ಬೆಂಗಳೂರು: ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕವೂ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕಾರಣವಾಗಬೇಕು. ಇದು ಅತೀ ಜರೂರಿನ ಕಾರ್ಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಕರೆ ನೀಡಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ 54ನೇ ಘಟಿಕೋತ್ವವದಲ್ಲಿ ಪದವಿದಧರು, ಸ್ನಾತಕೋತ್ತರ ಪದವಿಧರರು, ಪಿ.ಎಚ್.ಡಿ. ಪಡೆದವರಿಗೆ ಪದವಿಗಳನ್ನು ಪ್ರದಾನ ಮಾಡಿದ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿಯೂ ಆಗಿರುವ ಸಚಿವ ಬಿ.ಸಿ. ಪಾಟೀಲ್, ರಾಜ್ಯದಲ್ಲಿ ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಗಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿಯ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕಿದೆ ಎಂದರು.
ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ – ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ. ಆಹಾರ ಮತ್ತು ಕೃಷಿ ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ ಶೇಕಡ 15ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ವಿವರಿಸಿದರು.
ಪದವಿ, ಅತೀಹೆಚ್ಚು ಚಿನ್ನದ ಪದಕಗಳನ್ನು ಪಡೆದವರಲ್ಲಿ ವಿದ್ಯಾರ್ಥಿನಿಯರೇ ಅಧಿಕವಾಗಿದ್ದಾರೆ. ಇದು ಸಂತೋಷದ ಸಂಗತಿ. ಆದರೆ ಉದ್ಯಮಿಗಳಾದವರು, ಸರ್ಕಾರಿ ಉದ್ಯೋಗಿಗಳಾದವರ ಸಂಖ್ಯೆ ಗಮನಿಸಿದರೆ ಮಹಿಳೆಯರು ಕಡಿಮೆ ಇದ್ದಾರೆ. ಕೃಷಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಕೃಷಿ ನವೋದ್ಯಮಿಗಳಾಗಿ ಹೊರಹೊಮ್ಮಬೇಕು. ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮಾದರಿಯಲ್ಲಿ ಇಂಥ ವಿದ್ಯಾರ್ಥಿನಿಯರ ಜೀವನಪಥ ಮುಂದುವರಿಯಲು ಕೃಷಿ ವಿಶ್ವವಿದ್ಯಾಲಯ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.
ಅಖಿಲ ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಡಾ. ಕೈಲಾಸವಡಿವೊ ಶಿವನ್ ಅವರು ಆನ್ ಲೈನ್ ಮೂಲಕ ಘಟಿಕೋತ್ಸವನ್ನುದ್ದೇಶಿಸಿ ಸಚಿವರು ಮಾತನಾಡಿದರು. ಬಲವಿದ್ದವರೇ ಬದುಕುತ್ತಾರೆ ಎಂದು ಡಾರ್ವೀನ್ ಥಿಯರಿ ಹೇಳುತ್ತದೆ. ಅಶಕ್ತರೂ ಬದುಕಬಲ್ಲ ಸಮಾಜವನ್ನು ಇನ್ನಷ್ಟು ಸದೃಢವಾಗಿ ಕಟ್ಟುವಲ್ಲಿ ನಿಮ್ಮ ಪಾತ್ರ ಗಣನೀಯ ಎಂದ ಅವರು ತಮ್ಮ ಕೃಷಿಕ ಕುಟುಂಬದ ಹಿನ್ನೆಲೆ, ವಿದ್ಯಾರ್ಥಿ ದೆಶೆಯಲ್ಲಿ ಕೃಷಿಕಾರ್ಯದಲ್ಲ ಕುಟುಂಬದ ಹಿರಿಯರಿಗೆ ಸಹಾಯ ಮಾಡುತ್ತಿದ್ದನ್ನು ನೆನಪಿಸಿದರು.
ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಅವರು ಶೈಕ್ಷಣಿಕ ವರದಿ ಮಂಡಿಸಿದರು.