11 ಸಾವಿರ ಕೋಟಿ ರೂ. ದುಬಾರಿ ಬಜೆಟ್‌ ಮಂಡನೆಗೆ ಬಿಬಿಎಂಪಿ ಕಸರತ್ತು

ಬೆಂಗಳೂರು: ಸಿಲಿಕಾನ್ ಸಿಟಿಯನ್ನು ಮಾದರಿ ನಗರವನ್ನಾಗಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಂತ್ರಗಾರಿಕೆಯಲ್ಲಿ ತೊಡಗಿದೆ. ಈ ಸಂಬಂಧ ಈ ಬಾರಿಯೂ ದುಬಾರಿ ಬಜೆಟ್ ಮಂಡಿಸಲು ಬಿಬಿಎಂಪಿ ಸಿದ್ಧತೆ ಮಾಡಿದೆ.

2020-21ನೇ ಸಾಲಿನಲ್ಲಿ 11 ಸಾವಿರ ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆಗೆ ಕಸರತ್ತು ಸಾಗಿದ್ದು ಈ ಸಂಬಂಧ ರಾಜ್ಯ ಸರ್ಕಾರದ ಅನುದಾನ ಹೆಚ್ಚಳಕ್ಕಾಗಿ ಮುಖ್ಯಮಂತ್ರಿಗಳ ಮನವೊಲಿಕೆ ಕಸರತ್ತು ಕೂಡಾ ಸಾಗಿದೆ.

ವಿವಿಧ ಮೂಲಗಳ ತೆರಿಗೆ ಸಹಿತ ಸುಮಾರು 4500 ಕೋಟಿ ರೂಪಾಯಿ ಆದಾಯ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಅದರ ಜೊತೆಯಲ್ಲೇ ರಾಜ್ಯ ಸರ್ಕಾರದಿಂದ 7,500 ಕೋಟಿ ರೂಪಾಯಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌.ಶ್ರೀನಿವಾಸ್‌ ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮಾರ್ಚ್‌ 3ನೇ ವಾರ ಬಜೆಟ್‌ ಮಂಡಿಸುವ ಸುಳಿವನ್ನು ಅವರು ನೀಡಿದ್ದಾರೆ.

Related posts