ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ

ಬೆಳಿಗ್ಗೆಯಷ್ಟೇ ಹುದ್ದೆ ತೊರೆಯುವ ಬಗ್ಗೆ ಹೊರಟ್ಟಿ ಮಾತನಾಡಿದ್ದರು. ಆ ಸುದ್ದಿಗೋಷ್ಠಿಯ ಬೆನ್ನಲ್ಲೇ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡಿದೆ‌.

ಈ ನಡುವೆ ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ಬಸವರಾಜ ಹೊರಟ್ಟಿಯವರು ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಭಾಪತಿ ಹೊರಟ್ಟಿ, ತಾವು ರಾಜೀನಾಮೆ ಪತ್ರ ಸಿದ್ದಪಡಿಸಿದ್ದೇನೆಯೇ ಹೊರತು ಅಧಿಕೃತವಾಗಿ ನೀಡಿಲ್ಲ ಎಂದಿದ್ದಾರೆ. ತಮ್ಮ ಕಚೇರಿ ಸಿಬ್ಬಂದಿಯಿಂದ ಸಹಿ ಇಲ್ಲದ ಪತ್ರ ಸೋರಿಕೆಯಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related posts