ಶಿವಮೊಗ್ಗ: ರಾಜ್ಯ ಬಿಜೆಪಿ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿಢೀರ್ ವಿದ್ಯಮಾನವೊಂದರಲ್ಲಿ ಮಾಜಿ ಸಚಿವ, ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಮ್ಮ ಚುನಾವಣಾ ರಾಜಕೀಯ ನಿವೃತ್ತಿ ಕುರಿತಂತೆ ಬರೆದ ಪತ್ರದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.
‘ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸುತ್ತಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೂ ಪರಿಗಣಿಸಬಾರದಾಗಿ ವಿನಂತಿಸುತ್ತೇನೆ’ ಎಂದು ಈಶ್ವರಪ್ಪ ಅವರು ಜೆ.ಪಿ.ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.