ಯಲಹಂಕ ಬಳಿ ಬೈಕ್ ದುರಂತ; ಮೂವರ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಯಲಹಂಕ ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಅಪಘಾತಕ್ಕೀಡಾಗಿ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಯಲಹಂಕದ ಜೆಕೆವಿಕೆ ಬಳಿ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಮಾಜ್ ಅಹಮ್ಮದ್ ಖಾನ್(17) ಹಾಗೂ ಸಯ್ಯದ್ ರಿಯಾಜ್ (22) ಹಾಗೂ ಮಹಮ್ಮದ್ ಆದಿ ಆಯಾನ್ (16) ಎಂದು ಗುರುತಿಸಲಾಗಿದೆ.

ಯುವಕರು ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು ಎನ್ನಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು ಬೈಕ್ ಛಿದ್ರವಾಗಿದೆ. ಬೈಕ್ ಸವಾರರ ತಲೆಗೆ ಬಲವಾದ ಏಟು ಬಿದ್ದಿದ್ದರಿನಾಗಿ ಯುವಕರು ಸಾವನ್ನಪ್ಪಿದ್ದಾರೆ. ಯಲಹಂಕ ಸಂಚಾರಿ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಹೀಲಿಂಗ್ ಅವಾಂತರದಿಂದಾಗಿ ಬೈಕ್’ಗಳು ಮುಖಾ ಮುಖಿ ಡಿಕ್ಕಿಯಾಗಿರಬಹುದೆಂಬ ಸಂಖ್ಯೆಯನ್ನು ವ್ಯಕ್ತಪಡಿಸಿದ್ದಾರೆ.

Related posts