ಭೀಮಾತೀರದ ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರ ಸೆರೆ

ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಕೃತ್ಯ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಭೀಮಾತೀರದ ಹಂತಕ ಖ್ಯಾತಿಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ರೌಡಿ ಬಾಗಪ್ಪ ಹರಿಜನನನ್ನ ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಹಂತಕರು ಬರ್ಬರ ಕೊಲೆ ಮಾಡಿದ್ದರು. ಕೃತ್ಯವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಬಾಗಪ್ಪ ಹರಿಜನ ಕೊಲೆ ಪ್ರಕರಣ ಸಂಬಂಧ ಪ್ರಕಾಶ ಅಲಿಯಾಸ್​ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್, ರಾಹುಲ್ ತಳಕೇರಿ, ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ, ಸುದೀಪ್ ಕಾಂಬಳೆ ಎಂಬವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Related posts