ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಜಾಬ್ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್ನಲ್ಲಿ ನಡೆದಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.
ಹಿಜಾಬ್ ಧರಿಸಿ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು ನಮಗೆ ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಎಂದು ಬೊಗಳೆ ಬಿಟ್ಟಿದ್ದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ಜನಿವಾರ ಧರಿಸಿದ್ದಾನೆ ಎಂಬ ಏಕೈಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದಿರುವ ಘಟನೆ ಬೀದರ್ನಲ್ಲಿ ನಡೆದಿದೆ.
ಸಿಎಂ @siddaramaiah ಅವರೆ,… pic.twitter.com/9dliDqSFNm
— BJP Karnataka (@BJP4Karnataka) April 18, 2025
ಬೀದರ್ ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ,ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ ವಿದ್ಯಾರ್ಥಿಯೊಬ್ಬನ ಇಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ ಎಂದವರು ಸಾಮಾಜಿಕ ಮಾಧ್ಯಮ ‘X’ ನಲ್ಲಿ ಬರೆದುಕೊಂಡಿದ್ದಾರೆ.
ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು. ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದವರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಹಿಂದೂ ವಿರೋಧಿ ಮಾನಸಿಕತೆ ಪ್ರದರ್ಶನ?
ಕುಂಕುಮ ಕೇಸರಿ ಕಂಡರೆ ದ್ವೇಷ ಕಾರುತ್ತಿದ್ದ ಸಿಎಂ ಸಿದ್ದರಾಮಯ್ಯ, ಈಗ ಜನಿವಾರದ ವಿರುದ್ಧ ಹಗೆತನ ಮೆರೆಯುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಮಾನಸಿಕತೆಯನ್ನ ಪ್ರದರ್ಶನ ಮಾಡಿದ್ದಾರೆ ಎಂದು ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ತೀರ್ಥಹಳ್ಳಿಯಲ್ಲಿ ಸಿಇಟಿ ಪರೀಕ್ಷೆ ವೇಳೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಬಲವಂತವಾಗಿ ಜನಿವಾರ ತೆಗೆಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರೆ, ಬೀದರ್ ನಲ್ಲಿ ಜನಿವಾರ ತೆಗೆಯಲೊಪ್ಪದ ವಿದ್ಯಾರ್ಥಿಯನ್ನು ಪರೀಕ್ಷೆಗೆ ಹಾಜರಾಗಲು ಬಿಡದೆ ವಿದ್ಯಾರ್ಥಿಯ ಭವಿಷ್ಯವನ್ನ ಈ ಹಿಂದೂ ವಿರೋಧಿ ಸರ್ಕಾರ ಕಾಂಗ್ರೆಸ್ ಹಾಳು ಮಾಡಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
ಬ್ರಾಹ್ಮಣ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಈ ಘಟನೆಗಳು ಅತ್ಯಂತ ಖಂಡನೀಯವಾಗಿದ್ದು, ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.
ಅಧಿಕಾರಿಗಳ ಅತಿರೇಕದ ವರ್ತನೆಯನ್ನು ಖಂಡಿಸಿರುವ ಬಿಜೆಪಿ ಶಾಸಕ ಯಶಪಾಲ್ ಸುವರ್ಣ, ಬೇರೆಯವರು ಅವರಿಗೆ ತಕ್ಕಂತೆ ಪರೀಕ್ಷೆ ಬರೆಯಲು ವಿಶೇಷ ಮುತುವರ್ಜಿ ತೋರುವ ಕಾಂಗ್ರೆಸ್ ಸರ್ಕಾರವು ಹಿಂದೂ ಸಮಾಜದಲ್ಲಿ ಅತ್ಯಂತ ಪಾವಿತ್ರ್ಯತೆ ಹೊಂದಿರುವ ಜನಿವಾರ, ಮಹಿಳಾ ವಿದ್ಯಾರ್ಥಿಗಳ ಮಂಗಳ ಸೂತ್ರವನ್ನು ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದೆ ಹಿಂದೂ ವಿರೋಧಿ ನಿಲುವು ಮುಂದುವರೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಯ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ: ಬಿಜೆಪಿ ಉಡುಪಿ ಶಾಸಕ ಶ್ರೀ ಯಶಪಾಲ್ ಸುವರ್ಣ ಆಕ್ರೋಶ.
ಬೇರೆಯವರು ಅವರಿಗೆ ತಕ್ಕಂತೆ ಪರೀಕ್ಷೆ ಬರೆಯಲು ವಿಶೇಷ ಮುತುವರ್ಜಿ ತೋರುವ ಕಾಂಗ್ರೆಸ್ ಸರ್ಕಾರವು ಹಿಂದೂ ಸಮಾಜದಲ್ಲಿ ಅತ್ಯಂತ ಪಾವಿತ್ರ್ಯತೆ ಹೊಂದಿರುವ… pic.twitter.com/P644uozA5y— Yashpal Anand Suvarna (@YashpalBJP) April 18, 2025