BBMP ವಿಂಗಡನೆ; ಐದು ಹೊಸ ಪಾಲಿಕೆಗಳ ರಚನೆಗೆ ಸರ್ಕಾರದ ಅಧಿಕೃತ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಐದು ಪ್ರತ್ಯೇಕ ಮಹಾನಗರ ಪಾಲಿಕೆಗಳಾಗಿ ವಿಭಜಿಸಲು ಅಧಿಕೃತ ಆದೇಶ ಹೊರಡಿಸಿದೆ. ನೂತನವಾಗಿ ರಚನೆಯಾಗಲಿರುವ ಈ ಐದು ಪಾಲಿಕೆಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಸರ್ಕಾರ ಪ್ರಕಟಿಸಿದೆ.

ಐದು ಹೊಸ ಪಾಲಿಕೆಗಳ ವಿವರ:

  • ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ

  • ಬೆಂಗಳೂರು ಉತ್ತರ ಮಹಾನಗರ ಪಾಲಿಕೆ

  • ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ

  • ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ

  • ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ

BBMPಯ ಕೇಂದ್ರ ಕಚೇರಿಯನ್ನು ಆಗಸ್ಟ್ 10ರೊಳಗೆ GBA ಕೇಂದ್ರ ಕಚೇರಿಯಾಗಿ ಪರಿವರ್ತನೆ ಮಾಡಲಾಗುವುದು. ಅಗಸ್ಟ್ 11ರಿಂದ ಆರಂಭವಾಗುವ ಮುಂಗಾರು ಅಧಿವೇಶನದಲ್ಲಿ ಈ ಹೊಸ ಪಾಲಿಕೆಗಳ ರಚನೆಗೆ ಸಂಬಂಧಿಸಿದ ವಿಧೇಯಕದ ಕುರಿತು ಚರ್ಚಿಸಿ, ಬಿಲ್ ಪಾಸಾಗುವ ಸಾಧ್ಯತೆಯಿದೆ.

Related posts