ಬೆಂಗಳೂರು ಬಂದ್; ಬೆಳ್ಳಂಬೆಳಿಗ್ಗೆಯೇ ಕುರುಬೂರು ಸೈನ್ಯವನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಂಗಳೂರು ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜಧಾನಿ ನಗರ ಸ್ತಬ್ಧವಾಗಿದೆ.

ಇದೇ ವೇಳೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರೈತಪರ ಸಂಘಟನೆಗಳು ಹಾಗೂ ಜಲ ಸಂರಕ್ಷಣಾ ವೇದಿಕೆ ಕಾರ್ಯಕರ್ತರು ಭಾರೀ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಆದರೆ ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಬೆಂಗಳೂರು ಬಂದ್ ಸಂದರ್ಭದಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡದಿರಲು ಕ್ರಮವಹಿಸಿದ್ದಾರೆ.

ಈ ನಡುವೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ್ದ ಕಾವೇರಿ ಹೋರಾಟಗಾರರನ್ನು ಬೆಳ್ಳಂಬೆಳಿಗ್ಗೆಯೇ ಪೊಲೀಸರು ವಶಕ್ಕೆ ಪಡೆದುಕೊಂಡರು. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಸುಮಾರು 20 ಕ್ಕೂ ಹೆಚ್ಚು ರೈತರು ಪ್ರತಿಭಟನೆಗೆ ತಯಾರಿ ನಡೆಸಿದ್ದರು. ಈ ವೇಳೆ ಪೊಲೀಸರು ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಈ ಹೋರಾಟಗಾರರನ್ನು ಫ್ರೀಡಂ ಪಾರ್ಕಿಗೆ ಕರೆದೊಯ್ದ ಪೊಲೀಸರು, ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದಾರೆ ಎಂದು ರೈತ ನಾಯಕರು ತಿಳಿಸಿದ್ದಾರೆ.

Related posts