ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ; ಪ್ರಧಾನಿ ಜೊತೆ ಸೋಮಣ್ಣ ಚರ್ಚೆ

ನವದೆಹಲಿ: ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ ರೇಲ್ವೆ ಸಹಿತ ಕರ್ನಾಟಕದ ಹಲವು ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರಧಾನಿ ಜೊತೆ ಕೇಂದ್ರ ರೇಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಮಂಗಳವಾರ ಚರ್ಚೆ ನಡೆಸಿದರು.

ನವದೆಹಲಿಯಲ್ಲಿ  ಪ್ರಧಾನ ಮಂತ್ರಿಗಳನ್ನು ಬೇಟಿ ಮಾಡಿದ ಸಚಿವ ವಿ ಸೋಮಣ್ಣ ಸುಮಾರು 30 ನಿಮಿಷಗಳ ಕಾಲ ಚರ್ಚಿಸಿದರು.

ಬೆಂಗಳೂರು ಸಬ್ ಅರ್ಬನ್ ರೇಲ್ವೆ, ವರ್ತುಲ್ ರೇಲ್ವೆ ಇತ್ಯಾದಿಗಳ ಬಗ್ಗೆ ೨ ಸುತ್ತಿನ ಸಭೆ ನಡೆಸಿರುವ ಬಗ್ಗೆ  ಸೋಮಣ್ಣ ಪ್ರಧಾನ ಮಂತ್ರಿಗಳಿಗೆ ವಿವರಿಸಿದರು. ಕಳೆದ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು ರಾಯದುರ್ಗ ರೇಲ್ವೆ ಮಾರ್ಗ ಭೂಸ್ವಾಧಿನ ಪ್ರಕ್ರಿಯೆಯನ್ನು ಕೇವಲ 3 ತಿಂಗಳ ಅವಧಿಯಲ್ಲಿ 90% ಕ್ಕಿಂತಲೂ ಮಿಗಲಾಗಿ ಮುಗಿಸಿರುವ ಬಗ್ಗೆ ಪ್ರಧಾನ ಮಂತ್ರಿಗಳಿಗೆ ವಿವರಿಸಿದ್ದಾರೆ.

ರೇಲ್ವೆ ಅಧಿಕಾರಿ ಮತ್ತು ಜಿಲ್ಲಾಡಳಿತದ ಉತ್ತಮ ಕಾರ್ಯವೈಖರಿಯ ಬಗ್ಗೆಯೂ ಮಾನ್ಯ ಪ್ರದಾನ ಮಂತ್ರಿಗಳ ಗಮನ ಸೆಳೆದಿದ್ದು , ಪ್ರಧಾನಮಂತ್ರಿಗಳು ಅತ್ಯಂತ ಹರ್ಷ ವ್ಯಕ್ತಪಡಿಸಿದ ಬಗ್ಗೆ ಕೇಂದ್ರ ಸಚಿವ ಸೋಮಣ್ಣ ತಿಳಿಸಿದ್ದಾರೆ.

ಇದಲ್ಲದೆ ಕಳೆದ 3 ತಿಂಗಳಲ್ಲಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ರೇಲ್ವೆ ಇಲಾಖೆಗೆ ಸಂಬAಧಪಟ್ಟ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಸೋಮಣ್ಣನವರ ಕಾರ್ಯವೈಖರಿಯನ್ನು ಸನ್ಮಾನ್ಯ ಪ್ರಧಾನ ಮಂತ್ರಿಗಳು ಶ್ಲಾಘಿಸಿದ್ದಾರೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವ ಸೋಮಣ್ಣನವರು ಅತ್ಯಂತ ಸಂತಸದಿAದ ಹಂಚಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ಅಭಿವೃದ್ಧಿಯ ಕುರಿತಾಗಿ ಕೆಲವು ವಿಶೇಷ ಪ್ರಸ್ತಾವನೆಗಳನ್ನು ಮಾನ್ಯ ಪ್ರಧಾನಮಂತ್ರಿಗಳಿಗೆ ಮಂಡಿಸಿದ್ದು, ತಮ್ಮ ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಾನ್ಯ ಪ್ರಧಾನ ಮಂತ್ರಿಗಳಿಲ್ಲಿ ಮನವಿ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ರೇಲ್ವೆ ನಿಲ್ದಾಣದ ಅಭಿವೃದ್ಧಿಗೆ ರೂ.87 ಕೋಟಿ ಅನುದಾನ ನೀಡಿದ್ದು, ಈ ರೇಲ್ವೆ ನಿಲ್ದಾಣಕ್ಕೆ ಡಾ. ಶಿವಕುಮಾರ್ ಮಹಾ ಸ್ವಾಮಿಜಿಯವರ ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.

ತುಮಕೂರು – ರಾಯದುರ್ಗ ಮತ್ತು ತುಮಕೂರು-ಚಿತ್ರದುರ್ಗ-ದಾವಣಗೆರೆ ರೇಲ್ವೆ ಮಾರ್ಗವನ್ನು ಜೂನ್ 2027ರಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮಾನ್ಯ ಪ್ರಧಾನಮಂತ್ರಿಗಳಲ್ಲಿ ಕೇಂದ್ರ ಸಚಿವ ಸೋಮಣ್ಣ ಮನವಿ ಮಾಡಿದ್ದಾರೆ.

Related posts