ಮಡಿಕೇರಿ: ಬಿಜೆಪಿ ನಾಯಕರು ಮೃತದೇಹದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ಬಗ್ಗೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿರುವ ಎ.ಎಸ್. ಪೊನ್ನಣ್ಣ, ಬಿಜೆಪಿ ನಾಯಕರು ಮೃತದೇಹದ ಮೇಲೆ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಅವರು ಇಂದು ಮಾಡಿದ್ದು ಹಿಂದೂ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದಿದ್ದಾರೆ.
ಸೂಕ್ತ ತನಿಖೆಯ ಮೂಲಕ ಸತ್ಯ ಹೊರಬರುತ್ತದೆ. ಆದರೆ, ಬಿಜೆಪಿಗೆ ತನಿಖೆ ಮಾಡುವುದು ಬೇಕಿಲ್ಲ. ಅವರು ಈ ವಿಷಯದಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಿರಾಜಪೇಟೆ ಕಾಂಗ್ರೆಸ್ ಶಾಸಕರೂ ಆದ ಎ.ಎಸ್. ಪೊನ್ನಣ್ಣ ಪ್ರತಿಪಕ್ಷ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.