ಬೆಂಗಳೂರು ವಿವಿ: ವಿಚಾರ ಸಂಕಿರಣ ಭವಿಷ್ಯದ ಜ್ಞಾನವೃದ್ಧಿಗೆ ಪೂರಕ: ಡಾ.ಎಂ.ಗೋವಿಂದರಾಜು ಅಭಿಮತ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿದ್ಧ “ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು” ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.

ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್‌ ಎಸ್. ಸಿದ್ದಯ್ಯ ಇವರು ವಿವಿಧ ದೃಷ್ಟಿಕೋನಗಳ ಮೂಲಕ ವಿವಿಧ ಆಯಾಮ ಹಾಗೂ ಪ್ರಚಲಿತ ವಸ್ತುಸ್ಥಿತಿಯ ಬಗ್ಗೆ ವಿಸ್ತಾರವಾಗಿ ವಿಚಾರ ಮಂಡಿಸಿದರು.

ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ಮಾತನಾಡಿ, ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಶೈಕ್ಷಣಿಕ ಬೆಳವಣಿಗೆಯ ವಿಷಯದಲ್ಲಿ ವಿಚಾರ ಸಂಕಿರಣಗಳು ಬಹುದೊಡ್ಡ ಪಾತ್ರ ನಿರ್ವಹಿಸುತ್ತವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಪ್ರೊ.ಟಿ.ರಾಜೇಂದ್ರ ಪ್ರಸಾದ್, ಡಾ. ರಾಣಿ ಮೇಡಂ, ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಉಪನ್ಯಾಸಕ ಡಾ. ಚಂದ್ರಶೇಖರ್, ಡಾ. ಪ್ರಕಾಶ್, ಎಸ್.ಎನ್, ಡಾ. ರಜನಿಕಾಂತ್, ಡಾ. ಪ್ರಕಾಶ್ ಡಿ.ಸಿ, ಸಂಶೋಧನಾರ್ಥಿ ಈಶ್ವರ್ ಸಿರಿಗೇರಿ, ಶ್ರೀಗುರುರಾಘವೇಂದ್ರ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಮತ್ತು ಭೊಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts