‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

ಬೆಂಗಳೂರು: ಬಡವರ ಶೋಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ‘ದಲಿತರ ಕಣ್ಣೀರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿದ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದು ಪರಿಶಿಷ್ಟರ ಕರಾಳ ದಿನಕ್ಕೆ ಕಾರಣರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿರುವ ಈ ಸರ್ಕಾರ ಶೋಷಿತರ ಕಣ್ಣಲ್ಲಿ ನೀರು ಹರಿಸಿದರೆ ಆ ಶಾಪ ನಿಮ್ಮ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಶಾಸಕರಾದ ಸಂಪಂಗಿ ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಹೋರಾಟದಲ್ಲಿ ಭಾಗವಹಿಸಿದ್ದರು.

Related posts