ರಸಗೊಬ್ಬರಗಳ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ: ಕೃಷಿ ಸಚಿವ ಎಚ್ಚರಿಕೆ

ಬೆಂಗಳೂರು: ರಸಗೊಬ್ಬರ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಯಾವುದೇ ಕಾರಣಕ್ಕೂ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದ್ದಲ್ಲಿ ಅಥವಾ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.

ಇಲಾಖೆಯ ನಿಯಮಾನುಸಾರವೇ ರಸಗೊಬ್ಬರವನ್ನು ರೈತರಿಗೆ ವಿತರಿಸಬೇಕು. ರೈತಬಾಂಧವರಿಗೆ ಯಾವುದೇ ಕಾರಣಕ್ಕೂ ರಸಗೊಬ್ಬರದ ಕೊರತೆಯಾಗದಂತೆ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ. ರಸಗೊಬ್ಬರಕ್ಕೆ ಯಾವುದೇ ಕೊರತೆಯಿರುವುದಿಲ್ಲ. ಅಗತ್ಯಕ್ಕನುಗುಣವಾಗಿ ರಸಗೊಬ್ಬರ ಸರಬರಾಜಿಗೆ ಕ್ರಮಕೈಗೊಳ್ಳಲಾಗಿದ್ದು , ರೈತ ಬಾಂಧವರು ಯಾವುದೇ ಇಲ್ಲಸಲ್ಲದ ವದಂತಿಗಾಗಲೀ ಸುಳ್ಳು ಸುದ್ದಿಗಾಗಲೀ ಗಮನ ನೀಡದೇ ತಾಳ್ಮೆ ವಹಿಸಿ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ರಸಗೊಬ್ಬರ ಖರೀದಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಕೆಲವೆಡೆ ಕೆಲ ಚಿಲ್ಲರೆ ಮತ್ತು ಸಗಟು ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಅಂತಹವರನ್ನು ಗುರುತಿಸಿ ಆರೋಪ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಬಿ.ಸಿ.ಪಾಟೀಲರು ಎಚ್ಚರಿಸಿದ್ದಾರೆ.

Related posts