ಬೆಂಗಳೂರು- ಧಾರವಾಡ ‘ವಂದೇ ಭಾರತ್’ ಬೆಳಗಾವಿಯವರೆಗೆ ವಿಸ್ತರಣೆ

ಬೆಳಗಾವಿ: ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.

ಪ್ರತಿ ದಿನ ಬೆಳಗ್ಗೆ 5:45ಕ್ಕೆ ಬೆಂಗಳೂರು ನಿಲ್ದಾಣದಿಂದ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ಮಧ್ಯಾಹ್ನ 2ಕ್ಕೆ ಹೊರಟು ರಾತ್ರಿ 10ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ ಎಂದು ರೈಲ್ವೇ ಮೂಲಗಳು ಮಾಹಿತಿ ನೀಡಿವೆ.

Related posts