಲಿ ಬಳ್ಳಾರಿ–ಚಿಕ್ಕಜಾಜೂರು ನಡುವಿನ 185 ಕಿ.ಮೀ ಉದ್ದದ ರೈಲ್ವೆ ಮಾರ್ಗದ ದ್ವಿಪಥೀಕರಣಕ್ಕೆ ಅನುಮತಿ ನೀಡಿ, 3,340 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಈ ಮಹತ್ವದ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಹಾಗೂ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ರೈಲ್ವೆ ಮಾರ್ಗದ ದ್ವಿಪಥೀಕರಣದಿಂದ ಹೊಸಪೇಟೆ – ಬಳ್ಳಾರಿ ಕೈಗಾರಿಕಾ ಪ್ರದೇಶ, ಬಳ್ಳಾರಿ – ಚಿತ್ರದುರ್ಗ ಗಣಿಗಾರಿಕೆ ಪ್ರದೇಶ ಹಾಗೂ ಮಂಗಳೂರು ಬಂದರು ಮತ್ತು ಹೈದರಾಬಾದ್ ಪ್ರದೇಶಗಳ ನಡುವೆ ನೇರ ಸಂಪರ್ಕ, ಪ್ರವಾಸೋದ್ಯಮ, ಸರಕು ಸಾಗಣೆ ಸೇರಿದಂತೆ ಸಾರಿಗೆ ಸಂಪರ್ಕಕ್ಕೆ ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆಗೆ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿಗಳ ಕೊಡುಗೆಯಾಗಿದೆ ಎಂದು ಅವರು ತಿಳಿಸಿದ್ದಾರೆ.