ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಎನ್. ಮಂಜುನಾಥ್ ಪ್ರಸಾದ್ ಅವರನ್ನು ಬಿಬಿಎಂಪಿ ಕಮಿಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಅನಿಲ್ ಕುಮಾರ್ ಅವರನ್ನು ವರ್ಗಾವಣೆಗೆ ಬೆಂಗಳೂರಿನ ಹಳವಾರು ಸಚಿವರು ಶಾಸಕರ ಒತ್ತಡ ಹಿನ್ನೆಲೆಯಲ್ಲಿ ಮುಖ್ಯಮತ್ರಿ ಯಡಿಯೂರಪ್ಪ ಅವರು ಈ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.
ಅನಿಲ್ ಕುಮಾರ್ ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.